ಮದುವೆ ಸಮಾರಂಭಗಳಿಗೆ ಷರತ್ತುಬದ್ಧ ಅನುಮತಿ; ರಾಜ್ಯ ಸರ್ಕಾರದ ಆದೇಶ

ಬೆಂಗಳೂರು, ಜೂನ್ 25: ಜೂನ್ 28ರ ಸೋಮವಾರದಿಂದ ಮದುವೆ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆದಿದ್ದು, ಮದುವೆ ಸಮಾರಂಭಗಳಿಗೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ.

ಈ ಸಂಬಂಧ ಕೆಲವು ಷರತ್ತುಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದನ್ವಯ ಜೂನ್ 28ರಿಂದ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ.

State Government Issues Order Permitting Marriages From June 28

ಮದುವೆ ನಡೆಸಲು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯುವುದರೊಂದಿಗೆ ಮದುವೆಯಲ್ಲಿ ಭಾಗಿಯಾಗುವವರು ಕಡ್ಡಾಯವಾಗಿ ಪಾಸ್ ಕಡ್ಡಾಯ ಹೊಂದಿರಬೇಕಾಗಿದೆ.

ಕಲ್ಯಾಣಮಂಟಪ, ಹೋಟೆಲ್, ಪಾರ್ಟಿ ಹಾಲ್, ರೆಸಾರ್ಟ್‌ಗಳಲ್ಲಿ ಮದುವೆ ಸಮಾರಂಭ ಅನುಮತಿ ನೀಡಿದ್ದು, 40 ಜನರು ಮಾತ್ರ ಭಾಗವಹಿಸಲು ಸೂಚಿಸಲಾಗಿದೆ.

ಜೂನ್ 21ರ ನಂತರ ರಾಜ್ಯ ಸರ್ಕಾರ ಲಾಕ್‌ಡೌನ್ ನಿಯಮಾವಳಿಗಳಲ್ಲಿ ಹಲವು ಸಡಿಲಿಕೆಗಳನ್ನು ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿದೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ಶನಿವಾರ ಮತ್ತು ಭಾನುವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ, ಹಾಲು, ಮಾಂಸ, ಪ್ರಾಣಿಗಳಿಗೆ ಆಹಾರ ಮತ್ತಿತರ ಅಗತ್ಯವಸ್ತುಗಳು ಮತ್ತು ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ.

Recommended Video

      Rohini Sindhuriಗೆ IPS ಅಧಿಕಾರಿ D Roopa ರಿಂದ ಪ್ರಶ್ನೆಗಳ ಸುರಿಮಳೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+