ಸರಕಾರಕ್ಕೆ 'ಪದ್ಮಾವತಿ' ಬಿಡುಗಡೆ ತಡೆಯುವ ಅಧಿಕಾರವಿಲ್ಲ: ರಾಮಲಿಂಗಾ ರೆಡ್ಡಿ

ಬೆಳಗಾವಿ, ನವೆಂಬರ್ 17: ಹಿಂದಿ ಸಿನಿಮಾ ಪದ್ಮಾವತಿ ಬಿಡುಗಡೆಯಾಗದಂತೆ ತಡೆಯುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಸಿನಿಮಾ ಬಿಡುಗಡೆಯನ್ನು ತಡೆಯುವ ಹಕ್ಕು ಸೆನ್ಸಾರ್ ಮಂಡಳಿಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ. ಇದೇ ನವೆಂಬರ್ 30ರಂದು ಸಿನಿಮಾ ಬಿಡುಗಡೆಯಾಗಲಿದೆ.

State have no power to stop Padmavati: Ramalinga Reddy

ಗುರುವಾರ ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಲೆಹರ್ ಸಿಂಗ್ ಪ್ರಶ್ನೆಗೆ ಉತ್ತರಿಸಿದ ರೆಡ್ಡಿ, ಪದ್ಮಾವತಿ ನಿರ್ದೇಶಕರು ಇತಿಹಾಸವನ್ನು ತಿರುಚಿದ್ದಾರೆ ಎನ್ನಲು ನಾನು ಸಿನಿಮಾ ನೋಡಿಲ್ಲ ಎಂದು ಹೇಳಿದ್ದಾರೆ.

ಸಿನಿಮಾ ಬಿಡುಗಡೆಗೆ ರಜಪೂತರು ಭಾರೀ ವಿರೋಧ ವ್ಯಕ್ತಪಡಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಆದರೆ ಸಿನಿಮಾ ಬಿಡುಗಡೆಗೆ ಸೆನ್ಸಾರ್ ಮಂಡಳಿ ಅನುಮೋದನೆ ನೀಡಿರುವುದರಿಂದ ಬಿಡುಗಡೆ ತಡೆಯಲು ಸರಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+