ದೆಹಲಿಗೆ ತೆರಳಿದ ಸಿದ್ದು! ದೆಹಲಿಗೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದ ಡಿ ಕೆ ಶಿವಕುಮಾರ್‌

ಬೆಂಗಳೂರು, ಮೇ 15: ರಾಜ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತು ತೀವ್ರಗೊಂಡಿದೆ. ಭಾನುವಾರ ರಾತ್ರಿ 135 ಶಾಸಕರ ಅಭಿಪ್ರಾಯ ಸಂಗ್ರಹಿಸಿರು ಕಾಂಗ್ರೆಸ್‌ ಇಂದು(ಸೋಮವಾರ) ಡಿ ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರನ್ನ ದೆಹಲಿಗೆ ಬರುವಂತೆ ಹೇಳಿದ್ದು, ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಇತ್ತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮಾತ್ರ ದೆಹಲಿಗೆ ಹೋಗುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇನ್ನೂ ಸಿದ್ದರಾಮಕಯ್ಯ ದೆಹಲಿಗೆ ತೆರಳುವ ಮುನ್ನ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದು, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದರು.

Still Undecided About Going To Delhi Says DK Shivakumar

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ ಬಗ್ಗೆ ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+