ಕರ್ನಾಟಕದಲ್ಲಿ 7,660 ಕೋಟಿ ರೂ. ಬಂಡವಾಳ ಹೂಡಿಕೆಗೆ ಸರ್ಕಾರ ಒಪ್ಪಿಗೆ

ಬೆಂಗಳೂರು, ಸೆಪ್ಟಂಬರ್ 17: ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವ ನಮ್ಮ ಸರ್ಕಾರ 91 ಯೋಜನೆಗಳ ಅಡಿಯಲ್ಲಿ ಒಟ್ಟು 7,660 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ತಿಳಿಸಿದೆ.

ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಸಚಿವ ಎಂಬಿ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಯ 140ನೇ ಸಭೆಯಲ್ಲಿ ಸಾವಿರಾರು ಕೋಟಿ ರೂ. ಹೂಡಿಕೆಗೆ ಅನುಮೋದನೆ ನೀಡಲಾಯಿತು. ಯೋಜನೆಗಳಿಂದ ಸುಮಾರು 18,146 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ ಎಂದರು.

govt-agreed-to-7-660-crore-investment

ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹೂಡಿಕೆಯ 25 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದೆ. ಇವುಗಳಿಂದ 5,750.73 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಗಲಿದೆ. ಸುಮಾರು 13,742 ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ.

ಒಟ್ಟು 15 ಕೋಟಿ ರೂಪಾಯಿಯಿಂದ 50 ಕೋಟಿ ರೂಪಾಯಿಯೊಳಗಿನ ಬಂಡವಾಳ ಹೂಡಿಕೆಯ 57 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 1,145 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಗಲಿದೆ. ಅಂದಾಜು 4,404 ಜನರಿಗೆ ಉದ್ಯೋಗ ದೊರೆಯಲಿದೆ. ಇದಲ್ಲದೇ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ ₹763.85 ಕೋಟಿ ಬಂಡವಾಳ ಹೂಡಿಕೆ ಮುಂದಿನ ದಿನಗಳಲ್ಲಿ ಆಗಲಿದೆ.

ಅನುಮೋದನೆ ಪಡೆದ ಪ್ರಸ್ತಾವನೆಗಳು ಯಾವವು?

* ಸಂಸ್ಥೆ: ದೇವಶ್ರೀ ಇಸ್ಪಾತ್ ಪೈವೇಟ್ ಲಿಮಿಟೆಡ್

ಸ್ಥಳ: ಹಳವರ್ತಿ ಗ್ರಾಮ, ಕೊಪ್ಪಳ ಜಿಲ್ಲೆ

ಹೂಡಿಕೆ: ₹470 ಕೋಟಿ

ಉದ್ಯೋಗ ಸೃಷ್ಟಿ: 800

* ಸಂಸ್ಥೆ: ಏಕಸ್ ಕನ್ಸೂಮರ್ ಪ್ರಾಡಕ್ಟಸ್ ಪೈವೇಟ್ ಲಿಮಿಟೆಡ್

ಸ್ಥಳ: ಇತ್ತಿಗಟ್ಟಿ ಗ್ರಾಮ, ಧಾರವಾಡ ಜಿಲ್ಲೆ

ಹೂಡಿಕೆ ₹456 ಕೋಟಿ

ಉದ್ಯೋಗ ಸೃಷ್ಟಿ: 1,187

*. ಸಂಸ್ಥೆ: ಇಂಟಿಗ್ರೇಟೆಡ್ ಸೋಲಾರ್ ಪವರ್ ಪೈವೇಟ್ ಲಿಮಿಟೆಡ್

ಸ್ಥಳ: ಮಿಂಡಹಳ್ಳಿ ಗ್ರಾಮ, ಕೋಲಾರ ಜಿಲ್ಲೆ

ಹೂಡಿಕೆ: ₹441.08 ಕೋಟಿ

ಉದ್ಯೋಗ ಸೃಷ್ಟಿ: 720

* ಸಂಸ್ಥೆ: ಪ್ರತಿಭಾ ಪಾಟೀಲ್ ಶುಗರ್ ಇಂಡಸ್ಟ್ರೀಸ್ ಪೈವೇಟ್ ಲಿಮಿಟೆಡ್

ಸ್ಥಳ: ಕಣ್ಣೂರ್ ಗ್ರಾಮ, ವಿಜಯಪುರ ತಾಲೂಕು, ವಿಜಯಪುರ ಜಿಲ್ಲೆ

ಹೂಡಿಕೆ: ₹489.50 ಕೋಟಿ

ಉದ್ಯೋಗ ಸೃಷ್ಟಿ: 275

* ಸಂಸ್ಥೆ: ಗುರುದೇವ್ ರಿಫೈನರಿಸ್ & ಅಲೈಡ್ ಇಂಡಸ್ಟ್ರೀಸ್

ಸ್ಥಳ: ತಡವಳಗ ಪೋಸ್ಟ್, ವಿಜಯಪುರ ಜಿಲ್ಲೆ

ಹೂಡಿಕೆ: ₹488.49 ಕೋಟಿ

ಉದ್ಯೋಗ ಸೃಷ್ಟಿ: 255

* ಸಂಸ್ಥೆ: ಸೌತ್ ವೆಸ್ಟ್ ಮೈನಿಂಗ್ ಲಿಮಿಟೆಡ್

ಸ್ಥಳ: ಮೂಸಿನಾಯಕನ ಹಳ್ಳಿ ಗ್ರಾಮ, ಬಳ್ಳಾರಿ ಜಿಲ್ಲೆ

ಹೂಡಿಕೆ: ₹411 ಕೋಟಿ

ಉದ್ಯೋಗ: 65

govt-agreed-to-7-660-crore-investment

* ಸಂಸ್ಥೆ: ಶಶಿ ಅಲೊಯ್ಸ್ ಪೈವೇಟ್ ಲಿಮಿಟೆಡ್

ಸ್ಥಳ: ಭೈರನಾಯಕನಹಳ್ಳಿ ಗ್ರಾಮ, ಚಲ್ಲಕೆರೆ ತಾಲೂಕು, ಚಿತ್ರದುರ್ಗ

ಹೂಡಿಕೆ: ₹380 ಕೋಟಿ

ಉದ್ಯೋಗ ಸೃಷ್ಟಿ: 400

* ಸಂಸ್ಥೆ: ಎಸ್ ಎಫ್ ಎಸ್ ಗ್ರೂಪ್ ಇಂಡಿಯಾ ಪೈವೇಟ್ ಲಿಮಿಟೆಡ್

ಸ್ಥಳ: ಬೆಳಗಾವಿ ಜಿಲ್ಲೆ

ಹೂಡಿಕೆ: ₹ 250 ಕೋಟಿ

ಉದ್ಯೋಗ ಸೃಷ್ಟಿ: 844

* ಸಂಸ್ಥೆ: ಮೈಸೂರ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್

ಸ್ಥಳ: ರಾಯಚೂರು ಜಿಲ್ಲೆ

ಹೂಡಿಕೆ: ₹240 ಕೋಟಿ

ಉದ್ಯೋಗ ಸೃಷ್ಟಿ: 157

* ಸಂಸ್ಥೆ: ಲಾಮ್ ರಿಸರ್ಚ್ ಇಂಡಿಯಾ ಪೈವೇಟ್ ಲಿಮಿಟೆಡ್

ಸ್ಥಳ: ಬೆಂಗಳೂರು

ಹೂಡಿಕೆ: ₹235.91 ಕೋಟಿ

ಉದ್ಯೋಗ ಸೃಷ್ಟಿ: 1,724

* ಸಂಸ್ಥೆ: ಟಾಟಾ ಸೆಮಿಕಂಡೆಕ್ಟರ್ ಅಸೆಂಬ್ಲಿ ಅಂಡ್ ಟೆಸ್ಟ್ ಪೈವೇಟ್ ಲಿಮಿಟೆಡ್

ಸ್ಥಳ: ಕೊಲಾರ ಜಿಲ್ಲೆ

ಹೂಡಿಕೆ: ₹200 ಕೋಟಿ

ಉದ್ಯೋಗ ಸೃಷ್ಟಿ: 155

* ಸಂಸ್ಥೆ: ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್

ಸ್ಥಳ: ಬೆಂಗಳೂರು ಗ್ರಾಮಾಂತರ ಜಿಲ್ಲೆ

ಹೂಡಿಕೆ: ₹137 ಕೋಟಿ

ಉದ್ಯೋಗ ಸೃಷ್ಟಿ: 1,908

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ . ಎಂ. ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ಎಚ್. ವಿ. ದರ್ಶನ್ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+