ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಭಾಷೆ ಕಲಿಕೆ ಕಡ್ಡಾಯ: ಖಾಸಗಿ ಶಾಲೆಗಳಿಗೆ ಖಡಕ್ ಆದೇಶ

By Nayana
|
Google Oneindia Kannada News

Recommended Video

ರಾಜ್ಯ ಸರ್ಕಾರವು ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ಮಾಡುವಂತೆ ಆದೇಶ | Oneindia Kannada

ಬೆಂಗಳೂರು, ಸೆಪ್ಟೆಂಬರ್ 4: ರಾಜ್ಯದಲ್ಲಿರುವ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇಷ್ಟು ವರ್ಷ ಕೆಲವು ಖಾಸಗಿ ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ಕನ್ನಡವನ್ನು ಕಲಿಸಲಾಗುತ್ತಿತ್ತು, ಇನ್ನೂ ಕೆಲವು ಶಾಲೆಗಳಲ್ಲಿ ಕನ್ನಡವನ್ನು ಐಚ್ಛಿಕವಾಗಿಟ್ಟಿದ್ದರು.ಆದರೆ ಇದೀಗ ಪ್ರತಿ ಖಾಸಗಿ ಶಾಲೆಯಲ್ಲಿ ಕನ್ನಡ ಕಲಿಕೆ ಕಡ್ಡಾಯ ಎನ್ನುವ ಆದೇಶ ಹೊರಬಿದ್ದಿದೆ. ಕಳೆದ ವರ್ಷವೇ ಈ ಆದೇಶವನ್ನು ಹೊರಡಿಸಿದ್ದರೂ ಬಹುತೇಕ ಖಾಸಗಿ ಶಾಲೆಗಳು ಅನುಸರಿಸಿರಲಿಲ್ಲ.

ಅಧಿಕಾರಿ-ಶಾಸಕರ ಮಕ್ಕಳು ಇನ್ನು ಸರ್ಕಾರಿ ಶಾಲೆಲೇ ಓದ್ಬೇಕು!ಅಧಿಕಾರಿ-ಶಾಸಕರ ಮಕ್ಕಳು ಇನ್ನು ಸರ್ಕಾರಿ ಶಾಲೆಲೇ ಓದ್ಬೇಕು!

ಸೆಪ್ಟೆಂಬರ್ 5ರೊಳಗೆ ನೀಡುವಂತೆಯೂ ಇಲಾಖೆ ಸೂಚನೆಯಲ್ಲಿ ತಿಳಿಸಿದೆ. ಸಿಬಿಎಸ್ ಇ, ರಾಜ್ಯ ಪಠ್ಯಕ್ರಮ, ಐಸಿಎಸ್ ಇ ಪಠ್ಯಕ್ರಮ ಯಾವುದೇ ಇರಲಿ ಕನ್ನಡ ಕಲಿಕೆ ಇನ್ನು ಕಡ್ಡಾಯ. ಎಲ್ಲಾ ಖಾಸಗಿ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧನೆ ಮಾಡುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಶಿಕ್ಷಣ ಇಲಾಖೆ ತಿಳಿಸಿದೆ.

ಎಸ್‌ಸಿ/ಎಸ್‌ಟಿ : ಬೇರೆ ರಾಜ್ಯದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಇಲ್ಎಸ್‌ಸಿ/ಎಸ್‌ಟಿ : ಬೇರೆ ರಾಜ್ಯದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಇಲ್

ಕನ್ನಡ ಅಭಿವೃದ್ಧಿ ಪ್ರಾಧಿಕಾರ ನೀಡಿರುವ ಎಚ್ಚರಿಕೆಗೆ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಕನ್ನಡ ಭಾಷಾ ಕಲಿಕಾ ನಿಯಮಗಳ ಜಾರಿ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು, ಜತೆಗೆ ಜಾರಿಗೆ ತರದ ಶಾಲೆಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆಯೂ ವರದಿ ನೀಡುವಂತೆ ಆಯಾ ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದೆ.

 ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಜಾರಿಗೊಂಡು ಒಂದುವರ್ಷ

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಜಾರಿಗೊಂಡು ಒಂದುವರ್ಷ

ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕು ಎನ್ನುವ ನಿಯಮವನ್ನು ಜಾರಿಗೆ ತಂದು ಒಂದು ವರ್ಷ ಕಳೆದಿದೆ ಆದರೆ ಸಾಕಷ್ಟು ಖಾಸಗಿ ಶಾಲೆಗಳು ಇದರ ಕುರಿತು ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ ಹಾಗಾಘು ಬುಧವಾರದ ಒಳಗೆ ಈ ನಿಯಮವನ್ನು ಪಾಳಿಸಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕನ್ನಡ ಕಲಿಸದ ಶಾಲೆಗಳ ಪಟ್ಟಿಯನ್ನು ನೀಡುವಂತೆಯೂ ಕಳಿದೆ.

 ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಶಿಕ್ಷಣ ಇಲಾಖೆಗೆ ಪತ್ರ

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಶಿಕ್ಷಣ ಇಲಾಖೆಗೆ ಪತ್ರ

ರಾಜ್ಯದಲ್ಲಿರುವ ಪ್ರತಿಯೊಂದು ಖಾಸಗಿ ಶಾಲೆಗಳು ಕನ್ನಡವನ್ನು ಕಲಿಸುತ್ತಿವೆ ಎಂಬುದರ ಕುರಿತು ದೃಢೀಕರಣ ಪತ್ರವನ್ನು ನೀಡಲು ಶಿಕ್ಷಣ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆದಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಭಾಷಾ ಕಲಿಕಾ ಇಯಮಗಳ ಜಾರಿ ಕುರಿತು ಸಮಗ್ರ ವರದಿ ನೀಡುವಂತೆ ಕೇಳಿತ್ತು, ವರದಿ ನೀಡಲು ಶಿಕ್ಷಣ ಇಲಾಖೆ ವಿಫಲವಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳ ಜತೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಮೀಲಾಗುವ ಮೂಲಕ ಸರ್ಕಾರ ರೂಪಿಸಿರುವ ನಿಯಮವನ್ನು ಬುಡಮೇಲು ಮಾಡುತ್ತಿದೆ ಎಂದು ಪತ್ರ ಬರೆದಿದ್ದಾರೆ.

ಕನ್ನಡ ಕಡ್ಡಾಯ ಕಲಿಕೆ ಕೈ ಹಿಡಿದ ರಾಜ್ಯ ಸರ್ಕಾರಕನ್ನಡ ಕಡ್ಡಾಯ ಕಲಿಕೆ ಕೈ ಹಿಡಿದ ರಾಜ್ಯ ಸರ್ಕಾರ

 ಖಾಸಗಿ ಶಿಕ್ಷಣ ಸಂಸ್ಥೆಗಳ ನಿರಾಕರಣ

ಖಾಸಗಿ ಶಿಕ್ಷಣ ಸಂಸ್ಥೆಗಳ ನಿರಾಕರಣ

ಈ ನಿಯಮಗಳಿಗೆ ರಾಜ್ಯ ಪಠ್ಯಕ್ರಮಕ್ಕೆ ಸಿಬಿಎಸ್ಇ, ಐಸಿಎಸ್ಇ ಹಾಗೂ ಇತರೆ ಪಠ್ಯಕ್ರಮ ಬೋಧಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸಲು ನಿರಾಕರಿಸಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಖಾಸಗಿ ಶಾಲೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು.ಶಿಸ್ತುಕ್ರಮ ಜರುಗಿಸುವ ಕುರಿತು ಎಚ್ಚರಿಕೆ ನೀಡಿತ್ತು.

 ಕನ್ನಡ ಭಾಷಾ ಕಲಿಕೆ ನಿಯಮ ಏನು?

ಕನ್ನಡ ಭಾಷಾ ಕಲಿಕೆ ನಿಯಮ ಏನು?

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿ ಮೇರೆಗೆ ರಾಜ್ಯ ಸರ್ಕಾರವು ಕನ್ನಡ ಭಾಷಾ ಕಲಿಕೆ ಅಧಿನಿಯಮವನ್ನು ರೂಪಿಸಿತ್ತು. ಇದರ ಆಧಾರದ ಮೇಲೆ 2017ರಲ್ಲಿ ಕನ್ನಡ ಭಾಷಾ ಕಲಿಕಾ ನಿಯಮಗಳನ್ನು ಜಾರಿಗೆ ತರಲಾಗಿತ್ತು. ಒಂದರಿಂದ ಹತ್ತನೇ ತರಗತಿವರೆಗೆ ಹಂತ ಹಂತವಾಗಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯ ಮಾಡಿದೆ.

English summary
State government has issued an order to implement Kannada language as first or second language teaching in all the private institution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X