ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಗಮ ಮಂಡಳಿ ನೌಕರರನ್ನು ಸರ್ಕಾರಿ ಸೇವೆಯಲ್ಲಿ ವಿಲೀನಗೊಳಿಸುವಂತಿಲ್ಲ!

|
Google Oneindia Kannada News

ಬೆಂಗಳೂರು, ಅ. 21: ನಿಗಮ ಮಂಡಳಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸರ್ಕಾರಿ ಸೇವೆಗಳಲ್ಲಿ ವಿಲೀನಗೊಳಿಸುವುದನ್ನು ನಿಷೇಧಿಸುವ ಕಾಯಿದೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕಳೆದ ಅಧಿವೇಶನದಲ್ಲಿ ಈ ಕುರಿತು ವಿಧೇಯಕ ಅಂಗೀಕರಿಸಿ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿತ್ತು. ರಾಜ್ಯಪಾಲರ ಅಂಕಿತ ದೊರೆತ ಹಿನ್ನೆಲೆಯಲ್ಲ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಸಾರ್ವಜನಿಕ ವಲಯದ ಸಂಸ್ಥೆಗಳಾದ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ನೇಮಕಗೊಂಡಿರುವ ನೌಕರರು ನಿಗಮ ಮುಚ್ಚಿದ ನಂತರ ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕೋರ್ಟ್ ಮೊರೆ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಅದನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಈ ಕಾಯ್ದೆಯನ್ನು ಜಾರಿಗೆ ತಂದಿದೆ.

State Govt Issued Ordinance Banning Merging Of Employees Of State-owned Public Sector Organizations

Recommended Video

CSK ತಂಡದ DJ Bravo ಇನ್ನುಳಿದ ಪಂದ್ಯದಲ್ಲಿ ಆಗೋದಿಲ್ಲ , ಏಕೆ | Oneindia Kannada

ನಿಗಮ ಮಂಡಳಿ ನೌಕರರ ನೇಮಕಾತಿ ನಿಯಮಗಳು ಹಾಗೂ ಸರ್ಕಾರಿ ನೌಕರರ ಸೇವಾ ನಿಯಮಗಳಲ್ಲಿ ವ್ಯತ್ಯಾಸವಿದೆ. ಹೀಗಾಗಿ ನಿಗಮ ಮಂಡಳಿ ನೌಕರರನ್ನು ಸರ್ಕಾರಿ ಸೇವೆಯಲ್ಲಿ ವಿಲೀನಗೊಳಿಸುವುದರಿಂದ ಸೇವಾ ಶ್ರೇಣಿಗಳಲ್ಲಿಯೂ ಸಮಸ್ಯೆಯಾಗುತ್ತದೆ. ಜೊತೆಗೆ ಸಾರ್ವಜನಿಕ ವೆಚ್ಚವೂ ಹೆಚ್ಚಾಗಲಿದೆ ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಈ ಕಾಯ್ದೆ ಜಾರಿಗೊಳಿಸಿದೆ. ಆ ಮೂಲಕ ನಿಗಮ ಮಂಡಳಿ ನೌಕರರನ್ನು ಸರ್ಕಾರಿ ಸೇವೆಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಯನ್ನು ನಿಷೇಧಿಸಿದೆ.

English summary
The state government has issued ordinance banning the merging of employees of state-owned public sector organizations, including corporation boards, into government services. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X