ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಲ್‌ಡಿ , ಅಪೆಕ್ಸ್‌ ಬ್ಯಾಂಕಿನಲ್ಲಿರುವ ರೈತರ ಸಾಲ ಬಡ್ಡಿ ಮನ್ನಾ?

|
Google Oneindia Kannada News

ಬೆಂಗಳೂರು, ಫೆಬ್ರವರಿ 5: ಪಿಎಲ್‌ಡಿ, ಅಪೆಕ್ಸ್‌ ಬ್ಯಾಂಕಿನ ರೈತರ ಸಾಲ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ರೈತರಿಗೆ ಸಂತಸದ ಸುದ್ದಿ ನೀಡಿದ್ದು, ಪಿಎಲ್‌ಡಿ ಮತ್ತು ಅಪೆಕ್ಸ್‌ ಬ್ಯಾಂಕಿನಲ್ಲಿನ 466 ಕೋಟಿ ರೂ. ಬಡ್ಡಿ ಮನ್ನಾ ಮಡುವ ಮಹತ್ವದ ತೀರ್ಮಾನ ಕೈಗೊಂಡಿದೆ.

 ಚೀನಾದಲ್ಲಿ ಕೊರೊನಾ ವೈರಸ್: ಬಳ್ಳಾರಿ ಕೆಂಪು ಮೆಣಸಿನಕಾಯಿ ಮೇಲೆ ಭಾರೀ ಎಫೆಕ್ಟ್ ಚೀನಾದಲ್ಲಿ ಕೊರೊನಾ ವೈರಸ್: ಬಳ್ಳಾರಿ ಕೆಂಪು ಮೆಣಸಿನಕಾಯಿ ಮೇಲೆ ಭಾರೀ ಎಫೆಕ್ಟ್

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಎಲ್ಲಾ ಸಹಕಾರಿ, ವಾಣಿಜ್ಯ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದು, ಪಿಎಲ್‌ಡಿ ಮತ್ತು ಅಪೆಕ್ಸ್ ಬ್ಯಾಂಕ್‌ನಲ್ಲಿನ ರೈತರ ಸಾಲದ ಬಡ್ಡಿ ಮನ್ನಾ ಮಾಡಿರಲಿಲ್ಲ. ಈಗ ಬಿಜೆಪಿ ಸರ್ಕಾರವು ಪಿಎಲ್‌ಡಿ ಮತ್ತು ಅಪೆಕ್ಸ್ ಬ್ಯಾಂಕ್ ನಲ್ಲಿನ 466 ಕೋಟಿ ರೂ. ಬಡ್ಡಿ ಮನ್ನಾ ಮಾಡಿದೆ.

State Government Waive The Loan Interest Of PLD and Apex Bank Farmers

ರೈತರ ಸಾಲ ವಸೂಲು ಮಾಡುವುದನ್ನು ನಿಲ್ಲಿಸಿದ ಬಳಿಕ ನಬಾರ್ಡ್ ನವರು ಯಾವ ರೀತಿ ಸಾಲ ಪಾವತಿ ಮಾಡಲಾಗುತ್ತದೆ ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕಾಗಿ 466 ಕೋಟಿ ರೂ. ಬಡ್ಡಿ ಮನ್ನಾ ಮಾಡಲಾಗಿದೆ.

ಮಾರ್ಚ್ ತಿಂಗಳೊಳಗೆ ಯಾರು ಅಸಲು ಪಾವತಿ ಮಾಡುವರೋ ಅಂತಹವರ ಬಡ್ಡಿ ಮತ್ತು ಸುಸ್ತಿ ಬಡ್ಡಿ ಮನ್ನಾ ಮಾಡಲಾಗುವುದು. ಮುಂದಿನ ವರ್ಷ 500 ಕೋಟಿ ರೂ. ಸಾಲ ನೀಡಲು ಸಾಧ್ಯವಿದೆ. ನಬಾರ್ಡ್ ಗೆ ರಾಜ್ಯ ಸರ್ಕಾರವು ಗ್ಯಾರಂಟಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಿಎಲ್‌ಡಿ ಮತ್ತು ಅಪೆಕ್ಸ್ ಬ್ಯಾಂಕ್‌ನಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಯನ್ನು ಮನ್ನಾ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

English summary
The state government has decided to waive the loan interest of PLD and Apex Bank farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X