ಕೋಮುದ್ವೇಷಕ್ಕೆ ಬಲಿಯಾದ 4 ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ

ಬೆಂಗಳೂರು, ಜೂನ್‌ 17: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್, ಮಸೂದ್, ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರವನ್ನ ಘೋಷಿಸಿದೆ.

ಮತೀಯ ಕಾರಣಗಳಿಂದಾಗಿ ಕೊಲೆಯಾಗಿರುವುದರಿಂದ ಆಗಿದ್ದರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನಾಲ್ವರು ಯುವಕರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಮಂಗಳೂರಿನಲ್ಲಿ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್, ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್.

State Govt Announced 25 Lakhs

28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ರನ್ನು ದುಷ್ಕರ್ಮಿಗಳು ಕೊಲೆ ಮಾಡಿದರು. ಇದೀಗ ಕಾಂಗ್ರೆಸ್‌ ಸರ್ಕಾರ ಯುವಕರ ಕುಟುಂಬಗಳಿಗೆ 25 ಲಕ್ಷ ಪರಿಹಾರವನ್ನ ಘೋಷಿಸಿದೆ.

ಇನ್ನೂ ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರ್ಕಾರದ ವತಿಯಿಂದ ಕೋಮುದ್ವೇಷಕ್ಕೆ ಬಲಿಯಾದ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂನ್ 19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+