HD Deve Gowda: ಜನವರಿ ಒಳಗೆ ರಾಜ್ಯ ಸರ್ಕಾರ ಪತನ: ಇದು ಭವಿಷ್ಯ ಅಲ್ಲ, ಸತ್ಯ ಎಂದ ಹೆಚ್.ಡಿ.ದೇವೇಗೌಡ

ರಾಮನಗರ, ನವೆಂಬರ್‌ 11: ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಅವರು ಭವಿಷ್ಯ ಹೇಳಿಲ್ಲ, ವಾಸ್ತವ ನುಡಿದ್ದಾರೆ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು.

ಚನ್ನಪಟ್ಟಣದಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಡಿಸಿಎಂ ಡಿಕೆಶಿ ಸೊಕ್ಕು ಮುರಿಯಲು ಚನ್ನಪಟ್ಟಣದ ಮಹಾಜನತೆ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಬೇಕು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ಹಾಸನದ ಪ್ರಕರಣವನ್ನು ಬಳಸಿಕೊಂಡು, ಇಡೀ ದೇವೇಗೌಡರ ಕುಟುಂಬ ಮುಗಿಸಲು ಹುನ್ನಾರ ನಡೆದಿತ್ತು.

State Government To Fall By January Says HD Deve Gowda

ಜನವರಿಯೊಳಗೆ ರಾಜ್ಯ ಸರಕಾರ ಬೀಳಲಿದೆ ಎಂದು ವಿ.ಸೋಮಣ್ಣ ಅವರು ಹೇಳಿದ ಬಗ್ಗೆ ಪ್ರತಿಕ್ರಿಯಿಸಿದ ಅವರು; ನನ್ನಂತೆಯೇ ಸೋಮಣ್ಣ ಅವರಿಗೂ ಜೋತಿಷ್ಯ ಕೇಳುವ ಅಭ್ಯಾಸ ಇರುವುದೇ ಸೋಜಿಗ, ಆದರೆ ಅವರು ಸತ್ಯವನ್ನೇ ಹೇಳಿದ್ದಾರೆ. ಈ ಸರಕಾರ ಬಹಳ ದಿನ ಇರುವುದಿಲ್ಲ ಎಂದು ಹೇಳಿದರು. ಒಂದು ಕಾಲದಲ್ಲಿ ನಾನು ಮತ್ತು ಯಡಿಯೂರಪ್ಪ ಕಿತ್ತಾಡಿದ್ದೆವು. ಆದರೆ, ನಾವಿಬ್ಬರು ಈಗ ಒಂದಾಗಿರುವುದೇ ಈ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೆಸೆಯಲು ಎಂದು ಅವರು ಯಡಿಯೂರಪ್ಪ ಅವರ ಕೈ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಅವರ ಮಾತುಗಳೇ ಮುಳುವಾಗಲಿದೆ ಎಂದು ವಾಗ್ದಾಳಿ ನಡೆಸಿದರು.

ತಮ್ಮ ಮಗನನ್ನು ಚುನಾವಣೆಗೆ ನಿಲ್ಲಿಸಲು ₹50 ಕೋಟಿ ಹಣಕ್ಕಾಗಿ ಮಹಾನುಭಾವನೊಬ್ಬನಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಿ ಸ್ಥಾನದಲ್ಲಿ ಕುಮಾರಸ್ವಾಮಿ ಇದ್ದಾರೆ. ಆದರೆ, ಇದೇ ಚನ್ನಪಟ್ಟಣದ ಮಹಾಜನತೆಯಿಂದಲೇ ಸಿಎಂ ಆಗಿದ್ದ ಕುಮಾರಸ್ವಾಮಿಗೆ ಅಂತಹ ಅನಿವಾರ‌್ಯತೆಯೇ ಇಲ್ಲ. ಕಾಂಗ್ರೆಸ್ ಎಂದಿಗೂ ನಂಬಿಕೆಗೆ ಅರ್ಹರಲ್ಲ ಎಂದು ಅವರ ಜತೆ ಸಹವಾಸವೇ ಬೇಡ ಎಂದು ಕುಮಾರಸ್ವಾಮಿಗೇ ಹೇಳಿದ್ದೆ. ಆದರೆ, ಎಚ್‌ಡಿಕೆ ಮೇಲೆ ಒತ್ತಡ ಹಾಕಿ, ಅವರೊಂದಿಗೆ ಕಾಂಗ್ರೆಸ್ ಸರಕಾರ ರಚಿಸಲಾಗಿತ್ತುಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ್ರು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಅವರ ನಮ್ಮ ಅಭ್ಯರ್ಥಿ ಎಂದು 11 ದಿನದ ಹಿಂದೆ ಯಾರು ಹೇಳಿರಲಿಲ್ಲ. ಆದರೆ, 6 ತಿಂಗಳಿನಿಂದ ನಾನೇ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದ ಡಿ.ಕೆ.ಶಿವಕುಮಾರ್‌ಗೆ ಈಗ ಏನಾಗಿದೆ? ಅವರ ಬದಲು ಮತ್ತೊಬ್ಬರು ಅಖಾಡದಲ್ಲಿದ್ದಾರೆ ಎಂದು ದೇವೇಗೌಡ್ರು ತಿರುಗೇಟು ಕೊಟ್ಟರು.

ಸಿದ್ದರಾಮಯ್ಯ ಅವರನ್ನು ಹಣಕಾಸು ಸಚಿವರನ್ನಾಗಿ ಮಾಡಿದ್ದೆ ಈ ದೇವೇಗೌಡ. ಮತ್ತೆ ಅವರೇನು ಮಾ ಎಂದು ಹೇಳಲು ನಾನು ಹೋಗಲ್ಲ. ನಿಖಿಲ್ ನನ್ನ ಮೊಮ್ಮಗ ಎನ್ನುವ ಮಾತು ಬೇಕಿಲ್ಲ. ನಾಮಪತ್ರ ಸಲ್ಲಿಸುವವರೆಗೂ ನಿಖಿಲ್ ಹೆಸರನ್ನು ನಾನು ಉಲ್ಲೇಖಿಸಲೇ ಇಲ್ಲ. ಮಹಾನುಭಾವ ಎನ್ನುವ ಡಿಕೆಶಿಯ ಸೊಕ್ಕು ಮುರಿಯಲು ನಿಖಿಲ್ ಗೆಲುವು ಅನಿವಾರ‌್ಯ. ಪುಣ್ಯಾತ್ಮರಾದ ಮತದಾರರ ನಿರ್ಣಯವೇ ಎಲ್ಲದಕ್ಕೂ ಉತ್ತರ ನೀಡಲಿದೆ. ನಾನು ಮತ್ತೆ ಕ್ಷೇತ್ರಕ್ಕೆ ಬರುತ್ತೆನೆ. ಕ್ರಮ ಸಂಖ್ಯೆ 1ಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ. ಇದೇ ತಿಂಗಳ 24ರ ಬೆಳಗ್ಗೆ ನಾನು ಹಾಗೂ ಯಡಿಯೂರಪ್ಪ ಅವರು ಒಟ್ಟಿಗೆ ಬಂದು ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೆವೆ ಎಂದು ದೇವೇಗೌಡರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+