ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಭರಿಸಲಿರುವ ಸರ್ಕಾರ: ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜನವರಿ 20: ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ.

ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು ಧಾರವಾಡದ ಎಸ್‌.ಡಿ.ಎಂ. ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಚಿಕಿತ್ಸೆ ಸಂದರ್ಭದಲ್ಲಿ ಗೊತ್ತಾಗಿದೆ. ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ.

Karnataka State govt. to bear treatment cost of poet Chennaveera Kanavi: CM Bommai

'ಕಣವಿ ಅವರು ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು. ಹಾಗೂ ರಾಜ್ಯದ ಬೌದ್ಧಿಕ ಸಂಪತ್ತು. ಅವರು ಚೇತರಿಸಿಕೊಂಡು ಆರೋಗ್ಯ ಪೂರ್ಣ ಜೀವನ ನಡೆಸಬೇಕು ಎಂಬುದು ನಮ್ಮ ಬಯಕೆ. ಹೀಗಾಗಿ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

English summary
The State government has decided to bear the treatment cost of renowned litterateur Chennaveera Kanavi who is under treatment at the SDM hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X