ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಕಿ-ಅಂಶಗಳ ಸಮೇತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಂಪೂರ್ಣ ಮಾಹಿತಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು, ಇಬ್ಬರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿರುವ ಸಂತಸದ ವಿಚಾರ ಒಂದಾದರೆ, ಇನ್ನೊಂದೆಡೆ ಯಾವುದೇ ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಾರದೇ ಇರುವುದು ಇನ್ನೊಂದು ಅಚ್ಚರಿಯ ಸಂಗತಿಯಾಗಿದೆ.

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು, ಈ ಸಮಯದಲ್ಲಿ ಇಲ್ಲ ಸರ್ಕಾರಿ ಶಾಲೆಗಳೂ ನೂರಕ್ಕೆ ನೂರರಷ್ಟು ಫಲಿತಾಂಶವನ್ನು ನೀಡಬಲ್ಲದು ಎಂದು ತೋರಿಸಿಕೊಟ್ಟಿದೆ. ಕಳೆದ ಬಾರಿಗಿಂತ 2019ರ ಫಲಿತಾಂಶದಲ್ಲಿ ಶೇ.1.8ರಷ್ಟು ಹೆಚ್ಚಳವಾಗಿದೆ.

ಜಿಲ್ಲಾವಾರು ಫಲಿತಾಂಶ, ಲಿಂಗವಾರು ಫಲಿತಾಂಶ, ವಿಷಯವಾರು ಫಲಿತಾಂಶ, ಶಾಲಾವಾರು ಫಲಿತಾಂಶ ಇನ್ನಿತರೆ ಹಲವು ವಿಷಯಗಳನ್ನು ನೀವು ಅಂಕಿ ಅಂಶಗಳು ಸಮೇತ ಪಡೆಯಬಹುದಾಗಿದೆ.

ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾ ಶಂಕರ್, ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದರು. ವಿದ್ಯಾರ್ಥಿಗಳು ಮಧ್ಯಾಹ್ನ 1 ಗಂಟೆ ಬಳಿಕ ಆನ್‌ಲೈನ್ ಮೂಲಕ ಇಂದು ಫಲಿತಾಂಶ ಪಡೆಯಬಹುದಾಗಿದೆ.

2019ನೇ ಸಾಲಿನಲ್ಲಿ 2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಮಾರ್ಚ್ 22 ರಿಂದ ಏಪ್ರಿಲ್ 4ರ ತನಕ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿತ್ತು.

SSLC ಫಲಿತಾಂಶ: ಹಾಸನ ಮೊದಲು, ಯಾದಗಿರಿಗೆ ಕೊನೆಯ ಸ್ಥಾನSSLC ಫಲಿತಾಂಶ: ಹಾಸನ ಮೊದಲು, ಯಾದಗಿರಿಗೆ ಕೊನೆಯ ಸ್ಥಾನ

2019ನೇ ಸಾಲಿನಲ್ಲಿ ಶೇ 73.70ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶವನ್ನು ಪಡೆದಿದ್ದಾರೆ.

ಎಸ್‌ಎಸ್‌ಎಲ್‌ಸಿ ಒಟ್ಟಾರೆ ಫಲಿತಾಂಶ

ಎಸ್‌ಎಸ್‌ಎಲ್‌ಸಿ ಒಟ್ಟಾರೆ ಫಲಿತಾಂಶ

2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8,25,468 ವಿದ್ಯಾರ್ಥಿಗಳು ಬರೆದಿದ್ದರು. ಅದರಲ್ಲಿ 608336 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2017-18ರಲ್ಲಿ 838088 ಮಂದಿ ಪರೀಕ್ಷೆ ಬರೆದು 602802 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈಎಸ್‌ಎಸ್‌ಎಲ್‌ಸಿ ಫಲಿತಾಂಶ : ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ

ಶಾಲಾವಾರು ಫಲಿತಾಂಶ

ಶಾಲಾವಾರು ಫಲಿತಾಂಶ

ಶಾಲಾವಾರು ಎಸ್‌ಎಸ್‌ಎಲ್‌ಸಿ ಫಲಿತಾಂಶ
ಒಟ್ಟು 5202 ಸರ್ಕಾರಿ ಶಾಲೆಗಳಿಂದ 2,78,544 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ 2,16,844 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 3243 ಅನುದಾನಿತ ಶಾಲೆಗಳ ಪೈಕಿ 2,00,888 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 155111 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6002 ಅನುದಾನರಹಿತ ಶಾಲೆಗಳಿಂದ 2,59,137 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅವರಲ್ಲಿ 214360ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಎಸ್‌ಎಸ್‌ಎಸ್‌ಸಿ: ಲಿಂಗವಾರು ಫಲಿತಾಂಶ

ಎಸ್‌ಎಸ್‌ಎಸ್‌ಸಿ: ಲಿಂಗವಾರು ಫಲಿತಾಂಶ

2018-19ನೇ ಸಾಲಿನಲ್ಲಿ 437557 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 299587 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 387911 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, 308749 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳು

ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳು

ಒಟ್ಟು ವಿದ್ಯಾರ್ಥಿಗಳ ಪೈಕಿ 625/325 ಅಕಗಳನ್ನು ಇಬ್ಬರು ಪಡೆದಿದ್ದಾರೆ, 11 ಮಂದಿ 624, 19 ಮಂದಿ 623, 39 ಮಂದಿ 622, 43 ವಿದ್ಯಾರ್ಥಿಗಳು 621 ಅಂಕ, 56 ವಿದ್ಯಾರ್ಥಿಗಳು 620 ಅಂಕ ಗಳಿಸಿದ್ದಾರೆ.

ವಿಷಯವಾರು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ವಿವರ

ವಿಷಯವಾರು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ವಿವರ

ಪ್ರಥಮ ಭಾಷೆಯಲ್ಲಿ 8620 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ದ್ವಿತೀಯಭಾಷೆಯಲ್ಲಿ 3404 ವಿದ್ಯಾರ್ಥಿಗಳು, ತೃತೀಯ ಭಾಷೆಯಲ್ಲಿ 8138 ವಿದ್ಯಾರ್ಥಿಗಳು, ಗಣಿತದಲ್ಲಿ 1626 ವಿದ್ಯಾರ್ಥಿಗಳು, ವಿಜ್ಞಾನದಲ್ಲಿ 226 ವಿದ್ಯಾರ್ಥಿಗಳು, ಸಮಾಜವಿಜ್ಞಾನದಲ್ಲಿ 3141 ವಿದ್ಯಾರ್ಥಿಗಳು ಗರಿಷ್ಠ ಅಕ ಗಳಿಸಿದ್ದಾರೆ.

ನಗರ ಮತ್ತು ಗ್ರಾಮೀಣವಾರು ಫಲಿತಾಂಶ

ನಗರ ಮತ್ತು ಗ್ರಾಮೀಣವಾರು ಫಲಿತಾಂಶ

ನಗರದಲ್ಲಿ 371045 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, 259927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಗ್ರಾಮೀಣದಲ್ಲಿ 454423 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 348409 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶೇಕಡಾ 100 ಹಾಗೂ ಶೂನ್ಯ ಫಲಿತಾಂಶ

ಶೇಕಡಾ 100 ಹಾಗೂ ಶೂನ್ಯ ಫಲಿತಾಂಶ

ಅನುದಾನಿತ ಶಾಲೆಗಳ ಪೈಕಿ 130 ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ 9 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇನ್ನು 903 ಅನುದಾನರಹಿತ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ 37 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಎಸ್‌ಎಸ್‌ಎಲ್‌ಸಿ ಜಿಲ್ಲಾವಾರು ಫಲಿತಾಂಶ

ಎಸ್‌ಎಸ್‌ಎಲ್‌ಸಿ ಜಿಲ್ಲಾವಾರು ಫಲಿತಾಂಶ

ಜಿಲ್ಲಾವಾರು ಫಲಿತಾಂಶ ಗಮನಿಸುವುದಾದರೆ ಹಾಸನಕ್ಕೆ ಮೊದಲ ಸ್ಥಾನ ಹಾಗೂ ಯಾದಗಿರಿಗೆ ಕೊನೆಯ ಸ್ಥಾನ ಲಭಿಸಿದೆ.

English summary
Karnataka SSLC borad announced SSLC result 2019, Here are some key statistics of the results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X