ಅನ್ನಭಾಗ್ಯ ಫಲಾನುಭವಿಗಳೇ ಗಮನಿಸಿ: ಇನ್ಮೇಲೆ 5 KG ಅಕ್ಕಿ ಬದಲಿಗೆ ಸರ್ಕಾರ ದುಡ್ಡು ಹಾಕಲ್ಲ
ಬೆಂಗಳೂರು, ಫೆಬ್ರವರಿ 19: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಮಹತ್ವದ ಯೋಜನೆಯಾಗಿದೆ. ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಇಂದು(ಬುಧವಾರ) ಗುಡ್ ನ್ಯೂಸ್ ನೀಡಿದ್ದು, ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ, ಕೆಲ ತಿಂಗಳಿನಿಂದ ಹಣವೂ ಬರುತ್ತಿಲ್ಲ ಎನ್ನುವ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರಿಂದ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ನಿರ್ಧರಿಸಲಾಗಿದ್ದು, ಫೆಬ್ರವರಿ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಒಂದು ವರ್ಷ ಅನ್ನಭಾಗ್ಯ ಫಲಾನುಭವಿಗಳಿಗೆ ಐದು ಕೆ ಜಿ ಅಕ್ಕಿಯ ಜೊತೆಗೆ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿತ್ತು. ಇದೀಗ ಕೆಲ ತಿಂಗಳಿನಿಂದ ನಿಗದಿತ ಸಮಯಕ್ಕೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಪಡಿತರದ ಅಕ್ಕಿ ಹಣ ಜಮಾ ಮಾಡುತ್ತಿಲ್ಲ. ಕೆಲವು ತಿಂಗಳು ತಾಂತ್ರಿಕತೆಯ ಸಮಸ್ಯೆ ನೆಪವೊಡ್ಡಿ ವಿಳಂಬ ಆಗಿದೆ. ಆದರೆ, ಇದೀಗ ಹಣದ ಬದಲಿಗೆ ಅಕ್ಕಿ ಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಹಣದ ಬದಲು ಅಕ್ಕಿ ವಿತರಿಸುವ ಸಾಧ್ಯತೆ ಇದೆ. ಅಕ್ಕಿ ಪಡೆಯಲು ಆಹಾರ ಇಲಾಖೆ ಪ್ರಯತ್ನಿಸಿದ್ದು, ಇದೇ ಕಾರಣಕ್ಕೆ ಹಣದ ವರ್ಗಾವಣೆ ಸ್ಥಗಿತವಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಅಕ್ಕಿ, ಹಣ ಎರಡು ಕೂಡ ಫಲಾನುಭವಿಗಳಿಗೆ ಸಿಗದೇ ತೊಂದರೆಯಾಗಿದೆ. ಇದನ್ನು ಮನಗಂಡು ಹೆಚ್ಚುವರಿ ಐದು ಕೆಜಿ ಅಕ್ಕಿಯನ್ನೇ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತು ಆಹಾರ ಸಚಿವ ಮುನಿಯಪ್ಪ ಅವರು ಮಾತನಾಡಿ, ನಾವು ಚುನಾವಣೆ ಮುಗಿದ ಬಳಿಕ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವು. ಆಗ ಅಕ್ಕಿ ಕೊಡಲು ಆಗುವುದಿಲ್ಲ ಅಂತ ಕೇಂದ್ರದವರು ಹೇಳಿದ್ದರು. ಹೀಗಾಗಿ ನಾವು ಐದು ಕೆಜಿ ಅಕ್ಕಿ, ಐದು ಕೆಜಿ ಅಕ್ಕಿಗೆ ಹಣ ಕೊಡುತ್ತಿದ್ದೇವು. ಈಗ ಕೇಂದ್ರ ಸಚಿವರು ಅಕ್ಕಿ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರ್ ವರೆಗೂ ಹಣ ನೀಡಿದ್ದೇವೆ, ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ. ಫೆಬ್ರುವರಿಯಿಂದ ನಾವು ಹತ್ತು ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
2013 ರಿಂದ ಈ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ನಾವು ನುಡಿದಂತೆ ನಡೆದಿದ್ದೇವೆ, ರಾಜ್ಯದ ಜನರಿಗೆ ಅಕ್ಕಿ, ಹಣ ಎರಡನ್ನೂ ಕೊಟ್ಟಿದ್ದೇವೆ. ನಮ್ಮ ಇಲಾಖೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ಸ್ಪಂದಿಸಿದ್ದಾರೆ, ನಮಗೆ ಬೇಕಾಗಿರುವ ಅಕ್ಕಿ ಕೊಡುವುದಕ್ಕೆ ಸರ್ಕಾರ ಆದೇಶ ಮಾಡಿದೆ ಎಂದು ಮುನಿಯಪ್ಪ ಅವರು ಹೇಳಿದರು.












Click it and Unblock the Notifications