• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು- ದಿನೇಶ್ ಗುಂಡೂರಾವ್

|

ಬೆಂಗಳೂರು, ಆಗಸ್ಟ್ 7: 'ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು' ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

   ಗಾಣಗಪುರದ ದತ್ತನ ದರ್ಶನವೇ ಡಿಕೆ ಶಿವಕುಮಾರ್ ಗೆ ಮುಳುವಾಯ್ತಾ? | Oneindia Kannada

   ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು, ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದೆ. ಗುಡ್ಡಗಳು ಕುಸಿದಿದೆ. ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕರ್ನಾಟಕದ ಪ್ರಸ್ತುತ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಟ್ವಿಟ್ಟರ್ ಮೂಲಕ ಟೀಕಿಸಿದ್ದಾರೆ.

   ಅತಿವೃಷ್ಟಿ ಪರಿಸ್ಥಿತಿ ನಿರ್ವಹಿಸಲು ಸರ್ಕಾರಕ್ಕೆ ಸಲಹೆ ನೀಡಿದ ಎಚ್‌ಡಿಕೆ

   'ರಾಜ್ಯ ಸರ್ಕಾರ ಇತಿಹಾಸದಿಂದ ಪಾಠ ಕಲಿಯಬೇಕಿತ್ತು. ಕೇವಲ 1 ವರ್ಷದ ಹಿಂದೆ ಮಳೆ ಮಾಡಿದ ಅನಾಹುತ ಸರ್ಕಾರ ನಡೆಸುವವರ ಗಮನದಲ್ಲಿರಬೇಕಿತ್ತು. ಆದರೆ ರಾಜ್ಯದ ಜನರ ದುರಾಧೃಷ್ಟ, ಕೊರೊನಾ ಕಂಟಕದ ಮಧ್ಯೆಯೆ ಪ್ರವಾಹ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ' ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

   'ದುರಂತವೆಂದರೆ ಈಗ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು!!' ಎಂದು ಯಡಿಯೂರಪ್ಪ ಸರ್ಕಾರದ ವಿರುದ್ಧ ದೂರಿದ್ದಾರೆ.

   ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

   English summary
   Congress leader Dinesh Gundurao tweet that the state government is not capable of handling the flood situation.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X