ಭತ್ತದ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್‌ಗೆ 2 ಸಾವಿರ ರೂ.ನಂತೆ ಖರೀದಿ
ಬೆಂಗಳೂರು, ಅಕ್ಟೋಬರ್ 26: ಸರ್ಕಾರ ಮುಂದಿನ ಹಂಗಾಮಿನಲ್ಲಿ ಬೆಳೆಯುವ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಮುಂದಾಗಿದೆ. ಪ್ರತಿ ಕ್ವಿಂಟಾಲ್‌ಗೆ 1200ರೂನಂತೆ ಖರೀದಿಸಲು ಮುಂದಾಗಿದೆ.
ಭತ್ತಕ್ಕೆ ಸರ್ಕಾರ ಈಗಾಗಲೇ 1200-1300ರೂ ದರ ನಿಗದಿ ಮಾಡಿದೆ, ಇದರ ಬದಲು ಪ್ರತಿ ಕೆಜಿಗೆ 20ರೂನಂತೆ ಪ್ರತಿ ಕ್ವಿಂಟಾಲ್‌ಗೆ 2ಸಾವಿರ ರೂನಂತೆ ನಿಗದಿ ಮಾಡಲು ನಿರ್ಧರಿಸಲಾಗಿದೆ.

ಕೆಎಂಎಫ್ ಮೂಲಕ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡಲು ಕರೆದಿದ್ದ ಸರ್ಕಾರದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಛತ್ತೀಸ್‌ಗಢದಲ್ಲಿ ಅಕ್ಕಿಯನ್ನು ಪ್ರತಿ ಕೆಜಿಗೆ 26ರೂ ಕೊಟ್ಟು ಖರೀದಿ ಮಾಡಲಾಗುತ್ತದೆ ಆದರೆ ಕರ್ನಾಟಕದಲ್ಲಿ ನೇರವಾಗಿ ಭತ್ತವನ್ನೇ ಖರೀದಿ ಮಾಡಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ.

ಈ ವರ್ಷ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳ ಬೆಳೆ ನಿರೀಕ್ಷೆ ಮಾಡಲಾಗಿದೆ. ಮಧ್ಯವರ್ತಿಗಳ ಹಾವಳಿಯಿಂದ ರೈತರನ್ನು ರಕ್ಷಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.












Click it and Unblock the Notifications