ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ಮುಗಿಯುತ್ತಲೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

|
Google Oneindia Kannada News

ಬೆಂಗಳೂರು, ಮೇ 31: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರವು 17 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಲೋಕಸಭೆ ಚುನಾವಣೆ ಮುಗಿಯಲೆಂದೇ ಕಾಯುತ್ತಿದ್ದ ಸರ್ಕಾರವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಹಲವು ಅಧಿಕಾರಿಗಳು ಇಲಾಖೆಯಿಂದ ಇಲಾಖೆಗೆ ಬದಲಾವಣೆಗೊಂಡಿದ್ದಾರೆ.

ಎಸಿ ಕಾರು ಬಿಟ್ಟು ಬಸ್ ಏರಿ ಕಚೇರಿಗೆ ಬಂದ ಉಡುಪಿ ಜಿಲ್ಲಾಧಿಕಾರಿ ಎಸಿ ಕಾರು ಬಿಟ್ಟು ಬಸ್ ಏರಿ ಕಚೇರಿಗೆ ಬಂದ ಉಡುಪಿ ಜಿಲ್ಲಾಧಿಕಾರಿ

ಬೆಳಗಾವಿ ವಿಭಾಗದ ಪ್ರಾದೇಶೀಕ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ಬೆಂಗಳೂರಿನ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿತ ಚೇರ್‌ಮನ್ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

State government transfers 17 IAS officers to different positions

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಟಿ.ಕೆ.ಅನಿಲ್ ಕುಮಾರ್ ಅವರನ್ನು ಪ್ರಾವಾಸೋದ್ಯಮ ಇಲಾಖೆ ಕಾರ್ಯದರ್ಶಿ ಯಾಗಿ ನೇಮಿಸಲಾಗಿದೆ.

ಮಂಡ್ಯ ಜಿಲ್ಲೆಯ ಆಯುಕ್ತರಾಗಿದ್ದ ಜಾಫರ್ ಅವರನ್ನು ಸಾರ್ವಜನಿಕ ಸೂಚನಾ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗ ಮಾಡಲಾಗಿದೆ.

ಮೊಹ್ಮದ್ ಮೊಯ್ಸಿನ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಆಯೋಗಮೊಹ್ಮದ್ ಮೊಯ್ಸಿನ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಆಯೋಗ

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಶಿವಯೋಗಿ ಕಳಸದ್ ಅವರನ್ನು ಈ ಹುದ್ದೆಯ ಜೊತೆಗೆ ಕೆಎಸ್‌ಆರ್‌ಟಿಸಿ ಅವರನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಬೆಳಗಾವಿ ಜಿಲ್ಲಾಧಿಕಾರಿ ಆಗಿದ್ದ ಆರ್.ವಿಶಾಲ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯ ಆಯುಕ್ತ ಸ್ಥಾನಕ್ಕೆ ವರ್ಗ ಮಾಡಲಾಗಿದೆ.

ಬಿಬಿಎಂಪಿಯ ಹೆಚ್ಚುವರಿ ಆಯುಕ್ತರಾಗಿದ್ದ ಎಂ.ಲೋಕೇಶ್ ಅವರನ್ನು ಬಿಬಿಎಂಪಿಯ ಕಂದಾಯ ಮತ್ತು ಹಣಕಾಸು ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಮೋದಿ ಹೆಲಿಕಾಪ್ಟರ್ ತಪಾಸಣೆ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅಮಾನತಿಗೆ ತಡೆಮೋದಿ ಹೆಲಿಕಾಪ್ಟರ್ ತಪಾಸಣೆ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅಮಾನತಿಗೆ ತಡೆ

ಬಿಬಿಎಂಪಿಯ ಕಂದಾಯ ಮತ್ತು ಹಣಕಾಸು ವಿಭಾಗದ ವಿಶೇಷ ಆಯುಕ್ತರಾಗಿದ್ದ ರಣದೀಪ್ ಅವರನ್ನು ಬಿಬಿಎಂಪಿಯ ಹೆಚ್ಚುವರಿ ಆಯುಕ್ತ ಸ್ಥಾನಕ್ಕೆ ವರ್ಗ ಮಾಡಲಾಗಿದೆ.

ಬೆಂಗಳೂರು ದಕ್ಷಿಣ ಬಿಬಿಎಂಪಿ ಹೆಚ್ಚುವರಿ ಆಯುಕ್ತರಾಗಿದ್ದ ಎಸ್.ಎಸ್.ನಕುಲ್ ಅವರನ್ನು ಜೀವ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ವಿಜಯಪುರ ಜಿಲ್ಲೆ ಡಿಸಿ ಆಗಿದ್ದ ಕನಗವಲ್ಲಿ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರನ್ನಾಗಿ ಮಾಡಲಾಗಿದೆ.

ಮಂಜುಶ್ರೀ ಎನ್. ಅವರನ್ನು ಮಂಡ್ಯದ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಚುನಾವಣೆಗೆ ಮುನ್ನಾ ಮಂಜುಶ್ರೀ ಅವರು ಮಂಡ್ಯದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದರು. ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿವಾದವಾದ ನಂತರ ಅವರನ್ನು ಆಯೋಗವು ಬೇರೆಡೆ ವರ್ಗ ಮಾಡಿತ್ತು.

ಅಲ್ಪಸಂಖ್ಯಾತ ಬೋರ್ಡ್ ನಿರ್ದೇಶಕರಾಗಿದ್ದ ಎಸ್.ಬಿ.ಬೊಮ್ಮನಹಳ್ಳಿ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದ ಅವಿನಾಶ್ ಮೆನನ್ ರಾಜೇಂದ್ರ ಅವರನ್ನು ವಾಣಿಜ್ಯ ತೆರಿಗೆಯ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತ ಸ್ಥಾನಕ್ಕೆ ನೇಮಿಸಲಾಗಿದೆ.

ನೆಲಮಂಗಲ-ಕುಣಿಗಲ್‌ನ ವಿಶೇಷ ಭೂ ಒತ್ತುವರಿ ಅಧಿಕಾರಿ ಆಗಿದ್ದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರನ್ನು ವೈಯಕ್ತಿಕ ಮತ್ತು ಆಡಳಿತ ಸುಧಾರಣೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕರಾಗಿದ್ದ ಯಲಗೌಡ ಶಿವನಗೌಡ ಪಾಟೀಲ್ ಅವರನ್ನು ವಿಜಯಪುರ ಜಿಲ್ಲೆ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಅಬಕಾರಿ ಇಲಾಖೆ ಆಯುಕ್ತರಾಗಿದ್ದ ಯಶವಂತ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಬಾಗಲಕೋಟೆ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಒತ್ತುವರಿ, ಪುನರ್‌ವಸತಿ ವಿಶೇಷ ಅಧಿಕಾರಿಯಾಗಿದ್ದ ಪಿ.ಎ.ಮೇಗನ್ನವರ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

English summary
The state government ordered to transfer IAS officers to different departments soon after the Lok Sabha elections 2019 over.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X