ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಗನವಾಡಿ ಕೇಂದ್ರಗಳಲ್ಲಿ ಫ್ಯಾನ್, ವಿದ್ಯುತ್, ಶೌಚಾಲಯ ಇರಬೇಕು: ಶಿಫಾರಸು

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು,ಜು.5. ರಾಜ್ಯದ ಜನಸಂಖ್ಯೆಗೆ ಅನುಗುಣವಾಗಿ ಅಂಗನವಾಡಿ ತೆರೆಯಬೇಕು, ಹಾಲಿ ಬಾಡಿಗೆ ಕಟ್ಟಡದಲ್ಲಿರುವ ಕೇಂದ್ರಗಳಿಗೆ ಸರ್ಕಾರಿ ಜಾಗದಲ್ಲಿ ಕಾಯಂ ಕಟ್ಟಡ ಒದಗಿಸಬೇಕು, ಪ್ರತಿ ಕೇಂದ್ರಕ್ಕೂ ಫ್ಯಾನ್, ವಿದ್ಯುತ್, ಶೌಚಾಲಯ ಮತ್ತಿತರ ಮೂಲಸೌಕರ್ಯ ಒದಗಿಸಬೇಕು ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ಎನ್‌. ವೇಣುಗೋಪಾಲಗೌಡ ಅವರ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ.

ಅಲ್ಲದೆ, ನಗರ ಪ್ರದೇಶದ ಕೊಳಗೇರಿಗಳು, ಎಸ್ಸಿ, ಎಸ್ಟಿ ಸಮುದಾಯಗಳ ವಸತಿ ಪ್ರದೇಶಗಳು, ಅಲ್ಪಸಂಖ್ಯಾತರು, ಬುಡಕಟ್ಟು-ಆದಿವಾಸಿ ಸಮುದಾಯಗಳು ವಾಸವಾಗಿರುವ ಪ್ರದೇಶಗಳಲ್ಲಿಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಒತ್ತು ನೀಡಬೇಕು ಎಂದೂ ಹೇಳಿದೆ. ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿ ಜಿಲ್ಲೆಅಥಣಿಯ 'ವಿಮೋಚನಾ ಸಂಘ' ಎಂಬ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್‌. ಪಾಟೀಲ್‌ಸಲ್ಲಿಸಿದ್ದ ಪಿಐಎಲ್ ಮಂಗಳವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್‌ ಆರಾಧೆ ಮತ್ತು ನ್ಯಾ. ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ವೇಳೆ ಸರ್ಕಾರದ ಪರ ವಕೀಲರು, ಹೈಕೋರ್ಟ್‌ ನಿರ್ದೇಶನದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಚಿಸಲಾದ ರಾಜ್ಯದಲ್ಲಿನ ಅಪೌಷ್ಠಿಕ ಮಕ್ಕಳು, ಗರ್ಭೀಣಿಯರು, ಬಾಣಂತಿಯರು, ಹಾಲುಣಿಸುವ ತಾಯಿಂದಿರು, ಕಿಶೋರಾವಸ್ಥೆಯ ಹೆಣ್ಣುಮಕ್ಕಳನ್ನು ಗುರುತಿಸುವ, ಆರೋಗ್ಯ ತಪಾಸಣೆ ಮಾಡುವ, ಚಿಕಿತ್ಸೆ ಒದಗಿಸುವ ಕಾರ್ಯಕ್ರಮಗಳ ಮೇಲ್ವಿಚಾರಣೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ಎನ್‌. ವೇಣುಗೋಪಾಲಗೌಡ ಅವರ ನೇತೃತ್ವದ ಸಮಿತಿಯ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

 Karnataka state to start new aganavadi kendras as per population: recommended

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾ. ಎನ್‌.ಕೆ. ಪಾಟೀಲ್‌ ನೇತೃತ್ವದ ಸಮಿತಿ 2012ರಲ್ಲಿಮಾಡಿದ್ದ ಶಿಫಾರಸುಗಳನ್ನು ಆಧರಿಸಿ, ನ್ಯಾ. ಎ.ಎನ್‌. ಗೋಪಾಲಗೌಡ ನೇತೃತ್ವದ ಸಮಿತಿ ವರದಿ ಸಲ್ಲಿಸಿದೆ. ಹೈಕೋರ್ಟ್‌ ನಿರ್ದೇಶನದಂತೆ 2021ರಲ್ಲಿಈ ಸಮಿತಿ ರಚಿಸಲಾಗಿತ್ತು. ಕಾಲ-ಕಾಲಕ್ಕೆ ಒಟ್ಟು 12 ಸಭೆಗಳನ್ನು ನಡೆಸಿರುವ ಸಮಿತಿಯು ಎಲ್ಲಾವಿಷಯಗಳನ್ನು ವಿಸ್ತೃತವಾಗಿ ಚರ್ಚಿಸಿ ಹಲವು ಪ್ರಮುಖ ಶಿಫಾರಸುಗಳನ್ನು ಮಾಡಿದೆ.

ಸಮಿತಿಯ ಶಿಫಾರಸುಗಳಲ್ಲಿ ಪ್ರಮುಖವಾದುವುಗಳೆಂದರೆ, ರಾಜ್ಯದಲ್ಲಿ 2011ರ ಜನಸಂಖ್ಯೆಗೆ ಅನುಗುಣವಾಗಿಯೂ ಅಂಗನವಾಡಿ ಕೇಂದ್ರಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಹೆಚ್ಚುವರಿ ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲು 1 ವರ್ಷದಲ್ಲಿರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು.

ರಾಜ್ಯದಲ್ಲಿ20,544 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿನಡೆಯುತ್ತಿವೆ. ಈ ವ್ಯವಸ್ಥೆಗೆ ಕಡಿವಾಣ ಹಾಕಲು ಸರ್ಕಾರಿ ಶಾಲೆಗಳ ಕಟ್ಟಡ ಮತ್ತು ಆವರಣದಲ್ಲಿಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಬೇಕು. ಈಗಾಗಲೇ 4 ಸಾವಿರ ಅಂಗನವಾಡಿ ಕೇಂದ್ರಗಳು ಸರ್ಕಾರಿ ಶಾಲೆಗಳ ಕಟ್ಟಡಗಳಲ್ಲಿ ನಡೆಯುತ್ತಿವೆ. ಈ ನಿಟ್ಟಿನಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಮನ್ವಯ ಸಾಧಿಸಬೇಕು.

ರಾಜ್ಯಕ್ಕೆ 4,244 ಹೆಚ್ಚುವರಿ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರ 2022ರಲ್ಲಿಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಅದರಂತೆ ಹೆಚ್ಚುವರಿ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಲು ಕೇಂದ್ರ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು.

English summary
Retired judge committee recommended state to start new aganavadi kendras as per population.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X