'ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ'

ಬೆಂಗಳೂರು, ಫೆಬ್ರವರಿ 22: ಹಳೆಯ ಹೋಟೆಲ್‌ ಕಟ್ಟಡದೊಳಗೆ 32 ವರ್ಷದ ವಿವಾಹಿತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕಿಡಿಕಾರಿದ್ದಾರೆ.

ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 32 ವರ್ಷದ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

State Law Enforcement Fails to Protect Women in Karnataka-B Y Vijayendra

ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಮಾತ್ರ, ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ.

ಒಂದು ಕಡೆ ಅಭಿವೃದ್ಧಿಯೂ ಇಲ್ಲ, ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ, ಕನಿಷ್ಠ ಕಾನೂನು ಸುರಕ್ಷಣೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿ ದುರುಳರ ವಿರುದ್ಧ ಕಠಿಣ ಕ್ರಮಕ್ಕೆ ಒಳಪಡಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

State Law Enforcement Fails to Protect Women in Karnataka-B Y Vijayendra

ಸರಣಿ ರೂಪದಲ್ಲಿ ನಡೆಯುತ್ತಿರುವ ಕೊಲೆ, ದರೋಡೆ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದ್ದು, ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೆ ಈ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯ ಬಿಜೆಪಿ ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಭದ್ರತೆಗಾಗಿ ಹೋರಾಡಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+