• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜನ ಸ್ವರಾಜ್ ಎಂಬ ನಾಟಕ ಪ್ರದರ್ಶನ ಮೊದಲು ನಿಲ್ಲಿಸಿ

|
Google Oneindia Kannada News

ಬೆಂಗಳೂರು, ನವೆಂಬರ್ 21; "ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕ ಬಿಜೆಪಿಯ ಜ್ವನ ಸ್ವರಾಜ್ ಯಾತ್ರೆಯನ್ನು ಟೀಕಿಸಿದ್ದಾರೆ.

ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ" ಎಂದು ಸಲಹೆ ನೀಡಿದ್ದಾರೆ.

ಪರಿಷತ್ ಚುನಾವಣೆ; ಬಿಜೆಪಿಗೆ 15 ಸೀಟು ಗುರಿ, 4 ತಂಡದಿಂದ ಯಾತ್ರೆ!ಪರಿಷತ್ ಚುನಾವಣೆ; ಬಿಜೆಪಿಗೆ 15 ಸೀಟು ಗುರಿ, 4 ತಂಡದಿಂದ ಯಾತ್ರೆ!

"ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ?" ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರ್ನಾಟಕ; ನವೆಂಬರ್ 23ರ ಬಳಿಕ ತಗ್ಗಲಿದೆ ಮಳೆ ಆರ್ಭಟಕರ್ನಾಟಕ; ನವೆಂಬರ್ 23ರ ಬಳಿಕ ತಗ್ಗಲಿದೆ ಮಳೆ ಆರ್ಭಟ

ವಿಧಾನ ಪರಿಷತ್ ಚುನಾವಣೆ ಪ್ರಚಾರ ನಡೆಸಲು ಬಿಜೆಪಿ ಜನ ಸ್ವರಾಜ್ ಯಾತ್ರೆ ಮಾಡುತ್ತಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಸಚಿವ ಕೆ. ಎಸ್. ಈಶ್ವರಪ್ಪ ನೇತೃತ್ವದ ತಂಡ ನವೆಂಬರ್ 19 ರಿಂದ 23ರ ತನಕ ವಿವಿಧ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದೆ.

ಹಾಸನ; ಮಳೆಗೆ ನೆಲಕಚ್ಚಿದ ಬೆಳೆ, ಚಿಂತಾಕ್ರಾಂತರಾದ ರೈತರು ಹಾಸನ; ಮಳೆಗೆ ನೆಲಕಚ್ಚಿದ ಬೆಳೆ, ಚಿಂತಾಕ್ರಾಂತರಾದ ರೈತರು

ಜನಸ್ವರಾಜ್ ಎಂಬ ನಾಟಕ ಪ್ರದರ್ಶನ

ಜನಸ್ವರಾಜ್ ಎಂಬ ನಾಟಕ ಪ್ರದರ್ಶನ

"ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಾಟಕ ಮಾಡುತ್ತಾ ತಿರುಗಾಡುತ್ತಿದೆ

ನಾಟಕ ಮಾಡುತ್ತಾ ತಿರುಗಾಡುತ್ತಿದೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ" ಎಂದು ಟ್ವೀಟ್ ಮಾಡಿದ್ದ್ಆರೆ.

ಸಚಿವರನ್ನು ಜಿಲ್ಲೆಗಳಿಗೆ ಓಡಿಸಿ

"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ" ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಇಲ್ಲೊಂದು ಸರ್ಕಾರವಿದೆಯೇ?

ಇಲ್ಲೊಂದು ಸರ್ಕಾರವಿದೆಯೇ?

"ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ.ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಷ್ಟದ ಅಂದಾಜು ಮಾಡಿ ಪರಿಹಾರ ಕೊಡಿ

"ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನು ತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ" ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜಕೀಯ ಕಾರಣಕ್ಕಾಗಿಯಲ್ಲವೇ?

"ರಾಜ್ಯ ಸರ್ಕಾರ ಭೂ ಸುಧಾರಣಾ ವಿಧೇಯಕವನ್ನು ಸದನದಲ್ಲಿ ಮಂಡಿಸಿದಾಗ ಸಭಾತ್ಯಾಗ ಮಾಡಿ ನಿಮ್ಮ ಸದಸ್ಯರ ಜೊತೆ ಎದ್ದು ಹೋಗಿದ್ದೇಕೆ?. ಅಂದು ಮೌನಕ್ಕೆ ಜಾರಿದ ನೀವು ಇಂದು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕಾಗಿಯಲ್ಲವೇ?" ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

"ಮೈತ್ರಿ ಸರ್ಕಾರದಲ್ಲಿ ಭೂ ಸುಧಾರಣಾ ಕಾಯ್ದೆಯನ್ನು ಗಾಳಿಗೆ ತೂರಲಾಗಿತ್ತು.ಕೈಗಾರಿಕಾ ಉದ್ದೇಶಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಟ್ಟು ಉದ್ಯಮಿಗಳು ನೇರವಾಗಿ ಖರೀದಿಸಲು ಅವಕಾಶ ಮಾಡಿಕೊಡಲಾಗಿತ್ತು.ಆಗ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಿದ್ದು #ಬುರುಡೆರಾಮಯ್ಯ, ಅಂದರೆ ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ‌ ಕಾಯ್ದೆ ಮುರಿದಿದ್ದು ನಿಜವಲ್ಲವೇ?" ಎಂದು ಬಿಜೆಪಿ ಪ್ರಶ್ನಿಸಿದೆ.

English summary
Karnataka BJP leaders busy in Jana Swaraj Yatra. Leader of opposition Siddaramaiah upset with BJP yatra in the time of untimely rain. Stop yatra and meet people he asked BJP leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X