MySugar Factory: ಮೈಶುಗರ್ ಬಾಕಿ ವಿದ್ಯುತ್ ಬಿಲ್ 52.25 ಕೋಟಿ ರೂ. ಮನ್ನಾ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು, ಡಿಸೆಂಬರ್‌ 15: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸುವರ್ಣಸೌಧದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯಿಸಿದೆ. ಹೀಗಾಗಿ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಸಮಸ್ಯೆ ನಿವಾರಣೆ ಆಗಿದೆ.

State government waives off MySugar s pending electricity bill of Rs 52 25 crore

ಆರ್ಥಿಕವಾಗಿ ತೊಂದರೆಯಲ್ಲಿದ್ದ ಸರಕಾರಿ ಸ್ವಾಮ್ಯದ ಈ ಕಾರ್ಖಾನೆಯನ್ನು ಉಳಿಸಿ, ರೈತರು ಬೆಳೆದಿರುವ ಕಬ್ಬು ನುರಿಸುವ ಕಾರ್ಯ ಆರಂಭಿಸಲು ಸಾಧ್ಯವಾಗುವಂತೆ ಚಾಮುಂಡೇಶ್ವರಿ ವಿದ್ಯುತ್ ಕಂಪನಿಗೆ ವಿದ್ಯುತ್ ಬಾಕಿ ಪಾವತಿಸಲು ನೆರವಾಗುವಂತೆ ಕಳೆದ ಜುಲೈ 5 ರಂದು ದಿನೇಶ್ ಗೂಳಿಗೌಡರು ಸಿಎಂ ಸಿದ್ದರಾಮಯ್ಯ ಅವರಿಗೆ ಖುದ್ದಾಗಿ ಮನವಿ ಸಲ್ಲಿಸಿದ್ದರು. ತಮ್ಮ ಮನವಿಗೆ ಸ್ಪಂದಿಸಿ, ಮೈಶುಗರ್ ಕಾರ್ಖಾನೆಗೆ ನೆರವಾಗಿದ್ದಕ್ಕಾಗಿ ಗೂಳಿಗೌಡರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯಗೆ ನೀಡಿದ ಮನವಿ ಪತ್ರದಲ್ಲಿ ಏನಿದೆ?

ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್ ಫ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾದ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, 1932 ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮ್ಮೆಯಾಗಿದೆ. ಆದರೆ, ಇದೀಗ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿದೆ ತೀವು ಸಂಕಷ್ಟಕ್ಕೆ ಗುರಿಯಾಗಿದೆ. ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರದು ಬಾಕಿ ಇರುವ ವಿದ್ಯುತ್ ಬಿಲ್ 52.25 ಕೋಟಿ ರೂಪಾಯಿಯನ್ನು ಮನ್ನಾ ಮಾಡಬೇಕೆಂದು ಈ ಮೂಲಕ ಕೋರುವೆ.

ಹಲವು ವರ್ಷಗಳಿಂದ ಹಲವಾರು ಕಾರಣಗಳಿಂದಾಗಿ ಬಂದ್ ಆಗಿದ್ದ ಸಕ್ಕರೆ ಕಾರ್ಖಾನೆಯ ಕಳೆದ ವರ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿತು. ರಾಜ್ಯ ಸರ್ಕಾರ ಕಾರ್ಖಾನೆ ಪ್ರಾರಂಭೋತ್ಸವ, ಹಾಗೂ ಗ್ಯಾಂಗ್ ಗಳಿಗೆ ನೀಡಲು 15 ಕೋಟಿ ರೂ. ದುಡಿಯುವ ಬಂಡವಾಳಕ್ಕಾಗಿ (ವರ್ಕಿಂಗ್ ಕ್ಯಾಪಿಟಲ್) 35 ಕೋಟಿ ರೂ.ಸೇರಿ ಒಟ್ಟಾರೆ 50 ಕೋಟಿ ರೂ.ಗಳನ್ನು ಕಾರ್ಖಾನೆಯ ಪುನಶ್ನೆತನಕ್ಕೆ ನೀಡಲಾಗಿದೆ.

ಪರಿಣಾಮ ಕಳೆದ ವರ್ಷ ಕಾರ್ಖಾನೆಯು ಮಂಡ್ಯದ ರೈತರು ಬೆಳೆದ 2 ಲಕ್ಷ 41 ಸಾವಿರ ಟನ್ ಕಬ್ಬನ್ನು ನುರಿಸಲಾಗಿತ್ತು. ರೈತರಿಗೆ ಕಬ್ಬಿನ ಹಣ ಪಾವತಿಯಾಗಿದೆ. ಕಾರ್ಖಾನೆಯಿಂದ ರೈತರಿಗೆ ತುಂಬಾ ಅನುಕೂಲವಾಗುತ್ತಿದೆ. ಈ ವರ್ಷ ಕನಿಷ್ಠ 2 ಲಕ್ಷ 5 ಸಾವಿರ ಟನ್ ಕಬ್ಬನ್ನು ನುರಿಸುವ ಸಂಬಂಧ ರೈತರು ಒಪ್ಪಂದವನ್ನು ಮಾಡಿಕೊಂಡಿದ್ದಾರೆ.

ಆದರೆ, ಕಾರ್ಖಾನೆ ಕೆಲವು ಅನಿವಾರ್ಯ ಕಾರಣಗಳಿಂದ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇರುವ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕಾರ್ಖಾನೆಗೆ ನೋಟಿಸ್ ನೀಡಿದೆ. 7 ದಿನಗಳಲ್ಲಿ ವಿದ್ಯುತ್ ಪಾವತಿ ಮಾಡುವಂತೆ ಜೂನ್ 3 ರಂದೇ ನೀಡಿದ ನೋಟಿಸ್ ನಲ್ಲಿ ತಿಳಿಸಲಾಗಿದೆ. ಆದರೆ, ಕಾರ್ಖಾನೆಯ ಆರ್ಥಿಕ ಪರಿಸ್ಥಿತಿ ಸಮರ್ಪಕವಾಗಿಲ್ಲ. ಕೋಟ್ಯಂತರ ರೂಪಾಯಿ ನಷ್ಟದಲ್ಲಿದೆ. ಅಷ್ಟೊಂದು ಹಣವನ್ನು ವಿದ್ಯುತ್ ಬಿಲ್ ಗೆ ಪಾವತಿಸಿದರೆ, ಈ ಹಂಗಾಮಿನಲ್ಲಿ ಕಬ್ಬು ನುರಿಸುವುದೇ ಕಷ್ಟವಾಗಬಹುದು. ಇದರಿಂದ ಈಗಾಗಲೇ ಕಾರ್ಖಾನೆ ನಂಬಿ ಕಬ್ಬು ಬೆಳೆದಿರುವ ರೈತರಿಗೆ ನಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಂಡು ವಿದ್ಯುತ್ ಬಿಲ್‌ ಮನ್ನಾ ಮಾಡಬೇಕು ಎಂದು ಮಂಡ್ಯದ ರೈತರ ಪರವಾಗಿ ಈ ಮೂಲಕ ಮನವಿ ಮಾಡುತ್ತೇನೆ ಎಂದು ಮನವಿ ಪತ್ರದಲ್ಲಿ ಶಾಸಕರಾದ ದಿನೇಶ್‌ ಗೂಳಿಗೌಡ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+