Government Employees: "ಈ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ": ಪತ್ರದಲ್ಲಿ ಏನಿದೆ?

ಬೆಂಗಳೂರು, ಅಕ್ಟೋಬರ್‌ 16: ಸಚಿವ ಪ್ರಿಯಾಂಕ ಖರ್ಗೆಯವರು ನನಗೆ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಇದೀಗ ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೊಂದು ಪತ್ರವನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ. ಈ ಪತ್ರದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಿದ್ದಾರೆ.

Steps to prevent government employees from participating in RSS activities

ಪತ್ರದಲ್ಲಿ ಏನಿದೆ?

ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದ ಪತ್ರದಲ್ಲಿ ಸರ್ಕಾರಿ ನೌಕರರು ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರುಗಳಿಗೆ ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾweರ ಈ ಕೆಳಕಂಡ ನಿಯಮವು ಈಗಾಗಲೇ ಜಾರಿಯಲ್ಲಿರುತ್ತದೆ.

ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.

ಹೀಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ.

ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕೈಗೊಳ್ಳಲಾಗುವುದೆಂದು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+