ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಮತ್ತೆ ಚಿಂತನೆ

|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿ ಸರ್ಕಾರದಿಂದ ಬಸ್ ಪ್ರಯಾಣ ದರ ಶೇ 15ರಷ್ಟು ಹೆಚ್ಚಳಕ್ಕೆ ಚಿಂತನೆ | Oneindia Kannada

ಬೆಂಗಳೂರು, ಸೆಪ್ಟೆಂಬರ್ 20: ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಸರ್ಕಾರಿ ಬಸ್ ಗಳು ನಷ್ಟ ಅನುಭವಿಸುತ್ತಿರುವ ಕಾರಣ ಬಸ್ ದರವನ್ನು ಶೇ.18ರಷ್ಟು ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಆದರೆ ಇದೀಗ ದರ ಹೆಚ್ಚಳವನ್ನು ಮತ್ತೊಮ್ಮೆ ಪರಿಷ್ಕರಿಸಿ ಶೇ.15ರಷ್ಟು ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಕೆಲ ತಿಂಗಳಿಂದ ಸತತ ಡೀಸೆಲ್ ದರ ಏರಿಕೆಯಾದ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳಿಗೆ ಮಾಸಿಕ 15 ಕೋಟಿ ರೂ.ಗೂ ಅಧಿಕ ಹೆಚ್ಚುವರಿ ಹೊರೆಯಾಗುತ್ತಿತ್ತು, ಈ ಹಿನ್ನೆಲೆಯಲ್ಲಿ ನಾಲ್ಕು ನಿಗಮಗಳು ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು.

ಬಸ್ ಪ್ರಯಾಣ ದರ ಏರಿಕೆ ಆದೇಶಕ್ಕೆ ಬ್ರೇಕ್ ಹಾಕಿದ ಕುಮಾರಸ್ವಾಮಿ ಬಸ್ ಪ್ರಯಾಣ ದರ ಏರಿಕೆ ಆದೇಶಕ್ಕೆ ಬ್ರೇಕ್ ಹಾಕಿದ ಕುಮಾರಸ್ವಾಮಿ

ಸೆ.17ರಂದು ದರ ಏರಿಸಿ ಸುತ್ತೋಲೆ ಹೊರಡಿಸಿತ್ತು, ಒಂದೆಡೆ ಡೀಸೆಲ್ ದರ ಕಡಿಮೆಗೊಳಿಸಿ, ಅದರ ಬೆನ್ನಲ್ಲೇ ಟಿಕೆಟ್ ದರ ಏರಿಸಿದ್ದಕ್ಕೆ ಸಾರ್ವಜನಿಕ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು, ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ದರ ಏರಿಕೆ ತಡೆಹಿಡಿಯಲಾಗಿತ್ತು.

State owned transport bus fare may hike up to 15 percent

ಬಸ್‌ ಪ್ರಯಾಣ ದರ ಶೇ.18ರಷ್ಟು ಹೆಚ್ಚಳಕ್ಕೆ ಸರ್ಕಾರ ಚಿಂತನೆ ಬಸ್‌ ಪ್ರಯಾಣ ದರ ಶೇ.18ರಷ್ಟು ಹೆಚ್ಚಳಕ್ಕೆ ಸರ್ಕಾರ ಚಿಂತನೆ

ಇದೀಗ ಮುಖ್ಯಮಂತ್ರಿ ಸೂಚನೆ ಮೇರೆಗೆ ಸಾರಿಗೆ ಇಲಾಖೆಯು ಟಿಕೆಟ್ ದರ ಪ್ರಸ್ತಾವನೆಯನ್ನು ಮರು ಪರಿಶೀಲಿಸಲು ಮುಂದಾಗಿದೆ ಇದರ ಪ್ರಕಾರ ಸಾರಿಗೆ ಪ್ರಯಾಣ ದರ ಶೇ.15-16ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

English summary
State government is thinking to increase State owned transport bus fare up to 15 percent instead of 18 percent which was declared and withdrawn earlier. The corporation is seriously running under the loss as fuel prices have gone beyond expectations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X