ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ಮಾನಸ ರಾಜೀನಾಮೆ

Written By: Ramesh
Subscribe to Oneindia Kannada

ಬೆಂಗಳೂರು, ಅಕ್ಟೋಬರ್.25 : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ಮಾನಸ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನದ ಅವಧಿ ಪೂರ್ಣಗೊಳ್ಳಲು ಇನ್ನೂ ಎಂಟೂವರೆ ತಿಂಗಳು ಬಾಕಿ ಇರುವಾಗಲೇ ಮಂಜುಳಾ ಮಾನಸ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. 'ಪಕ್ಷದ ಇತರ ಕಾರ್ಯಕರ್ತರಿಗೂ ಅವಕಾಶ ಸಿಗಲಿ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಪಕ್ಷದ ಕಾರ್ಯಕರ್ತೆಯಾಗಿ ದುಡಿಯುತ್ತೇನೆ' ಎಂದು ಅವರು ಹೇಳಿದ್ದಾರೆ.

State Women's Commission Chief Manjula Manasa resigns

ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನಿಗಮ ಮಂಡಳಿಗಳ ನೇಮಕಕ್ಕೆ ಒಪ್ಪಿಗೆ ಪಡೆದಿದ್ದಾರೆ. ಆದ್ದರಿಂದ, ಸಿದ್ದರಾಮಯ್ಯ ಸೂಚನೆಯಂತೆ ರಾಜೀನಾಮೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ವೃತ್ತಿಯಿಂದ ವಕೀಲರಾಗಿರುವ ಅವರು ಕಾಂಗ್ರೆಸ್‌ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. 2014ರ ಜೂನ್ ನಲ್ಲಿ ಅವರನ್ನು ಮಹಿಳಾ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿತ್ತು.

ರಾಜ್ಯ ಮಹಿಳಾ ಆಯೋಗದಲ್ಲಿ ಒಬ್ಬರು ಅಧ್ಯಕ್ಷರು ಮತ್ತು 6 ಜನ ಸದಸ್ಯರಿರುತ್ತಾರೆ. ಅಧ್ಯಕ್ಷರ ಅವಧಿ ಮೂರು ವರ್ಷಗಳು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧ್ಯಕ್ಷರನ್ನು ನೇಮಕ ಮಾಡಿ ಅಧಿಕೃತವಾದ ಆದೇಶ ಹೊರಡಿಸುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In a surprising move, Manjula Manasa, the chairperson of the Karnataka State Commission for Women (KSCW) has resigned from her post on Monday, October 24.
Please Wait while comments are loading...