ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಬೆಳಗಾವಿ ಅಧಿವೇಶನದಲ್ಲಿ ಮಂಡನೆ

ಬೆಂಗಳೂರು, ಅಕ್ಟೋಬರ್ 27: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎನ್ನುವುದು ಕನ್ನಡಿಗರ ಬಹುದಿನಗಳ ಬೇಡಿಕೆಯಾಗಿದೆ. ಆದರೆ ರಾಜ್ಯ ಸರ್ಕಾರವು ಅದಕ್ಕೆ ಒಪ್ಪಿಗೆ ಸೂಚಿಸಿದ್ದರೂ ಕೂಡ ಇದುವರೆಗೂ ಯಾವುದೇ ಆದೇಶ ಹೊರಬಿದ್ದಿಲ್ಲ.

ಕರ್ನಾಟಕದಲ್ಲಿ ಬೇರೆ ರಾಜ್ಯಗಳಿಂದ ಹಾಗೂ ವಿದೇಶದಿಂದ ಬಂದು ಉದ್ಯೋಗ ಗಿಟ್ಟಿಸಿಕೊಳ್ಳುತ್ತಿದ್ದಾರೆ ಆದರೆ ಕರ್ನಾಟಕದಲ್ಲೊ ಹುಟ್ಟಿ ಇಲ್ಲೇ ವಿದ್ಯಾಭ್ಯಾಸ ಪೂರೈಸಿರುವವರಿಗೆ ಉದ್ಯೋಗ ಸಿಗುತ್ತಿಲ್ಲ ಎನ್ನುವುದು ಕನ್ನಡಿಗರ ನೋವಾಗಿತ್ತು. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ವಿಚಾರ ಕೊನೆಗೂ ಕಾಯ್ದೆಯನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ.

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗುವ ನಿರೀಕ್ಷೆ ಇದೆ, ಈಗಾಗಲೇ ವಿಧೇಯಕಗಳಿಗಿದ್ದ ಕಾನೂನು ತೊಡಕು ಸಂಪೂರ್ಣವಾಗಿ ನಿವಾರಣೆಯಾಗಿದೆ. ವಿಧೇಯಕ ಮಂಡನೆ ನಂತರ ಉಭಯ ಸದನಗಳಲ್ಲಿ ಚರ್ಚೆ ನಡೆಯಲಿದೆ. ನಂತರ ವಿಧೇಯಕವನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುತ್ತದೆ. ರಾಜ್ಯಪಾಲರಿಂದ ಅಂಕಿತಗೊಂಡ ಬಳಿಕ ವಿಧೇಯಕ ಜಾರಿಯಾಗುತ್ತದೆ.

State govt to table bill on reservation for Kannadigas in industry sector

ಡಾ. ಸರೋಜಿನಿ ಮಹಿಷಿ ವರದಿ ಆಧರಿಸಿ ಮಾಡಿರುವ ವಿಧೇಯಕ ಇದಾಗಿದೆ. ಎ ವೃಂದದ ನೌಕರಿಯಲ್ಲಿ ಶೇ.65, ಬಿ ವೃಂದದ ನೌಕರಿಯಲ್ಲಿ ಶೇ.80 ಹಾಗೂ ಸಿ ಮತ್ತು ಡಿ ವೃಂದದ ನೌಕರಿಯಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಕುರಿತು ವರದಿಯಲ್ಲಿ ಉಲ್ಲೇಖವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+