ಬೀದರ್ : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕತ್ತು ಸೀಳಿ ಹತ್ಯೆ
ಬೀದರ್, ಜನವರಿ 28 : ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೂಜಾ (20) ಹತ್ಯೆಯಾದ ವಿದ್ಯಾರ್ಥಿನಿ. ಬೀದರ್‌ನ ಅಕ್ಕ ಮಹಾದೇವಿ ಕಾಲೇಜಿನಲ್ಲಿ ಬಿಎ ದ್ವಿತೀಯ ವರ್ಷದಲ್ಲಿ ಪೂಜಾ ವ್ಯಾಸಂಗ ಮಾಡುತ್ತಿದ್ದಳು. ಭಾಲ್ಕಿ ತಾಲೂಕಿನ ಖಾನಾಪುರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕೆಯನ್ನು ಹತ್ಯೆ ಮಾಡಲಾಗಿದೆ.
ಹತ್ಯೆ ಮಾಡಿದ ಶಮಸೊದ್ದೀನ್ (24) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಎಸ್ಪಿ ಡಿ.ದೇವರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೂಜಾ ಭಾಲ್ಕಿ ತಾಲೂಕಿನ ಕೋಸಮ್ ಗ್ರಾಮದ ನಿವಾಸಿ. ಆಕೆಯನ್ನು ಎರಡು ವರ್ಷಗಳಿಂದ ಶಮಸೊದ್ದೀನ್ ಪ್ರೀತಿಸುತ್ತಿದ್ದ. ಆದರೆ, ಪೂಜಾ ನಿರಾಕರಿಸಿದ್ದಳು.
ಬಲವಂತದಿಂದ ಆಕೆಯನ್ನು ಕರೆದುಕೊಂಡು ಹೋಗಿ ಶಮಸೊದ್ದೀನ್ ಅತ್ಯಾಚಾರ ನಡೆಸಿದ್ದಾನೆ. ನಂತರ ಕತ್ತು ಸೀಳಿ ಹತ್ಯೆ ಹತ್ಯೆ ಮಾಡಿದ್ದಾನೆ.
ದನ್ನೂರು ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.












Click it and Unblock the Notifications