ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಔಷಧಿಗೆ ಹೆಚ್ಚು ದರ ವಿಧಿಸಿದರೆ ಕಠಿಣ ಕ್ರಮ: ಸುಧಾಕರ್

|
Google Oneindia Kannada News

ಬೆಂಗಳೂರು, ಡಿ 11: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ವಿಧಾನಸೌಧದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಕೋವಿಡ್ ಸಂಭಾವ್ಯ 2ನೇ ಅಲೆಗೆ ಸಿದ್ಧತೆ ಬಗ್ಗೆ ಚರ್ಚಿಸಿದರು.

Recommended Video

France ನಲ್ಲಿ December 16ರಿಂದ ಮತ್ತೋಮ್ಮೆ ಶಿಸ್ತಿನ lockdown | Oneindia Kannada

ಕೋವಿಡ್ ಸಂಭಾವ್ಯ 2ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37.72 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್ ಲಸಿಕೆ ವಿತರಣೆಗೆ ರಾಜ್ಯದಲ್ಲಿ ಸಿದ್ಧತೆ ಪೂರ್ಣ: ಸುಧಾಕರ್ಕೋವಿಡ್ ಲಸಿಕೆ ವಿತರಣೆಗೆ ರಾಜ್ಯದಲ್ಲಿ ಸಿದ್ಧತೆ ಪೂರ್ಣ: ಸುಧಾಕರ್

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಟಾಸ್ಕ್ ಫೋರ್ಸ್ ನ ಹೊಸ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ನಿಯೋಜಿಸಿದ್ದು, ಮುಂದಿನ ಮೂರು ತಿಂಗಳಲ್ಲಿ ಕೋವಿಡ್ ನಿಯಂತ್ರಿಸುವ ಬಗ್ಗೆ ಚರ್ಚೆಯಾಗಿದೆ. 90 ದಿನಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲು 11.32 ಕೋಟಿ ರೂ. ವೆಚ್ಚದಲ್ಲಿ 10 ಲಕ್ಷ ಹೊಸ ರಾಪಿಡ್ ಆಂಟಿಜೆನ್ ಕಿಟ್ ಖರೀದಿ, 22.50 ಕೋಟಿ ರೂ. ವೆಚ್ಚದಲ್ಲಿ ಔಷಧಿ ಖರೀದಿಗೆ ಮಂಜೂರು ನೀಡಲಾಗಿದೆ ಎಂದು ತಿಳಿಸಲಾಗಿದೆ.

Strict action will be initiated if medicines are overcharged: Sudhakar

ರೆಮಿಡಿಸ್ವಿರ್ ಔಷಧಿ 1,800 ರೂ.ಗೆ ಸರ್ಕಾರಕ್ಕೆ ದೊರೆಯುತ್ತಿದೆ. ಕೆಲ ಖಾಸಗಿ ಆಸ್ಪತ್ರೆಗಳು ಈ ಔಷಧಿಗೆ ಹೆಚ್ಚು ದರ ವಿಧಿಸುತ್ತಿರುವ ಬಗ್ಗೆ ದೂರು ಬಂದಿದೆ. 2 ಸಾವಿರ ರೂ.ಗಿಂತ ಹೆಚ್ಚಿನ ದರ ವಿಧಿಸಿದರೆ ಕೆಪಿಎಂಇ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

10 ಜಿಲ್ಲೆಗಳ ಸಭೆ: ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಸೇರಿದಂತೆ 10 ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಕುರಿತು ಮಾಹಿತಿ ನೀಡಿದ ಸಚಿವರು, ಕೋವಿಡ್ 2 ನೇ ಅಲೆಯನ್ನು ಪರಿಗಣಿಸಿ, 10 ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಗುರಿ ನಿಗದಿಪಡಿಸಲಾಗಿದೆ. ಈ ತಿಂಗಳು ಹಾಗೂ ಮುಂದಿನ ತಿಂಗಳಲ್ಲಿ ಸಭೆ, ಸಮಾರಂಭ, ಹೊಸ ವರ್ಷಾಚರಣೆಗೆ ಕಡಿವಾಣ ಹಾಕಲು ಸೂಚಿಸಲಾಗಿದೆ. ಡಿಸೆಂಬರ್ 20 ರಿಂದ ಜನವರಿ ಎರಡನೇ ವಾರದವರೆಗೂ ಧಾರ್ಮಿಕ, ಸಾಮಾಜಿಕ ಸಮಾರಂಭಗಳಲ್ಲಿ ಅತಿ ಕಡಿಮೆ ಜನರು ಸೇರಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

Strict action will be initiated if medicines are overcharged: Sudhakar

ಲಸಿಕೆ ವಿತರಣೆಗೆ ಸಿದ್ಧತೆಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ ಲಸಿಕೆ ಸಂಗ್ರಹ, ವಿತರಣೆಗೆ ಮಾಡಿಕೊಂಡ ಸಿದ್ಧತೆ ಬಗ್ಗೆ ಮಾಹಿತಿ ಅಪ್ ಲೋಡ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.

English summary
State is well prepared for the possible second wave of the pandemic. Some private hospitals are overcharging for this medicine. Action will be taken against such hospitals under KPME act said Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X