Government Employees: ರಾಜ್ಯ ಸರ್ಕಾರಿ ನೌಕರರಿಗೆ 15 ದಿನಗಳ ಗಳಿಕೆ ರಜೆ: ರಾಜ್ಯ ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರವು 2026ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 17.1.2025ರ ಸರ್ಕಾರಿ ಆದೇಶದಲ್ಲಿ 2025ನೇ ಸಾಲಿನ ಬ್ಲಾಕ್ ಅವಧಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31.12.2025 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2026 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನಗಳ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ. ಅದರಂತೆ ಈ ಆದೇಶಿಸಲಾಗಿದೆ.

2026 ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಸೌಲಭ್ಯವು ದಿನಾಂಕ:1.1.2026 ರಿಂದ 31.12.2026ರ ಅವಧಿಯವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ 15 ದಿನಗಳ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ.
ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು.
ಗೆಜೆಟೆಡ್ ಅಧಿಕಾರಿಗಳ ಗಳಿಕೆ ರಜೆ ನಗದೀಕರಣಕ್ಕೆ ಸಂಬಂಧಿಸಿದಂತೆ, 2026 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್‌ಆರ್‌ಎಂಎಸ್‌ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದು ತಿಳಿಸಿದ್ದಾರೆ.
ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 118 ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications