ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ: ಡಾ.ಕೆ.ಸುಧಾಕರ್

|
Google Oneindia Kannada News

ಬೆಂಗಳೂರು, ಮಾರ್ಚ್ 16: ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

Recommended Video

ಕೊರೊನಾ ನಿಯಂತ್ರಣ ಕುರಿತು ನಾಳೆ ಪಿಎಂ ಮೋದಿ ಜೊತೆ ಸಭೆ...ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮ-ಸಚಿವ ಸುಧಾಕರ್ ಮಾಹಿತಿ | Oneindia Kannada

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ ಅಂತ ಎಚ್ಚರಿಕೆ ನೀಡಿದರು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಅಂತ ಸಿಎಂ ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.

ಇಂದಿನಿಂದ ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ ವ್ಯಕ್ತಿಗೆ 20 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಲೇ ಬೇಕು ಎಂದು ಸಚಿವರು ಹೇಳಿದರು.

Strict measures will be implemented if guidelines are not followed: Minister Dr.K.Sudhakar

ಗಡಿ ರಾಜ್ಯಗಳಲ್ಲಿ ಸೋಂಕು ಏರಿಕೆ ಆಗಿರೋದೇ ಜಿಲ್ಲೆಗಳಲ್ಲಿ ಕೊರೊನಾ ಏರಿಕೆಗೆ ಪ್ರಮುಖ ಕಾರಣವಾಗಿದೆ. ಸಭೆ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ಮಾಡಲಾಗುವುದು ಎಂದರು.

ಪ್ರತಿಭಟನೆ, ಸಿನಿಮಾ ಹಾಲ್ ಗಳಿಗೆ ಟಫ್ ರೂಲ್ಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾಳೆ ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸುತ್ತಾರೆ. ಬಹಿರಂಗ ಸಭೆ-ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದು ಸಚಿವ ಡಾ.ಕೆ ಸುಧಾಕರ್ ವಿವರಿಸಿದರು.

English summary
If safety measures like wearing masks, social distancing etc are not properly followed, then we are left with no option but to take tougher measures, says Health & Medical Education Minister Dr.K.Sudhakar. He was speaking to the media her on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X