ಕಾಂಗ್ರೆಸ್ ಹೈಕಮಾಂಡ್ನಿಂದ ಬಂತು ಖಡಕ್ ಸಂದೇಶ: ಸಚಿವ ವರದಿ ಕೇಳಿದ ಹೈಕಮಾಂಡ್
ಬೆಂಗಳೂರು, ಜನವರಿ 16: ಕರ್ನಾಟಕ ಕಾಂಗ್ರೆಸ್ನಲ್ಲಿ ಪಟ್ಟದ ಆಟ ಜೋರಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿ ಖಡಕ್ ಸಂದೇಶ ರವಾನೆ ಮಾಡಿದೆ. ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು, ವರಿಷ್ಠರಾದ ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು,ಹಾಗೂ ಮುಖ್ಯಮಂತ್ರಿಗಳನ್ನು. ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು? ಮುಂದುವರಿಸಬೇಕು ಅಥವಾ ಯಾರಾಗಬೇಕು? ಎಂಬಿತ್ಯಾದಿ ಎಲ್ಲ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು.

ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ. ಹೀಗಾಗಿ ಪಕ್ಷದ ನಾಯಕರು ಯಾವುದೇ ವಿಷಯಗಳು ಇದ್ದರೂ ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕೇ ವಿನಃ ಮಾಧ್ಯಮಗಳ ಮುಂದಲ್ಲ. ಇಂಥ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್ ನಾಯಕರು ಕೇಳಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ? ಎಂಬುದು ಪ್ರಶ್ನೆಯಾಗಿದೆ. ಹಾಗೂ ಈಗಾಗಲೇ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯಾವುದೇ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದರು ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವವರ ಸಂಪೂರ್ಣ ವರದಿ ಕೇಳಿದೆ.
೧. ಜಿಲ್ಲಾ ಪ್ರವಾಸ ಹೋದಂತಹ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದಾರಾ? ಇಲ್ಲವಾ?
೨. ಪಕ್ಷದ ಸಂಘಟನೆಗೆ ಒತ್ತು ಕೊಡಲಾಗುತ್ತದೆಯೋ ಇಲ್ಲವೋ?
೩. ಪ್ರಣಾಳಿಕೆಯಲ್ಲಿ ಕೊಟ್ಟಿರುವ ಯೋಜನೆಗಳನ್ನು ಜಾರಿ ಮಾಡಲು ಇವರು ಪಕ್ಷ ಮತ್ತು ಸರ್ಕಾರ ಕ್ಕೆ ಸಹಕಾರ ಕೊಡುತ್ತಿದ್ದಾರೋ ಇಲ್ಲವೋ?
೪. ಇದಲ್ಲದೆ ತಮ್ಮ ಇಲಾಖೆಯಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿದ್ದಾರಾ ಇಲ್ಲವಾ?
ಎಂಬಿತ್ಯಾದಿ ಸಂಪೂರ್ಣ ಮಾಹಿತಿಯನ್ನು ಹೈಕಮಾಂಡ್ ಈ ಸಂದರ್ಭದಲ್ಲಿ ಕೇಳಿದೆ. ಅಲ್ಲದೆ, ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೆ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈ ಕಮಾಂಡ್ ಸೂಚಿಸಿದೆ. ಈಗಾಗಲೇ ಎಐಸಿಸಿ ಕರ್ನಾಟಕ ಉಸ್ತುವಾರಿ ಆಗಿರುವ ರಣದೀಪ್ ಸುರ್ಜೇವಾಲ ಅವರು ಪಕ್ಷದ ತಾಯಿ ಇದ್ದಂತೆ, ಸರ್ಕಾರ ಮಗು ಇದ್ದಂತೆ. ಯಾರೂ ಸಹ ಪಕ್ಷದ ಘನತೆಗೆ ಚ್ಯುತಿ ತರಬಾರದು ಎಂಬ ಸಂದೇಶವನ್ನು ನೀಡಿದ್ದಾರೆ.
ಇದರ ಮಧ್ಯೆಯೂ ಕೆಲವು ನಾಯಕರು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಕೆಲವು ಸಚಿವರು ಪದೇ ಪದೆ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಆದರೆ, ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ ಹೆಚ್ ಸಿ ಮಹದೇವಪ್ಪ ಅವರು ಪದೇ ಪದೆ ಮಾತನಾಡುತ್ತಿದ್ದು, ಹೈಕಮಾಂಡ್ ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ.ಎಲ್ಲ ಸಚಿವರ ರಿಪೋರ್ಟ್ ಕಾರ್ಡ್‌ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ.
ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ ಮೇಲೆಯೂ ಪದೇ ಪದೆ ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಅವರಿಗೆ ಪರಿಣಾಮ ಬೀರಲಿದೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications