CM Siddaramaiah: ಕನ್ನಡದ ಬಗ್ಗೆ ಅವಹೇಳನ ಮಾಡಿದ್ರೆ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ನವೆಂಬರ್‌ 01: ಕನ್ನಡದ ಬಗ್ಗೆ ಅವಹೇಳನ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಕ್ಕೆ ಅವಹೇಳನ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ -2024 ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ , ಕನ್ನಡಿಗರನ್ನು ಹಿಯ್ಯಾಳಿಸುವ ಪ್ರವೃತ್ತಿಯು ಕಂಡುಬರುತ್ತಿದೆ. ಇದು ನಾಡದ್ರೋಹ ಎಂದು ಪರಿಗಣಿಸಿ, ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

Strict action will be taken against those who insult Kannada Says Siddaramaiah

ಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ. 1953 ರಲ್ಲಿ ಫಜಲ್ ಅಲಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ವಿಂಗಡನಾ ಆಯೋಗ ರಚನೆಯಾಯಿತು. ಆಯೋಗದ ವರದಿಯನ್ನು ಆಧರಿಸಿ ರಾಜ್ಯಗಳ ಭಾಷಾವಾರು ವಿಂಗಡನೆಯಾಧರಿಸಿ, 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.

ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಜೆಪಿಸರ್ಕಾರ ಸಂಭ್ರಮಿಸಲಿಲ್ಲ. ಆದರೆ 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು 'ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ' ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು.

ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವ ಜೊತೆಗೆ ,ಇತರರೊಂದಿಗೆ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು. ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು. ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ , ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ. ಕನ್ನಡ ಭಾಷೆಗೆ ಎರಡು ಸಾವಿರ ಇತಿಹಾಸವಿದ್ದು, ಬಹಳ ಪ್ರಾಚೀನ ಭಾಷೆಯಾಗಿದೆ. ಆದ್ದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದೆ.

ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು. ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ . ಬೇರೆ ಭಾಷೆಯನ್ನು ಕಲಿಯಬೇಡಿ ಎಂದು ಹೇಳುವುದಿಲ್ಲ. ಬೇರೆ ಭಾಷಾ ಸಂಪತ್ತುನ್ನು ಬೆಳೆಸಿಕೊಳ್ಳಿ , ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮವಾದುದು ಎಂದು ಮಹಾತ್ಮಾ ಗಾಂಧೀಯವರು ಹೇಳಿದ್ದಾರೆ ಎಂದರು.

ಕರ್ನಾಟಕ ರಾಜ್ಯ , ದೇಶದಲ್ಲಿ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯವಾಗಿದೆ. 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಕೇವಲ 50-60 ಸಾವಿರ ಕೋಟಿ ಮಾತ್ರ. ಕನ್ನಡ ನಾಡು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ನಮಗೆ ಅನ್ಯಾಯವೆಸಗಬಾರದು. ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡಿ ಎಂದು ಕೇಂದ್ರಕ್ಕೆ ನಮ್ಮ ಬೇಡಿಕೆಗೆ ರಾಜಕೀಯ ಬಣ್ಣವನ್ನು ಬಳಿಯಲಾಗುತ್ತಿದೆ. ನಮ್ಮ ಹಕ್ಕಿಗೆ ಹೋರಾಡಬೇಕಾಗಿದೆ. ರಾಜ್ಯದ ಸಂಸದರು ಕೇಂದ್ರಕ್ಕೆ ಹೋಗಿದ್ದು, ಕೇಂದ್ರದಲ್ಲಿ ಕನ್ನಡಪರ ಧ್ವನಿ ಎತ್ತಬೇಕು. ಈ ಶಕ್ತಿಯನ್ನು ಆಯ್ಕೆಯಾಗಿ ಹೋದವರು ಬೆಳೆಸಿಕೊಂಡರೆ ರಾಜ್ಯಕ್ಕೆ ನ್ಯಾಯ ದೊರೆಯುತ್ತದೆ. ಕೇಂದ್ರದ ಅನ್ಯಾಯದ ನಡುವೆಯೂ , ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಪ್ರತಿ ದಿನ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರೂ ದಿನಗಳು ಮೊಟ್ಟೆ ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿದೆ. ಮಕ್ಕಳಿಗೆ ಹಾಲಿನ ಜೊತೆ ಸಾಯಿಅನ್ನಪೂರ್ಣ ಅವರ ಸಹಯೋಗದೊಂದಿಗೆ ರಾಗಿಮಾಲ್ಟ್ ನ್ನೂ ನೀಡಲಾಗುತ್ತಿದೆ. ಬಡವರ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ಸರ್ಕಾರದ ಉದ್ದೇಶ. ಇಂದು ಕನ್ನಡ ದೀವಿಗೆ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+