ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಹಿಂದಿ ಹೇರಿಕೆ ವಿರೋಧಿಸಿದ ಸಪ್ಟೆಂಬರ್ 14 ಕರವೇ ಅಭಿಯಾನ

|
Google Oneindia Kannada News

ಬೆಂಗಳೂರು, ಸಪ್ಟೆಂಬರ್ 12: ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ನಡೆಸಲು ಮುಂದಾಗಿದೆ.

"ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಲು ಕೋರುತ್ತೇನೆ," ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಮನವಿ ಮಾಡಿಕೊಂಡಿದ್ದಾರೆ.

ಹಿಂದಿ ಹೇರಿಕೆ ಮಾಡಿದರೆ ದೇಶದಲ್ಲಿ ರಕ್ತಪಾತದ ಎಚ್ಚರಿಕೆಹಿಂದಿ ಹೇರಿಕೆ ಮಾಡಿದರೆ ದೇಶದಲ್ಲಿ ರಕ್ತಪಾತದ ಎಚ್ಚರಿಕೆ

ಬಹುಭಾಷೆಗಳನ್ನು ಆಡುವ ಜನರ ನಾಡಾಗಿರುವ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುತ್ತದೆ. ಆದರೆ ಇಡೀ ದೇಶಕ್ಕೆ ಒಂದೇ ಭಾಷೆಯಿರಬೇಕು ಎಂಬ ಕುತ್ಸಿತ ಮನಸ್ಥಿತಿಯವರಿಂದಾಗಿ ಹಿಂದಿ ಹೇರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಇದನ್ನು ನಾವು ಪ್ರಬಲವಾಗಿ ವಿರೋಧಿಸೋಣ ಎಂದಿದ್ದಾರೆ.

Stop hindi Imposition: Karave campaign against Central Govt Stand Across Karnataka on Sept 14th

ಉದ್ಯೋಗ ಕಿತ್ತುಕೊಳ್ಳುವ ಹುನ್ನಾರ:

ಹಿಂದಿ ಹೇರಿಕೆಯು ಕೇವಲ ಭಾಷೆಯ ಹೇರಿಕೆಯ ವಿಷಯ ಮಾತ್ರವಲ್ಲ. ಇದು ಕನ್ನಡಿಗರೂ ಸೇರಿದಂತೆ ದೇಶದ ಇತರ ಭಾಷಿಕರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ. ಇತರ ಭಾಷಾ ಸಮುದಾಯಗಳ ಸಂಸ್ಕೃತಿ, ಪರಂಪರೆಯನ್ನು ನಗಣ್ಯಗೊಳಿಸುತ್ತಿದೆ. ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಮಾಡುತ್ತಿದೆ.

ನಾವು ಯಾವ ಭಾಷೆಯ ಅಥವಾ ಭಾಷಿಕರ ವಿರೋಧಿಗಳಲ್ಲ. ಆದರೆ ಸರ್ಕಾರವೇ ಒಂದು ಭಾಷೆಯನ್ನು, ನಮ್ಮದೇ ತೆರಿಗೆ ಹಣ ಬಳಸಿ, ವ್ಯವಸ್ಥಿತವಾಗಿ ನಮ್ಮ ಮೇಲೆ ಹೇರುವುದನ್ನು ಸಹಿಸುವುದು ಸಾಧ್ಯವಿಲ್ಲ. ಹಿಂದಿ ಹೇರಿಕೆಯು ದೇಶದ ಐಕ್ಯತೆಯನ್ನು ಒಡೆಯುತ್ತಿದೆ ಎಂಬುದನ್ನು ಒಕ್ಕೂಟ ಸರ್ಕಾರ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು.

ಸೆಪ್ಟೆಂಬರ್ 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ.

ಹಿಂದಿ ದಿವಸ್ ವಿರುದ್ಧ ಧ್ವನಿ ಎತ್ತಲು ಕರೆ:

Recommended Video

ವಿರಾಟ್ ಕೊಹ್ಲಿ ಬದಲಿಗೆ ಹೊಸ ನಾಯಕನಾಗಿ ರೋಹಿತ್ ಶರ್ಮಾ | Oneindia Kannada

ಸಮಸ್ತ ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು ಸೆಪ್ಟೆಂಬರ್ 14 ರಂದು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary
Stop hindi Imposition: Karave campaign against Central Govt Stand Across Karnataka on Sept 14th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X