ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಕ್ಕೆ 15 ಲಕ್ಷಕ್ಕೂ ಹೆಚ್ಚು ಕೋವಿಡ್ ಡೋಸ್: ಡಾ.ಕೆ.ಸುಧಾಕರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 5: ರಾಜ್ಯಕ್ಕೆ ಕೇಂದ್ರ ಸರ್ಕಾರವು 15 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ ನೀಡಿದ್ದು, ಮತ್ತಷ್ಟು ಜನರು ಲಸಿಕೆ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಿನ್ನೆವರೆಗೆ 46,02,000 ಮಂದಿಗೆ ಲಸಿಕೆ ನೀಡಲಾಗಿದೆ. 12 ಲಸಿಕೆ ರಾಜ್ಯದಲ್ಲಿತ್ತು. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಮಾತುಕತೆ ನಡೆಸಿದ ಬಳಿಕ 15 ಲಕ್ಷಕ್ಕೂ ಹೆಚ್ಚು ಲಸಿಕೆ ದೊರೆತಿದೆ. 10 ಲಕ್ಷ ಡೋಸ್ ಬೆಂಗಳೂರಿಗೆ ಹಾಗೂ 5 ಲಕ್ಷ ಡೋಸ್ ಬೆಳಗಾವಿಗೆ ಕಳುಹಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ರಜೆ ಇದ್ದಿದ್ದರಿಂದ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಇನ್ನಷ್ಟು ಇಳಿಕೆ ಮಾಡಬಹುದು. ಎಂಟು ರಾಜ್ಯಗಳೊಂದಿಗೆ ಪ್ರಧಾನಿಯವರು ಸಭೆ ನಡೆಸಿ, ಕಠಿಣ ನಿರ್ಧಾರ ಕೈಗೊಳ್ಳುವಂತೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಠಿಣ ನಿರ್ಧಾರ ವಹಿಸಲಾಗಿದೆ. ನಮ್ಮ ರಾಜ್ಯದಲ್ಲಿ ಆ ಬಗೆಯ ಪರಿಸ್ಥಿತಿ ಬರುವುದು ಬೇಡ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವುದಿಲ್ಲ ಎಂದು ಭಾವಿಸುವುದು ಬೇಡ ಎಂದರು.

State Received more than 15 lakh additional doses of Vaccine: Sudhakar

ಸೋಂಕಿತರ ಸಂಖ್ಯೆ ಹೆಚ್ಚಾದರೆ ಹಾಸಿಗೆ ಕೊರತೆಯಾಗುತ್ತದೆ. ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳ ಬಳಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಇನ್ನಷ್ಟು ಚರ್ಚೆ ಮಾಡುತ್ತೇನೆ. ಇನ್ನೂ ಮೇ ಅಂತ್ಯದವರೆಗೆ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ತಾಂತ್ರಿಕ ಸಲಹಾ ಸಮಿತಿಯವರು ಹೇಳಿದ್ದಾರೆ. ಎರಡನೇ ಅಲೆಯನ್ನು ನಿಯಂತ್ರಿಸಿ ಜೀವ ಉಳಿಸುವ ಕೆಲಸ ಮಾಡಬೇಕು. ಇದಕ್ಕೆ ಎಲ್ಲ ಸಹಕಾರ ಬೇಕು ಎಂದು ಮನವಿ ಮಾಡಿದರು.

ಬೆಂಗಳೂರಿನಲ್ಲಿ ದಿನಕ್ಕೆ ಆರೂವರೆ ಸಾವಿರ ಸೋಂಕಿತರು ಕಂಡುಬರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಸೋಂಕು ನಿಯಂತ್ರಣ ಮಾಡದಿದ್ದರೆ ಅಂತಹ ಪರಿಸ್ಥಿತಿ ಬರಬಹುದು. ವಿರೋಧ ಪಕ್ಷಗಳ ಸಲಹೆಗಳನ್ನು ಕೂಡ ನಾವು ಪಡೆಯುತ್ತೇವೆ. ಸಮಯ ಬಂದಾಗ ಪ್ರತಿಪಕ್ಷದವರನ್ನು ಕೂಡ ಕರೆದು ಚರ್ಚಿಸೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಗಳಲ್ಲಿ ಕೋವಿಡ್ ಗೆ ಹೆಚ್ಚು ಹಾಸಿಗೆ ಮೀಸಲಿಡುವ ಅಗತ್ಯವಿದೆ. ಇದರ ಕಡೆ ಹೆಚ್ಚು ಲಕ್ಷ್ಯ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಶೇ.20 ರಷ್ಟು ಹಾಸಿಗೆ ಮೀಸಲಿಡಬೇಕೆಂದು ಹೇಳಲಾಗಿದೆ. ಈ ಪ್ರಮಾಣವನ್ನೂ ಹೆಚ್ಚಿಸಬೇಕಿದೆ ಎಂದರು.

Recommended Video

#Covid19Update: 24 ಗಂಟೆಗಳಲ್ಲಿ ದೇಶದಲ್ಲಿ 96,982 ಜನರಿಗೆ ಕೊರೊನಾ ಸೋಂಕು ದೃಢ | Oneindia Kannada

English summary
State Received more than 15 lakh additional doses of Vaccine. 10 lakh doses for Bengaluru and 5 lakh for Belagavi said Health & Medical Education Minister Dr.K.Sudhakar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X