ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯಾಧಿಕಾರಿ ಆತ್ಮಹತ್ಯೆ: ಕೊರೊನಾ ವಾರಿಯರ್ಸ್ ಒತ್ತಡ ತಗ್ಗಿಸುವುದಾಗಿ ಸರ್ಕಾರದ ಭರವಸೆ

|
Google Oneindia Kannada News

ನವದೆಹಲಿ, ಆಗಸ್ಟ್ 20: ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಎಸ್.ಆರ್. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣ, ಕೊರೊನಾ ವಾರಿಯರ್ಸ್‌ಗಳ ಮೇಲಿನ ಒತ್ತಡಗಳು ಮತ್ತು ಅವರ ಮಾನಸಿಕ ಸ್ಥಿತಿಯ ಕುರಿತಾಗಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ.

Recommended Video

ಮತ್ತೊಂದು ಹೀನ ಘಟನೆಗೆ ಸಾಕ್ಷಿಯಾದ ಅಕ್ಷರಸ್ಥರ ನಾನು ಕೇರಳ | Oneindia Kannada

ನಂಜನಗೂಡು ತಾಲ್ಲೂಕಿನಲ್ಲಿ ಒಂದು ವರ್ಷದಿಂದ ಆರೋಗ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಅವರು ಮೈಸೂರಿನ ಆಲನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಲಸದ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಕೊವಿಡ್-19 ತಪಾಸಣೆಗೆ ನಿರಾಕರಿಸಿದ ಖಾಸಗಿ ಲ್ಯಾಬ್ ಗಳಿಗೆ ಬೀಗ!ಕೊವಿಡ್-19 ತಪಾಸಣೆಗೆ ನಿರಾಕರಿಸಿದ ಖಾಸಗಿ ಲ್ಯಾಬ್ ಗಳಿಗೆ ಬೀಗ!

ನಂಜನಗೂಡು ತಾಲೂಕಿನ ಕೊಡ್ಲಾಪುರ ಗ್ರಾಮದಲ್ಲಿ ಆರು ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ಅವರು ಸಾಕಷ್ಟು ಶ್ರಮಿಸಿದ್ದರು. ಆದರೆ ಮಿತಿಮೀರಿದ ಒತ್ತಡದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸರ್ಕಾರ ಸಚಿವರು ಪ್ರತಿಕ್ರಿಯೆ ನೀಡಿದ್ದು, ಕೋವಿಡ್ ವಾರಿಯರ್‌ಗಳ ಮೇಲಿನ ಒತ್ತಡ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಮುಂದೆ ಓದಿ...

ಮುಲಾಜಿಲ್ಲದೆ ಕ್ರಮ- ಶ್ರೀರಾಮುಲು

ಮುಲಾಜಿಲ್ಲದೆ ಕ್ರಮ- ಶ್ರೀರಾಮುಲು

ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ‌. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಕೂಡಲೇ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ನಮ್ಮ ಗಮನಕ್ಕೆ ಬಂದಿದೆ

ನಮ್ಮ ಗಮನಕ್ಕೆ ಬಂದಿದೆ

ಕೋವಿಡ್ ನಿಯಂತ್ರಿಸುವಲ್ಲಿ ಬಿಡುವಿಲ್ಲದೇ ಹಗಲಿರುಳು ಶ್ರಮಿಸುತ್ತಿರುವ ನಮ್ಮ ಎಲ್ಲಾ ಕೋವಿಡ್ ವಾರಿಯರ್ಸ್‌ಗಳಿಗೆ ನಾನು ಈ ಮೂಲಕ ತಿಳಿಸುವುದೇನಂದರೆ ಅಧಿಕ ಕೆಲಸದಿಂದ ನೀವು ಒತ್ತಡ, ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವುದು ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರದ ಪರವಾಗಿ ಭರವಸೆ ಕೊಡುತ್ತಿದ್ದೇನೆ ಎಂದು ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಆಯುಷ್ ವೈದ್ಯಾಧಿಕಾರಿ, ಬೋಧಕ ಸಿಬ್ಬಂದಿಗೆ ಸಚಿವರ ಅಭಯಆಯುಷ್ ವೈದ್ಯಾಧಿಕಾರಿ, ಬೋಧಕ ಸಿಬ್ಬಂದಿಗೆ ಸಚಿವರ ಅಭಯ

ಒತ್ತಡ ನಿಯಂತ್ರಿಸಲು ಕ್ರಮ

ಒತ್ತಡ ನಿಯಂತ್ರಿಸಲು ಕ್ರಮ

ರಾಜ್ಯದ ಎಲ್ಲಾ ಭಾಗದ ವೈದ್ಯರುಗಳಿಗೆ, ಕೊರೊನಾ ಯೋಧರಿಗೆ ನೈತಿಕ ಸ್ಫೂರ್ತಿಯನ್ನು ಮುಂದಿನ ದಿನಗಳಲ್ಲಿ ನಿಮ್ಮ ಒತ್ತಡಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಡುವಿಲ್ಲದೇ ಕೆಲಸ ಮಾಡುತ್ತಿರುವ ನಿಮಗೆ ರಜೆ, ಒತ್ತಡ ಸಡಿಲ ಮಾಡಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ

ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ

ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿಮಾಡುವುದು ಅಮಾನವೀಯವಾಗುತ್ತದೆ. ವೈದ್ಯಕೀಯ ಸಂಘದ ಎಲ್ಲಾ ಆತ್ಮೀಯರಿಗೆ ಮನವಿ ಮಾಡುವುದೇನೆಂದರೆ ನಾಗೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲು ಆದ್ಯತೆ ಕೊಡಿ. ಅವರ ಕುಟುಂಬ ವರ್ಗದವರಿಗೆ ಮುಖ್ಯಮಂತ್ರಿ ಬಿಎಸ್‌ವೈ ಜೊತೆ ಚರ್ಚಿಸಿ ನ್ಯಾಯ ಕೊಡಿಸುತ್ತೇವೆ ಎಂದು ಕೋರಿದ್ದಾರೆ.

ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜೊತೆ ಸುಧಾಕರ್ ಸಭೆವೈದ್ಯಕೀಯ ಕಾಲೇಜು ಮುಖ್ಯಸ್ಥರ ಜೊತೆ ಸುಧಾಕರ್ ಸಭೆ

ಶಾಶ್ವತ ಪರಿಹಾರ ನೀಡುತ್ತದೆ

ಶಾಶ್ವತ ಪರಿಹಾರ ನೀಡುತ್ತದೆ

ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪ್ರಾಣವನ್ನು ಹಿಂದಿರುಗಿ ತರಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೆ ಅವರ ಕುಟುಂಬದ ಸದಸ್ಯರಿಗೆ ಶಾಶ್ವತವಾದ ಪರಿಹಾರವನ್ನು ಸರ್ಕಾರ ಖಂಡಿತವಾಗಿಯೂ ಮಾಡುತ್ತದೆ. ಎಲ್ಲಾ ಕೋವಿಡ್ ಯೋಧರ ಜೊತೆ ಸರ್ಕಾರ ಇದೆ ಎಂದು ಹೇಳಲು ಇಚ್ಛಿಸುತ್ತೇನೆ ಎಂದಿದ್ದಾರೆ.

ಅನ್ಯ ಕಾರಣಕ್ಕೆ ಬಳಸಬೇಡಿ

ಅನ್ಯ ಕಾರಣಕ್ಕೆ ಬಳಸಬೇಡಿ

ಯಾರೂ ಕೂಡಾ ನಾಗೇಂದ್ರ ಅವರ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ಕಳಕಳಿಯ ಮನವಿ ಮಾಡುತ್ತಿದ್ದೇನೆ. ಈಗಾಗಲೇ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಕೋವಿಡ್ ಯೋಧರ ನೆರವಿಗೆ ನಮ್ಮ ಸರ್ಕಾರ ಜೊತೆಗಿದೆ. ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಮತ್ತಷ್ಟು ಸೂಕ್ತ ಕ್ರಮಗಳು ಕೈಗೊಳ್ಳಲಾಗುವುದು ಎಂದು ಸುಧಾಕರ್ ತಿಳಿಸಿದ್ದಾರೆ.

English summary
Karnataka government has assured corona warriors that they will take necessary actions to reduce the pressure on them, after the suicide of Health officer in Nanjangud.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X