ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರಿಗೆ ನೌಕರರ ಮುಷ್ಕರ ಅಂತ್ಯ; ಸಚಿವರು ಹೇಳುವುದೇನು?

|
Google Oneindia Kannada News

ಬೆಂಗಳೂರು, ಏಪ್ರಿಲ್ 21; ಕರ್ನಾಟಕದಲ್ಲಿ ಸಾರಿಗೆ ನೌಕರರು ಏಪ್ರಿಲ್ 7ರಿಂದ ನಡೆಸುತ್ತಿದ್ದ ಮುಷ್ಕರ ಬುಧವಾರ ಅಂತ್ಯಗೊಂಡಿದೆ. ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಧನ್ಯವಾದಗಳನ್ನು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಸರ್ಕಾರದ ಮನವಿಗೆ ಓಗುಟ್ಟು ಇಂದು ಸಂಜೆಯ ವೇಳೆಗೆ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಸುಮಾರು 13 ಸಾವಿರದಷ್ಟು ಬಸ್ಸುಗಳು ಸಂಚರಿಸಿರುವುದರಿಂದ ಸಾರ್ವಜನಿಕರು ಸಮಾಧಾನ ಪಡುವಂತಾಯಿತು ಎಂದು ಹೇಳಿದ್ದಾರೆ.

ಬಸ್ ಮುಷ್ಕರ ಅಂತ್ಯ, ಮಾರ್ಗಸೂಚಿ ಬಗ್ಗೆ ಬಿಎಂಟಿಸಿ ಎಂಡಿ ಶಿಖಾಬಸ್ ಮುಷ್ಕರ ಅಂತ್ಯ, ಮಾರ್ಗಸೂಚಿ ಬಗ್ಗೆ ಬಿಎಂಟಿಸಿ ಎಂಡಿ ಶಿಖಾ

ಇಂದು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸಾರಿಗೆ ನೌಕರರು ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗಿದ್ದರಿಂದ ಸುಮಾರು 13 ಸಾವಿರಕ್ಕೂ ಹೆಚ್ಚು ಬಸ್ಸುಗಳು ಸಂಚರಿಸುವಂತಾಗಿ ಕೋವಿಡ್‍ನಂತಹ ಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲೂ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಸಾರಿಗೆ ಸೇವೆ ಲಭ್ಯವಾಗಿ ನಿಟ್ಟುಸಿರು ಬಿಡುವಂತಾಯಿತು.

ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕವಾಗಿ ಅಂತ್ಯ : ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕವಾಗಿ ಅಂತ್ಯ : ಕೋಡಿಹಳ್ಳಿ ಚಂದ್ರಶೇಖರ್

Strike Ends Lakshman Savadi Thanks To Transport Employees

ಹೀಗೆ ಕರ್ತವ್ಯ ಪ್ರಜ್ಞೆ ಮೆರೆದವರಿಗೆ ನನ್ನ ಹಾರ್ದಿಕ ಅಭಿನಂದನೆಗಳು. ಅದೇ ರೀತಿ ಮುಷ್ಕರದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಮುಂದಾಗಬೇಕೆಂದು ಖಾಸಗಿ ವಾಹನ ಮಾಲೀಕರಲ್ಲಿ ಕೋರಿಕೊಂಡಾಗ ಅವರೂ ಸಹ ತುಂಬು ಹೃದಯದಿಂದ ಸಹಕಾರ ನೀಡಿದ್ದನ್ನು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಹೇಳಿದ್ದಾರೆ.

ಬಸ್ ಮುಷ್ಕರಕ್ಕೆ ಬೆಂಬಲ ನೀಡಿ ಎಂಬ ಪತ್ರಕ್ಕೆ ನಟ ಯಶ್ ಪ್ರತಿಕ್ರಿಯೆ ಹೀಗಿದೆ... ಬಸ್ ಮುಷ್ಕರಕ್ಕೆ ಬೆಂಬಲ ನೀಡಿ ಎಂಬ ಪತ್ರಕ್ಕೆ ನಟ ಯಶ್ ಪ್ರತಿಕ್ರಿಯೆ ಹೀಗಿದೆ...

ನಾಳೆ (ಗುರುವಾರ) ದಿಂದ ನಮ್ಮ ನೌಕರ ಬಾಂಧವರ ಸಹಕಾರದಿಂದ ಸಾರಿಗೆ ಸೇವೆಯು ಬಹುತೇಕ ಪೂರ್ಣಪ್ರಮಾಣದಲ್ಲಿ ಸುಗಮಗೊಳ್ಳುತ್ತದೆ ಎಂಬ ವಿಶ್ವಾಸ ಮೂಡುವಂತಾಗಿರುವುದು ಸಂತೋಷದ ಸಂಗತಿಯಾಗಿದೆ. ಮುಷ್ಕರದ ಸಂದರ್ಭದಲ್ಲಿಯೂ ಹಲವು ಮಂದಿ ಸಾರಿಗೆ ನೌಕರರು ಸರ್ಕಾರದ ಮನವಿಗೆ ಸ್ಪಂದಿಸಿ ಕರ್ತವ್ಯಪ್ರಜ್ಞೆ ಮೆರೆದು ಸಾರ್ವಜನಿಕರಿಗೆ ಈ ಸಂಕಷ್ಟದ ಕಾಲದಲ್ಲಿಯೂ ಸೇವೆ ಒದಗಿಸಲು ಶಕ್ತಿಮೀರಿ ಪ್ರಯತ್ನಿಸಿದ್ದಾರೆ.

ಇಂತಹವರ ಕರ್ತವ್ಯ ನಿಷ್ಠೆ ಮತ್ತು ಪರಿಶ್ರಮವನ್ನು ನಾವು ಎಂದಿಗೂ ಮರೆಯುವುದಿಲ್ಲ ಮತ್ತು ಅವರ ಹಿತಾಸಕ್ತಿಗಳನ್ನು ರಕ್ಷಿಸುವತ್ತ ನಮ್ಮ ಸರ್ಕಾರ ಯಾವತ್ತೂ ಸಹಾನುಭೂತಿ ಹೊಂದಿರುತ್ತದೆ ಎಂಬುದನ್ನು ಮತ್ತೊಮ್ಮೆ ಈ ಸಂದರ್ಭದಲ್ಲಿ ಸ್ಪಷ್ಟಪಡಿಸುತ್ತೇನೆ.

ಇಡೀ ದೇಶದಲ್ಲೇ ನಮ್ಮ ಸಾರಿಗೆ ನಿಗಮಗಳಿಗೆ ವಿಶೇಷವಾದ ವರ್ಚಸ್ಸಿದೆ. ಈ ವರ್ಚಸ್ಸನ್ನು ಬೆಳೆಸುವಲ್ಲಿ ಅನೇಕ ಮಹಾನೀಯರುಗಳ ಪರಿಶ್ರಮ ಮತ್ತು ಕೊಡುಗೆಗಳಿವೆ. ಆದ್ದರಿಂದ ಅವರ ಶ್ರಮವನ್ನು ಗೌರವಿಸುತ್ತಾ, ನಾಡಿನಲ್ಲಿ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಎಲ್ಲಾ ನೌಕರರ ಜವಾಬ್ದಾರಿಯಾಗಿದೆ. ಇದರಿಂದ ಕರ್ನಾಟಕದ ಸರ್ಕಾರಿ ಸಾರಿಗೆಯ ಗತ ವೈಭವ ಮತ್ತೆ ಮರುಕಳಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

English summary
Transport minister thanked the transport employees to end the strike. Transport employees of Karnataka demand for salary hike and in protest from April 7, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X