ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಜಾಹೀರಾತುಗಳಿಗೆ ತೆರಿಗೆ ಇಲ್ಲ; ಹೈಕೋರ್ಟ್

ಬೆಂಗಳೂರು, ಡಿಸೆಂಬರ್ 25; ಮಹತ್ವದ ಅದೇಶವೊಂದರಲ್ಲಿ ಕರ್ನಾಟಕ ಹೈಕೋರ್ಟ್, ಪುರಸಭೆ ಮತ್ತು ನಗರಸಭೆ ವ್ಯಾಪ್ತಿಯಲ್ಲಿ ಅಳವಡಿಸಲಾಗುವ ಜಾಹೀರಾತು ಹೋರ್ಡಿಂಗ್ಸ್‌ಗಳಿಗೆ ತೆರಿಗೆ ವಿಧಿಸುವಂತಿಲ್ಲ ಎಂದು ಆದೇಶಿಸಿದೆ.

ದಾವಣಗೆರೆಯ ರಹೀಲ್ ಕಮ್ಯುನಿಕೇಷನ್ಸ್, ಬೆಂಗಳೂರಿನ ಔಟ್‌ಡೋರ್ ಅಡ್ವರ್ಟೈಸಿಂಗ್ ಅಸೋಸಿಯೇಷನ್ ಮತ್ತಿತರ ಜಾಹೀರಾತು ಕಂಪನಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ಜಿ. ಎಸ್. ಕಮಲ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.

ಅಲ್ಲದೆ, ಜಾಹೀರಾತುಗಳಿಗೆ ತೆರಿಗೆ ವಿಧಿಸಲು ಅವಕಾಶ ಕಲ್ಪಿಸಿದ್ದ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ-1976ರ ಹಾಗೂ ಕೆಎಂಸಿ ಕಾಯ್ದೆ-1974ರ ಹಲವು ಸೆಕ್ಷನ್‌ಗಳನ್ನು ರದ್ದುಪಡಿಸಿದೆ. ಈ ಸಂಬಂಧ ಪುರಸಭೆ ಮತ್ತು ನಗರಸಭೆಗಳು ವಿಸ್ತೃತ ಬ್ರೇಕ್ ಅಪ್ ನೀಡಬೇಕು.

court

ಒಂದು ವೇಳೆ, ಅರ್ಜಿದಾರರು ಸರ್ಕಾರಕ್ಕೆ ಯಾವುದೇ ತೆರಿಗೆ ಪಾವತಿಸುವಂತಿಲ್ಲಎಂದಾದರೆ ಈಗಾಗಲೇ ಅವರು ಪಾವತಿಸಿರುವ ಹಣವನ್ನು ಹಿಂದಿರುಗಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಸರ್ಕಾರಕ್ಕೆ ಅಧಿಕಾರವಿಲ್ಲ: 2016ರಲ್ಲಿಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಜಾರಿಗೊಳಿಸಲು ಸಂವಿಧಾನಕ್ಕೆ 101ನೇ ತಿದ್ದುಪಡಿಯನ್ನು ಸಂಸತ್ ಮಾಡಿರುವುದರಿಂದ ಸಂವಿಧಾನದ 8ನೇ ಷೆಡ್ಯೂಲ್‌ನ 2ನೇ ಪಟ್ಟಿಯಲ್ಲಿನ ಎಂಟ್ರಿ ಸಂಖ್ಯೆ 55 ಅನ್ನು ಕೈಬಿಡಲಾಗಿದೆ. ಆದ್ದರಿಂದ, ಜಾಹೀರಾತು ತೆರಿಗೆಗೆ ಸಂಬಂಧಿಸಿದಂತೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಜತೆಗೆ, ಸಂವಿಧಾನದ 7ನೇ ಷೆಡ್ಯೂಲ್‌ನ 2ನೇ ಪಟ್ಟಿಯ (ರಾಜ್ಯ ಪಟ್ಟಿ), ಎಂಟ್ರಿ 55 ಅನ್ನು ಕೈಬಿಟ್ಟಿರುವುದರಿಂದ ಪುರಸಭೆ ಮತ್ತು ನಗರಸಭೆಗಳಿಗೆ ಜಾಹೀರಾತು ತೆರಿಗೆ ವಿಧಿಸಲು ಮತ್ತು ಅದನ್ನು ಸಂಗ್ರಹಿಸಲು ಅಧಿಕಾರವಿಲ್ಲಎಂದಿರುವ ಹೈಕೋರ್ಟ್, ಜಾಹೀರಾತುಗಳಿಗೆ ತೆರಿಗೆ ವಿಧಿಸಲು ಅವಕಾಶ ಕಲ್ಪಿಸಿದ್ದ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಯ ಸೆಕ್ಷನ್‌ಗಳಾದ 103(ಬಿ)(4) ಮತ್ತು 134 ಕೆಎಂಸಿ ಕಾಯ್ದೆಯ ಸೆಕ್ಷನ್‌ಗಳಾದ 133(1), 132(2)(2) ಸೇರಿ ವಿವಿಧ ಸೆಕ್ಷನ್‌ಗಳು ಅಸಾಂವಿಧಾನಿಕವಾಗಿದ್ದು, ಅವುಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಿದೆ.

ಅರ್ಜಿದಾರರ ಆಕ್ಷೇಪವೇಕೆ?; ಅರ್ಜಿದಾರರು, ಸಂವಿಧಾನಕ್ಕೆ 101ನೇ ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ ಜಾಹೀರಾತು ತೆರಿಗೆ ಕುರಿತು ಕಾನೂನು ರೂಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ. ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ- 2017ಮತ್ತು ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ-2017 ಜಾರಿಗೊಳಿಸಿರುವುದರಿಂದ ಸರಕು ಮತ್ತು ಸೇವಾ ತೆರಿಗೆಯಲ್ಲೇ ಜಾಹೀರಾತು ತೆರಿಗೆಯೂ ಸೇರಿರುತ್ತದೆ. ಆದ್ದರಿಂದ, ಪುರಸಭೆ ಮತ್ತು ನಗರಸಭೆಗೆ ಜಾಹೀರಾತು ತೆರಿಗೆ ವಿಧಿಸುವ ಅಧಿಕಾರ ನೀಡಿರುವ ನಿಯಮಗಳು ಅಸಾಂವಿಧಾನಿಕ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+