ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳ ನೇಮಕ

ಕಾವೇರಿ ನಿರ್ವಹಣಾ ಮಂಡಳಿಗೆ, ಪ್ರಾಧಿಕಾರಕ್ಕೆ ರಾಜ್ಯದ ಇಬ್ಬರು ಪ್ರತಿನಿಧಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೆಸರನ್ನು ಕೇಂದ್ರಕ್ಕೆ ರವಾನೆ ಮಾಡಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಸಿಎಂ ನೇತೃತ್ವದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರನ್ನು ರಾಜ್ಯದ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ.

ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾವೇರಿ ನಿಗಮದ ಎಂಡಿ ಎಚ್‌ಎಲ್‌ ಪ್ರಸನ್ನ ಸದಸ್ಯರಾಗಿ ನೇಮಕಗೊಂಡಿದ್ದಾರೆ. ರಾಜ್ಯಕ್ಕೆ ಮತ್ತಷ್ಟು ತೊಂದರೆಯಾಗಬಾರದು ಎಂದು ನೇಮಕ ಮಾಡಲಾಗಿದೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಹಿನ್ನಲೆ ಕೇಂದ್ರ ಸರ್ಕಾರ ಚರ್ಚೆ ನಡೆಸುವ ಆಶ್ವಾಸನೆ ನೀಡಿತ್ತು. ನಮ್ಮ ಅಹವಾಲು ಕೇಳದೆ ಕೇಂದ್ರ ತೀರ್ಮಾನಕ್ಕೆ ಬಂದಿದೆ.

State govt oppoint two officials to cauvery board

ಕೇಂದ್ರ ಸರ್ಕಾರ ಜೂನ್ 1ರಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿತ್ತು. ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಸೂಚನೆ ನೀಡಿತ್ತು.

ಇದರಿಂದಾಗಿ ನಮ್ಮ ರಾಜ್ಯಕ್ಕೆ ತೀವ್ರ ಅನ್ಯಾಯವಾಗಿದೆ. ಶೀಘ್ರವೇ ಕಾವೇರಿ ನಿರ್ವಹಣಾ ಪ್ರಾಧಿಕಾರ ಸಭೆ ಸಾಧ್ಯತೆಯಿದೆ, ಪ್ರಾಧಿಕಾರ ನಿರ್ವಹಣಾ ಸಮಿತಿಗೆ ಸದಸ್ಯರನ್ನು ನೇಮಿಸಿದ್ದೇವೆ, ವಿರೋಧ ಪಕ್ಷದವರು ಸಹಕಾರ ನೀಡಬೇಕು, ಶೀಘ್ರದಲ್ಲೇ ಸರ್ವಪಕ್ಷ ಸಭೆ ದಿನಾಂಕ ಪ್ರಕಟಿಸುತ್ತೇವೆ, ನಾವು ಯಾರೊಂದಿಗೂ ಸಂಘಟರ್ಷಕ್ಕೆ ಇಳಿಯುವುದಿಲ್ಲ ಎಂದರು.

State govt oppoint two officials to cauvery board

ಸರ್ವ ಪಕ್ಷದ ಸಂಸದರು ಸದಸ್ಯರ ಸಭೆ ಕರೆಯಲಿದ್ದಾರೆ, ವಿರೋಧ ಪಕ್ಷದವರು ಸಹಕಾರವನ್ನು ನೀಡಬೇಕು, ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ, ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕರೊಂದಿಗೆ, ಸಂಸದರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+