ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದೇವರಿಗೆ ನಮಸ್ಕರಿಸಿದ ಸಿಎಂ ಬೊಮ್ಮಾಯಿ!
ಬೆಂಗಳೂರು, ಆಗಸ್ಟ್ 18: ರಾಜ್ಯ ಸರ್ಕಾರದ 2019-20 ನೇ ಸಾಲಿನ ವಿವಿಧ ರಾಜ್ಯ ಪ್ರಶಸ್ತಿಗಳು ಹಾಗೂ ಬಸವ ರಾಷ್ಟ್ರೀಯ ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಒಟ್ಟು ಹದಿನೈದು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಅನ್ನದಾಸೋಹ, ಜ್ಞಾನ ದಾಸೋಹ, ಅನುಭವ ಸೇರಿದಂತೆ ಮಾನವೀಯ ವಿಚಾರ ಕಾರ್ಯಗಳ ಮೂಲಕ ಸಮಾಜದ ಏಳಿಗೆಗೆ ಐದು ದಶಕಗಳಿಂದ ಶ್ರಮಿಸುತ್ತಿರುವ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದೇವರಿಗೆ ರಾಜ್ಯ ಸರ್ಕಾರದ 2019-20 ನೇ ಸಾಲಿನ ಬಸವ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.
ಅವರೊಂದಿಗೆ ಇತರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 13 ಸಾಧಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.

ಮಾತೃಭಾಷೆಯ ಮಹತ್ವ ಹೇಳಿದ ಸಿಎಂ!
ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, "ಮಾತೃಭಾಷೆಯ ಮಹತ್ವವನ್ನು ಅರಿತ ಸಮುದಾಯ ಬಹಳ ಶ್ರೀಮಂತವಾಗಿ ಬೆಳೆಯುತ್ತದೆ" ಎಂದು ಅಭಿಪ್ರಾಯ ಪಟ್ಟರು. ಜೊತೆಗೆ "ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾನವೀಯ ಮತ್ತು ಮಾತೃ ಮೌಲ್ಯಗಳ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕು. ಇಂದು ಪ್ರಶಸ್ತಿ ಪಡೆದವರೆಲ್ಲಾ ಸಾಧಕರು. ದಾರ್ಶನಿಕರು ಸತ್ಯವನ್ನು ನೋಡುವ ಶಕ್ತಿಯನ್ನು ಪಡೆದಿರುತ್ತಾರೆ" " ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಸಾಧಕರ ಬದುಕು ಸೀಮಿತವಲ್ಲ!
"ಬದುಕನ್ನು ಹುಟ್ಟು ಸಾವಿನ ಮಧ್ಯದ ಬದುಕಿಗೆ ಸಾಧಕರು ಸೀಮಿತಗೊಳಿಸುವುದಿಲ್ಲ. ಸಾವಿನ ನಂತರವೂ ಅವರ ಬದುಕು, ವಿಚಾರಗಳು, ಮಾರ್ಗದರ್ಶನಗಳು ನಮ್ಮ ಮಧ್ಯೆ ಇರುತ್ತವೆ. ಬುದ್ಧ, ಬಸವ, ಅಲ್ಲಮ, ಶಂಕರರು, ಮೊಹಮ್ಮದ್ ಪೈಗಂಬರ್ ಕಾಲಾತೀತವಾಗಿ ಬದುಕಿ, ಅವರ ಸಾಧನೆಯೂ ಕಾಲಾತೀತವಾಗಿದೆ . ಕಲೆ, ಸಂಸ್ಕೃತಿಗೂ ಬೆಲೆ ಕಟ್ಟುವ ಕಲಿಯುಗದಲ್ಲಿ ಬೆಲೆಯನ್ನು ಬದಿಗಿಟ್ಟು ಅರ್ಥ ಕೊಡುವ ಕೆಲಸವನ್ನು ಇಂದು ಪ್ರಶಸ್ತಿ ಪಡೆದವರೆಲ್ಲರೂ ಮಾಡಿದ್ದಾರೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದರು.

ಡಾ. ಬಸವಲಿಂಗ ಪಟ್ಟದೇವರಿಗೆ ನಮಸ್ಕರಿಸಿದ ಬೊಮ್ಮಾಯಿ
ರಾಷ್ಟ್ರೀಯ ಬಸವ ಪ್ರಶಸ್ತಿಗೆ ಭಾಜನರಾಗಿರುವ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದೇವರಿಗೆ ಪ್ರಶಸ್ತಿ ಪ್ರಧಾನ ಮಾಡುವ ಮೊದಲು ಸಿಎಂ ಬೊಮ್ಮಾಯಿ ಅವರಿಗೆ ನಮಸ್ಕರಿಸಿದರು. ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, "ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಬಗ್ಗೆ ನಿಜವಾದ ಚಿಂತನೆ ಮಾಡಿ ಅನುಷ್ಠಾನ ಮಾಡುತ್ತಿರುವವರು ಡಾ. ವೀರೇಂದ್ರ ಹೆಗ್ಗಡೆ ಅವರು. ಭಾಲ್ಕಿಯ ಬಸಲಿಂಗ ಪಟ್ಟದೇವರು ಅಪಾರ ಸಾಧನೆ ಮಾಡಿಯೂ ಮಾಡದಂತೆ ಇರುತ್ತಾರೆ. ಬಸವ ತತ್ವಗಳನ್ನು ಸಂಪೂರ್ಣವಾಗಿ ಮೈಗೂಡಿಸಿಕೊಂಡು ಇತರರಿಗೆ ಮಾದರಿಯಾಗುವಂತೆ ಬದುಕುತ್ತಿದ್ದಾರೆ. ಬೀದರ್ ಜಿಲ್ಲೆಯಿಂದ ಕೊಳ್ಳೇಗಾಲದವರೆಗೂ ಅವರ ವಿಚಾರಗಳು ವ್ಯಾಪಿಸಿದೆ. ಜಾನಪದ, ಕಲೆ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅನೇಕರಿದ್ದಾರೆ" ಎಂದರು.

ನಾವೇನಾಗಿದ್ದೇವೆ ಎನ್ನುವುದು ಸಂಸ್ಕೃತಿ
"ನಾಗರಿಕತೆ ಮತ್ತು ಸಂಸ್ಕೃತಿಯನ್ನು ನಾವು ತಪ್ಪಾಗಿ ಅರ್ಥೈಸಿಕೊಳ್ಳುತ್ತೇವೆ. ನಮ್ಮ ಬಳಿಯಿರುವ ವಸ್ತುಗಳು ನಾಗರೀಕತೆ. ನಾವೇನಾಗಿದ್ದೇವೆ ಎನ್ನುವುದು ಸಂಸ್ಕೃತಿ. ನಮ್ಮಲ್ಲಿ ಮೌಲ್ಯಗಳು ಎಷ್ಟರಮಟ್ಟಿಗೆ ಇವೆ. ಸಾಮಾಜಿಕ ಪ್ರಜ್ಞೆ, ಮಾನವೀಯ ಮೌಲ್ಯಗಳು ನಾಗರಿಕ ಕರ್ತವ್ಯ ಪ್ರಜ್ಞೆ ಇವೆಲ್ಲಾ ಸಂಸ್ಕೃತಿ ಎನಿಸಿಕೊಳ್ಳುತ್ತವೆ.
ಕನ್ನಡ ಭಾಷೆ ನಮ್ಮ ಸಂಸ್ಕೃತಿ. ಭಾವಗಳ ಜೋಡಿಸುವ ಸಂಕೋಲೆ. ಭಾವನೆಗಳನ್ನು ಉಕ್ಕಿಸುವ ಭಾಷೆ ಕನ್ನಡ. ಹುಟ್ಟುವ ಮುನ್ನವೇ ಬೆಳೆಸುವ ಸಂಬಂಧ ತಾಯಿಯ ಸಂಬಂಧ. ಆದ್ದರಿಂದ ಮಾತೃಭಾಷೆಯನ್ನು ಕಡೆಗಣಿಸಬಾರದು ಇತರೆ ಭಾಷೆಗೆ ಹೋಲಿಸಬಾರದು" ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ 15 ಸಾಧಕರು..
1. ಬಸವ ರಾಷ್ಟ್ರೀಯ ಪ್ರಶಸ್ತಿ: ಅನುಭವ ಮಂಟಕದ ಅಧ್ಯಕ್ಷ ಬಸವಲಿಂಗ ಪಟ್ಟದೇವರು
2. ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
3. ಟಿ. ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ: ಡಾ. ಪಂ. ನರಸಿಂಹಲು ವಡವಾಟಿ
4. ನಾಟ್ಯರಾಣಿ ಶಾಂತಲಾ ಪ್ರಶಸ್ತಿ: ಬಿ.ಕೆ. ವಸಂತಲಕ್ಷ್ಮಿ
5. ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಚಿ.ಸು. ಕೃಷ್ಣ ಶೆಟ್ಟಿ
6. ಜಕಣಾಚಾರಿ ಪ್ರಶಸ್ತಿ: ಬಿ.ಎಸ್. ಯೋಗಿರಾಜ
7. ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ಮದಿರ ಮರಿಸ್ವಾಮಿ
8. ಜಾನಪದಶ್ರೀ ಪ್ರಶಸ್ತಿ: ಬಿ, ಟಾಕಪ್ಪ ಕಣ್ಣೂರು
9. ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ರಾ.ನಂ. ಚಂದ್ರಶೇಖರ
10. ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಡಾ. ಚೂಡಾಮಣಿ ನಂದಗೋಪಾಲ್
11, ಪ್ರೊ.ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಪ್ರೊ. ಸಿದ್ದಣ್ಣ ಉಪ್ಪಾಳ
12. ಅಕ್ಕಮಹಾದೇವಿ ಪ್ರಶಸ್ತಿ: ಡಾ. ಜಯಶ್ರೀ ದಂಡೆ
13. ನಿಜಗುಣ ಪುರಂದರ ಪ್ರಶಸ್ತಿ: ಗೌರಿ ಕುಪ್ಪುಸ್ವಾಮಿ
14, ನಂತಶಿಶುನಾಳ ಶರೀಫ ಪ್ರಶಸ್ತಿ: ಪಂ. ವಾದಿರಾಜ ನಿಂಬರಗಿ
15. ಕುಮಾರವ್ಯಾನ ಪ್ರಶಸ್ತಿ: ಗಂಗಮ್ಮ ಕೇಶವಮೂರ್ತಿ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications