ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಳ್ಳಿಗಳಲ್ಲಿ ಉದ್ಯೋಗ ಸೃಷ್ಟಿಗೆ ಮಿನಿ ಸೂಪರ್ ಮಾರ್ಕೆಟ್‌!

By Nayana
|
Google Oneindia Kannada News

ಬೆಂಗಳೂರು, ಜೂನ್ 23: ಗ್ರಾಮೀಣ ಭಾಗದಲ್ಲಿ ಯುವಕರು ಕೆಲಸಕ್ಕಾಗಿ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಅವರಿಗೆ ಉದ್ಯೋಗ ಕಲ್ಪಿಸಿಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹಳ್ಳಿಗಳಲ್ಲಿ ಮಿನಿ ಸೂಪರ್ ಮಾರ್ಕೆಟ್‌ ಆರಂಭಿಸಲು ಚಿಂತನೆ ನಡೆಸಿದೆ.

ಈ ಕುರಿತು ಸಚಿವ ಪ್ರಯಾಂಕ್‌ ಖರ್ಗೆ ಮಾತನಾಡಿ, ಹಳ್ಳಿಗಳಲ್ಲಿ ಉದ್ಯೋಗ ಕಾಣದೆ ಅಕ್ಷರಸ್ಥ ಯುವಕರು ನಗರಗಳೆಡೆಗೆ ಧಾವಿಸುತ್ತಿದ್ದಾರೆ ಅಂಥವರಿಗೆ ಅಲ್ಲಿಯೇ ಉದ್ಯೋಗವನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶವಾಗಿದೆ.

200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಎಸ್ಆರ್‌ಟಿಸಿ200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಎಸ್ಆರ್‌ಟಿಸಿ

ಸರ್ಕಾರವು ಸದ್ಯ ಐದು ಸಾವಿರ ಗ್ರಾಮೀಣ ಉದ್ಯಮಿಗಳನ್ನು ಟಾರ್ಗೆಟ್ ಮಾಡುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ 200 ಮಿನಿ ಸೂಪರ್‌ ಮಾರ್ಕೆಟ್‌ಗಳನ್ನು ಆರಂಭಿಸುವ ಯೋಜನೆ ಇದೆ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

State govt to open 200 mini super markets in rural Karnataka

ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಪ್ರಮುಖ ಉತ್ಪನ್ನ ತಯಾರಿಕಾ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ. ಮಿನಿ ಸೂಪರ್ ಮಾರ್ಕೆಟ್ ಗಳಲ್ಲಿ ಸೋಪ್ಸ್, ಟೂತ್ ಪೇಸ್ಟ್, ಪ್ಯಾಕೇಜಡ್ ಫೂಡ್ಸ್, ಬಿಸ್ಕಿಟ್ಸ್, ಹಾಲು ಉತ್ಪನ್ನ ಮತ್ತು ತರಕಾರಿ ಸೇರಿದಂತೆ ನಿತ್ಯ ಬಳಕೆಯ ಎಲ್ಲಾ ವಸ್ತುಗಳು ಸಿಗಲಿವೆ.

ಉತ್ಪನ್ನಗಳ ಖರೀದಿಗೆ ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ನೆರವು ನೀಡುವುದಿಲ್ಲ. ಆದರೆ ಗ್ರಾಮೀಣ ಯುವಕರ ಮತ್ತು ಕಂಪನಿಗಳ ನಡುವೆ ಸೇತುವೆಯಾಗಿ ಕೆಲಸ ಮಾಡಲಿದೆ ಎಂದು ಸಚಿವರು ತಿಳಿಸಿದ್ದಾರೆ. ಸಬ್ಸಿಡಿ ದರದಲ್ಲಿ ಉತ್ಪನ್ನಗಳನ್ನು ಸರಬರಾಜು ಮಾಡುವ ಕಂಪನಿಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ. ಇದರಿಂದ ಸಣ್ಣ ಉದ್ಯಮಿಗಳಿಗೆ ಮತ್ತು ಹಳ್ಳಿ ಯುವಕರಿಗೆ ಸಹಾಯವಾಗಲಿದೆ ಎಂದು ಖರ್ಗೆ ಹೇಳಿದ್ದಾರೆ.

ಸದ್ಯ ಗ್ರಾಮೀಣ ಪ್ರದೇಶದ ಜನ ಪ್ರತಿಯೊಂದಕ್ಕೂ ಸಮೀಪದ ಪಟ್ಟಣಗಳಿಗೆ ಹೋಗುತ್ತಿದ್ದಾರೆ. ಈ ಮಿನಿ ಸೂಪರ್ ಮಾರ್ಕೆಟ್ ಆರಂಭಿಸುವುದರಿಂದ ಅಗತ್ಯ ವಸ್ತುಗಳು ದೊರೆಯುವಂತಾಗುತ್ತದೆ ಎಂದಿದ್ದಾರೆ. ಮಿನಿ ಸೂಪರ್ ಮಾರ್ಕೆಟ್ ಆರಂಭಿಸುವ ಕಂಪನಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.

English summary
Social welfare minister Priyank Kharge intended that the state government will open over 200 hundred mini super markets to provide employment to rural graduates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X