ಮಾದಕ ದ್ರವ್ಯ ಮಾರಾಟ ಮಾಡಿದರೆ ಹುಷಾರ್, ಗೂಂಡಾ ಕಾಯ್ದೆ ಹಾಕ್ತಾರೆ
ಬೆಂಗಳೂರು, ಜು.13: ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಮಾರಾಟ ಮಾಡುವವರು ಇನ್ನುಮುಂದೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಶುಕ್ರವಾರ ಈ ಕುರಿತ ಚರ್ಚೆಯ ಬಳಿಕ ಉತ್ತರಿಸಿದ ಅವರು ಇನ್ನುಮುಂದೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಮಾರಾಟ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದರೆ ಅಂತವರ ವಿರುದ್ಧ ಮಾದಕ ದ್ರವ್ಯ ನಿಷೇಧ ಕಾಯ್ದೆ ಮಾತ್ರವಲ್ಲದೆ ಗೂಂಡಾ ಕಾಯ್ದೆಯನ್ನು ಹಾಕಿ ಅಂತವರನ್ನು ಜೈಲಿಗೆ ಅಟ್ಟಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಮಾರಾಟ ಜಾಲ ಸಕ್ರಿಯವಾಗಿದ್ದು, ಯುವಜನಾಂಗ ಇದಿರಿಂದ ಹಾದಿ ತಪ್ಪುತ್ತಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ವಿದೇಶದಿಂದ ಬಂದ ವಿದ್ಯಾರ್ಥಿಗಳು ಯಾವುದೋ ಕಾಲೇಜಿನಲ್ಲಿ ಡಿಪ್ಲೊಮಾ ಅಥವಾ ಇನ್ನಿತರೆ ಕೋರ್ಸ್‌ಗಳಿಗೆ ಪ್ರವೇಶ ಪಡೆದು ನಂತರ ಇಲ್ಲಿಯೇ ನೆಲೆ ನಿಲ್ಲುತ್ತಾರೆ.

ಕ್ರಮೇಣ ಅವರು ಡ್ರಗ್ಸ್ ಸಾಗಾಟ ಮತ್ತು ಮಾರಾಟದಲ್ಲಿ ಪಾಲ್ಗೊಂಡು ಅವಧಿ ಮುಗಿದ ಬಳಿಕವೂ ಇಲ್ಲಿಯೇ ವಾಸಿಸುತ್ತಾರೆ ಅಂತವರ ವಿರುದ್ಧ ಕ್ರಮಕ್ಕೆ ಪೊಲೀಸ್ ಇಲಾಖೆಯು ಈಗಾಗಲೇ ಸಭೆ ನಡೆಸಲಾಗಿದೆ. ಇನ್ನೊಂದು ಸುತ್ತು ಪೊಲೀಸ್ ಹಾಗೂ ಅಭಕಾರಿ ಇಲಾಖೆಯೊಂದಿಗೆ ಸಭೆ ನಡೆಸಿ ಈ ಬಗ್ಗೆ ಗುಂಡಾ ಕಾಯ್ದೆ ಹೇರಲು ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಳ್ಳಲಾಗುವುದು ಎಂದರು.
ಚರ್ಚೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಆಶ್ವತ್ಥನಾರಾಯಣ್ ಬೆಂಗಳೂರು ನಗರದ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಸೇವನೆ ಹವ್ಯಾಸವಾಗಿರುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.












Click it and Unblock the Notifications