Breaking; ಬಿಜೆಪಿ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚುತ್ತಿದೆ

ಬೆಂಗಳೂರು, ನವೆಂಬರ್ 30; 'ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ' ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಗುರುವಾರ ಎಚ್. ಡಿ. ಕುಮಾರಸ್ವಾಮಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಚಾರದಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.

'ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Student Beaten For Holding Kannada Flag At Belagavi Kumaraswamy Tweet

'ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು' ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಎಚ್. ಡಿ. ಕುಮಾರಸ್ವಾಮಿ, 'ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ' ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಎಚ್. ಡಿ. ಕುಮಾರಸ್ವಾಮಿ, 'ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ' ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ನಡುವೆಯೇ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ರಾಮದುರ್ಗ ತಾಲೂಕಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+