ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ಸರ್ಕಾರ ಸಿದ್ದ: ಕೆಎಚ್ ಮುನಿಯಪ್ಪ
ಬೆಂಗಳೂರು, ಸೆಪ್ಟಂಬರ್ 24: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ಕಾಲ ಕೂಡಿ ಬರುವ ಲಕ್ಷಣಗಳು ಕಂಡು ಬಂದಿವೆ. ಈ ಸಂಬಂಧ ರಾಜ್ಯ ಸರ್ಕಾರದ ಪ್ರತಿನಿಧಿಗಳೇ ಖದ್ದು ಮಾಹಿತಿ ನೀಡಿದ್ದಾರೆ.
ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ನಮ್ಮ ರಾಜ್ಯ ಸರ್ಕಾರ ಬದ್ಧವಾಗಿದೆ.ಆಯೋಗದ ವರದಿಯನ್ನು ಆದಷ್ಟು ಶೀಘ್ರವೇ ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಅವರು ಭಾನುವಾಋ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪಸರಿಶಿಷ್ಟ ಜಾತಿಗಳೊಂದಿಗೆ ಒಳ ಮೀಸಲಾತಿ ಪರಿಚಯಿಸಲು ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚಿಸಲಾಗಿದೆ. ಸಂಪುಟ ಸಭೆಯಲ್ಲಿ ವರದಿಯನ್ನು ಚರ್ಚಿಸಿದ ನಂತರ ಸರ್ಕಾರವು ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು.
ಪ್ರಣಾಳಿಕೆಯ ಭರವಸೆ ಈಡೇರಿಸುತ್ತೇವೆ
ಎಲ್ಲ ಪರಿಶಿಷ್ಟ ಜಾತಿ ಸಮುದಾಯಗಳಿಗೆ ನ್ಯಾಯ ಒದಗಿಸಲು ಒಳ ಮೀಸಲಾತಿಯನ್ನು ನ್ಯಾಯಯುತವಾಗಿ ವರ್ಗೀಕರಣ ಮಾಡಲಾಗುವುದು. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ನಾವು ಈಡೇರಿಸಲು ಬದ್ಧರಿದ್ದೇವೆ ಎಂದು ಅವರು ಪುನರುಚ್ಚರಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರ ತಾವು ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು. ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ಜಾರಿಗೆ ಒತ್ತಾಯಿಸಿ ಪ್ರತಿಭಟಿಸುತ್ತಿರುವ ಪ್ರತಿಭಟನಾಕಾರರನ್ನು ಬಂಧಿಸುವ ಮೂಲಕ ಅಂದಿನ ವಿಪಕ್ಷ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಸಂಬಂಧ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮೂಲಕ ಕೆಂಡ ಕಾರಿದ್ದರು.
ಒಂದು ಕಡೆ ಆಯೋಗದ ವರದಿ ಜಾರಿಗೆ ಆಗ್ರಹಿಸಿದ್ದು, ಮತ್ತೊಂದೆಡೆ ವರಿಯನ್ನು ಜಾರಿ ಮಾಡದಂತೆಯೂ ಪ್ರತಿಭಟನೆಗಳು ನಡೆದಿವೆ. ಇದೆಲ್ಲದರ ಮಧ್ಯೆ ಮತ್ತೊಮ್ಮೆ ವರದಿ ಜಾರಿಗೆ ಪ್ರಸ್ತಾವ ಸರ್ಕಾರದಿಂದಲೇ ಆಗಿದೆ. ಇದರ ಅಂತಿಮ ನಿರ್ಧಾರ ಬಗ್ಗೆ ಮುಂದಿ ಸಂಪುಟ ಸಭವರೆಗೂ ಕಾಯಬೇಕಿದೆ.












Click it and Unblock the Notifications