ಬೆಂಗಳೂರು, ಏಪ್ರಿಲ್ 14: ಈ ವರ್ಷದ ಬೇಸಿಗೆಯ ಏಪ್ರಿಲ್‌ನಿಂದ ಜೂನ್ ತಿಂಗಳ ಅವಧಿಯಲ್ಲಿ ದೇಶಾದ್ಯಂತ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲೂ ಬಿಸಿಗಾಳಿ ಎದುರಿಸಲು ಹಲವಾರು ಮುಂಜಾಗ್ರತಾ ಕ್ರಮಗಳನ್ನು ರೂಪಿಸಿದೆ.
ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಬೇಸಿಗೆ ವೇಳೆ ಸಾಮಾನ್ಯ ಉಷ್ಣಾಂಶಕ್ಕಿಂತ 0.5 ಡಿಗ್ರಿ ಸೆಲ್ಸಿಯಸ್‌ನಿಂದ 1 ಡಿ.ಸೆ.ನಷ್ಟು ಹೆಚ್ಚುವರಿ ಉಷ್ಣಾಂಶ ಉಂಟಾಗಲಿದೆ ಎಂದು ಹೇಳಲಾಗಿದೆ.
ಉತ್ತರ ಕರ್ನಾಟಕ: ಬಿಸಿಲಿನ ಝಳ, ಕೋರ್ಟ್ ವೇಳೆ ಬದಲು
ಈ ಕುರಿತು ಕಂದಾಯ ಇಲಾಖೆಯ ನೈಸರ್ಗಿಕ ವಿಪತ್ತು ನಿರ್ವಹಣಾ ಘಟಕ ಯೋಜನೆ ಸಿದ್ಧಪಡಿಸಿದೆ. ವಾತಾವರಣದ ತೀವ್ರ ಬದಲಾವಣೆಯಿಂದಾಗಿ ಉಂಟಾಗುತ್ತಿರುವ ಬಿಸಿಗಾಳಿಯ ಪರಿಣಾಮದಿಂದ ಜನ, ಜಾನುವಾರುಗಳು, ಪ್ರಾಣಿ-ಪಕ್ಷಿಗಳಿಗೆ ದುಷ್ಪರಿಣಾಮ ಉಂಟಾಗುತ್ತದೆ. ಬಿಸಿಗಾಳಿಯಿಂದ ನೆರೆಯ ಆಂದ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ 2014-15ರಿಂದ 2016-17ರ ಅವಧಿಯಲ್ಲಿ 2,276ಕ್ಕಿಂತ ಹೆಚ್ಚುಜನರು ಸಾವನ್ನಪ್ಪಿದ್ದಾರೆ.
ಉಷ್ಣಾಂಶದ ವ್ಯತ್ಯಾಸದಿಂದಾಗಿ ಪ್ರಮುಖವಾಗಿ ವೃದ್ಧರು, ಮಹಿಳೆಯರು, ಮಕ್ಕಳು, ಪ್ರಾಣಿ-ಪಕ್ಷಿಗಳಿಗೆ ಹೆಚ್ಚು ಹಾನಿ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಲ್ಲಿ ಉಂಟಾಗುವ ಬಿಸಿಗಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸುಲು ಹಲವು ಯೋಜನೆ ಸಿದ್ಧಪಡಿಸಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಬಿಸಿಗಾಳಿಯಿಂದ ರಕ್ಷಣೆಗೆ ಯೋಜನೆಗಳು: ನವದೆಹಲಿಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿರುವ ಮಾರ್ಗಸೂಚಿ ಅನುಸಾರ ಬಿಸಿಗಾಳಿಯಿಂದ ಉಂಟಾಗುವ ಸಾವು-ನೋವು ತಪ್ಪಿಸಲು, ಬಿಸಿಗಾಳಿಯಿಂದ ಜನ-ಜಾನುವಾರುಗಳಿಗೆ ಆರೋಗ್ಯದ ಮೇಲೆ ಉಂಟಾಗುತ್ತಿರುವ ಪರಿಣಾಮದ ಬಗೆಗೆ ಜನಜಾಗೃತಿ ಮೂಡಿಸುವುದು ಹಾಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು.
ಕೈಗೊಂಡ ಕ್ರಮಗಳೇನು?: ಈಗಾಗಲೇ ಬಿಸಿಗಾಳಿ ಹಿನ್ನೆಲೆಯಲ್ಲಿ ಕೆಲವು ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ರಾಜ್ಯದ ಉತ್ತರ ಒಳನಾಡು ಪ್ರದೇಶದಲ್ಲಿ ಕಚೇರಿ, ಶಾಲಾ-ಕಾಲೇಜುಗಳ ಅವಧಿಯನ್ನು ಬದಲಾವಣೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಮಾರ್ಚ್, ಏಪ್ರಿಲ್, ಮೇ ಮತ್ತು ಜೂನ್ ತಿಂಗಳಿನಲ್ಲಿ ಕೆಲಸದ ಅವಧಿಯನ್ನು ಕಡಿತಗೊಳಿಸುವ ಮೂಲಕ ಲೆಕ್ಸಿ ಟೈಮ್ ಅಳವಡಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.
ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!