• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮತದಾನಕ್ಕೆ ಅ. 28 ರಂದು ರಜೆ ಕೊಡಲು ರಾಜ್ಯ ಸರ್ಕಾರದ ಆದೇಶ!

|

ಬೆಂಗಳೂರು, ಅ. 27: ನಾಳೆ (ಅ.28) ನಡೆಯಲಿರುವ ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಅರ್ಹ ಮತದಾರರಿಗೆ ಮತದಾನ ಮಾಡಲು ಅನಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಕೊಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರ ನಡೆಯಲಿರುವ ಚಿತ್ರದುರ್ಗ, ತುಮಕೂರು ಕೋಲಾರ, ಚಿಕ್ಕಬಳ್ಳಾಪುರ ಮತ್ತು ದಾವಣಗೇರೆ (ಚನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳನ್ನು ಹೊರತು ಪಡಿಸಿ) ಜಿಲ್ಲೆಗಳು. ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ನಡೆಯುವ ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು. ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು.

ವಿಧಾನ ಪರಿಷತ್ ಚುನಾವಣೆ; ಮತದಾನ ಮಾಡುವುದು ಹೇಗೆ?

   Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

   ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುವ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ಕೈಗಾರಿಕೆ, ಸಹಕಾರಿ ರಂಗದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ರಾಜ್ಯ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಮೊಹಮ್ಮದ್ ಮೊಮಿನ್ ರಾಜ್ಯಪಾಲರ ಆದೇಶಾನುಸಾರ ಸೂಚಿಸಿದ್ದಾರೆ.

   English summary
   The state government has ordered all eligible voters to be given special occasion leave to vote four constituencies of Legislative Council Elections, Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X