ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕೆಎಸ್ಆರ್‌ಟಿಸಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 01: ಕಳೆದ ವರ್ಷದ ಶೈಕ್ಷಣಿಕ ಪಾಸು ತೋರಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಸ್‌ನಲ್ಲಿ ಸಂಚಾರ ನಡೆಸಬಹುದು ಎಂದು ಕೆಎಸ್ಆರ್‌ಟಿಸಿ ಹೇಳಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಇದ್ದ ಗೊಂದಲ ಬಗೆಹರಿದಿದೆ.

Recommended Video

IPL ಮತ್ತೆ ಮುಂದಕ್ಕೆ ಹೋಗುತ್ತಾ..? | Oneindia Kannada

ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ ಪರೀಕ್ಷೆಗಳು ಈ ತಿಂಗಳಿನಲ್ಲಿ ನಡೆಯಲಿವೆ. ಈ ಸಮಯದಲ್ಲಿ ಕಳೆದ ವರ್ಷದ ಶೈಕ್ಷಣಿಕ ಪಾಸುಗಳನ್ನು ತೋರಿಸಿ ವಿದ್ಯಾರ್ಥಿಗಳು ಬಸ್‌ನಲ್ಲಿ ಉಚಿತವಾಗಿ ಸಂಚಾರ ನಡೆಸಬಹುದು.

ಕೆಎಸ್ಆರ್‌ಟಿಸಿ ನೌಕರರ ಬಗ್ಗೆ ಕಾಳಜಿ; ಸಿಎಂಗೆ ಸಿದ್ದರಾಮಯ್ಯ ಪತ್ರ ಕೆಎಸ್ಆರ್‌ಟಿಸಿ ನೌಕರರ ಬಗ್ಗೆ ಕಾಳಜಿ; ಸಿಎಂಗೆ ಸಿದ್ದರಾಮಯ್ಯ ಪತ್ರ

ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ನಾಯಕ ಜಿ. ಸಿ. ಚಂದ್ರಶೇಖರ್ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದರು. ಸೆಪ್ಟೆಂಬರ್‌ನಲ್ಲಿ ವಿವಿಧ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಈ ವರ್ಷದ ಪಾಸು ವಿತರಣೆ ಮಾಡಿಲ್ಲ. ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.

ಆ.25ರಿಂದ ಕೇರಳ-ಕರ್ನಾಟಕ ನಡುವೆ ಬಸ್ ಸೇವೆ ಆ.25ರಿಂದ ಕೇರಳ-ಕರ್ನಾಟಕ ನಡುವೆ ಬಸ್ ಸೇವೆ

Student Can Travel In KSRTC Bus For Exam With Last Year Student Pass

ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕೆಎಸ್ಆರ್‌ಟಿಸಿ ವಿದ್ಯಾರ್ಥಿಗಳು ಕಳೆದ ವರ್ಷದ ಪಾಸುಗಳನ್ನು ತೋರಿಸಿ ಸಂಚಾರ ನಡೆಸಬಹುದು ಎಂದು ಮಂಗಳವಾರ ಆದೇಶ ಹೊರಡಿಸಿದೆ.

ಕೇರಳ-ಕರ್ನಾಟಕ ನಡುವೆ ಬಸ್ ಸಂಚಾರ; ಪ್ರಯಾಣಿಕರಿಗೆ ಸೂಚನೆ ಕೇರಳ-ಕರ್ನಾಟಕ ನಡುವೆ ಬಸ್ ಸಂಚಾರ; ಪ್ರಯಾಣಿಕರಿಗೆ ಸೂಚನೆ

ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ ಕಾರಣಕ್ಕೆ ಪರೀಕ್ಷೆ ನಡೆಸುತ್ತಿಲ್ಲ. ಆದರೆ, ಪದವಿ, ಸ್ನಾತಕೋತ್ತರ ಪದವಿ, ವೃತ್ತಪರ ಕೋರ್ಸ್‌ಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

English summary
Karnataka State Road Transport Corporation (KSRTC) allowed students to travel for exam with the last year student pass. Degree, Engineering and other final exam will be held in the month of September.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X