ಬಸ್ ಪ್ರಯಾಣ ದರ ಶೇ.18ರಷ್ಟು ಹೆಚ್ಚಳಕ್ಕೆ ಸರ್ಕಾರ ಚಿಂತನೆ
Recommended Video

ಬೆಂಗಳೂರು, ಸೆಪ್ಟೆಂಬರ್ 4: ಡೀಸೆಲ್ ದರ ಏರಿಕೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 186 ಕೋಟಿ ರೂ.ನಷ್ಟು ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ ಶೇ.18ರಷ್ಟು ಬಸ್ ದರ ಏರಿಕೆ ಮಾಡುವ ಶಿಫಾರಸ್ಸು ಇದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ, ಆದರೆ ಏಕಾಏಕಿ ದರ ಹೆಚ್ಚಳ ಮಾಡುವುದು ಸರಿಯಲ್ಲ ಎಂದು ಕಳೆದು ಮೂರ್ನಾಲ್ಕು ತಿಂಗಳಿನಿಂದ ಡೀಸೆಲ್ ದರ ಇಳಿಕೆಯಾಗುವುದೇ ಎಂದು ಕಾದಿದ್ದಾಯಿತು.
ಆದರೆ ಡೀಸೆಲ್ ದರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ 186ಕೋಟಿ ರೂ.ನಷ್ಟು ನಷ್ಟವಾಗಿದೆ. ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದು ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಸಾರಿಗೆ ಸಂಚಾರ ನಿಯಂತ್ರಣಕ್ಕೆ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ, ಬಸ್‌ಗಳ ಖರೀದಿ ಸದ್ಯಕ್ಕಿಲ್ಲ ಹಳೆಯ ಬಸ್‌ಗಳನ್ನೇ ಪರ್ಯಾಯವಾಗಿ ಓಡಿಸಲಾಗುತ್ತದೆ. ಅಗತ್ಯವಿರುವ ಕಡೆ ಹೆಚ್ಚಿನ ಬಸ್‌ಗಳನ್ನು ನಿಯೋಜಿಸಲಾಗುತ್ತದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗುವಂತೆ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಖಾಸಗಿಯವರು ವಿಶೇಷ ದಿನಗಳಲ್ಲಿ ದರ ಹೆಚ್ಚಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ, ಆದಷ್ಟು ಬೇಗ ನೆನಗುದಿಗೆ ಬಿದ್ದಿರುವ 760 ಆರ್‌ಟಿಓ ಹಾಗೂ ಟ್ರಾಫಿಕ್ ನಿರೀಕ್ಷಕರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಅವರು ತಿಳಿಸಿದರು.












Click it and Unblock the Notifications