Gruha Lakshmi Scheme: ಗೃಹ ಲಕ್ಷ್ಮೀ ಹಣದಿಂದ ಮಗಳ ಭವಿಷ್ಯ ರೂಪಿಸಿದ ತಾಯಿ: ನೆರವಿಗೆ ನಿಂತ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ, ಏಪ್ರಿಲ್‌ 10: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಲಕ್ಷಾಂತರ ಬಡವರು ಪ್ರಯೋಜನ ಪಡೆಯುತ್ತಿದ್ದಾರೆ. ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ಅದೆಷ್ಟೋ ಜನ ಮಹಿಳೆಯರು ಸ್ವ ಉದ್ಯೋಗವನ್ನ ಮಾಡಲು ಸಹಾಯಕವಾಗಿದೆ. ಮತ್ತೊಬ್ಬ ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಬಡಿಸುವ ಮೂಲಕ ರಾಜ್ಯದ ಗಮನಸೆಳೆದಿದ್ದರು. ಇನ್ನೂ ಈ ಮಹಿಳೆಯನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಅಭಿನಂದನೆ ಸಲ್ಲಿಸಿದ್ದರು. ಆದರೆ, ಇದೀಗ ಗೃಹ ಲಕ್ಷ್ಮಿ ಹಣದಿಂದ ಮಗಳಿಗೆ ವಿಧ್ಯಾಭ್ಯಾಸ ಮಾಡಿಸಿ ಮಗಳ ಭವಿಷ್ಯವನ್ನ ತಾಯಿ ರೂಪಿಸಿದ್ದಾಳೆ.

ಗೃಹ ಲಕ್ಷ್ಮೀ ಹಣದ ಸಹಾಯದಿಂದ ಓದಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಪಡೆದಿರುವ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಗ್ರಾಮದ ಪೃಥ್ವಿ ಹೋಳಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ನೆರವಾಗಿದ್ದಾರೆ. ಇತಿಹಾಸ ವಿಭಾಗದಲ್ಲಿ 100ಕ್ಕೆ 100 ಅಂಕ ಪಡೆದಿರುವ ಪೃಥ್ವಿ ಹೋಳಿ ಅವರ ಓದಿಗೆ ತಮ್ಮ ತಾಯಿ ಅವರಿಗೆ ಬರುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಹಣ ನೆರವಾಯಿತು. ಭವಿಷ್ಯದಲ್ಲಿ ಐಪಿಎಸ್ ಅಧಿಕಾರಿಯಾಗಬೇಕು ಎಂದು ಕನಸುಕಂಡಿರುವೆ ಎಂದು ಹೇಳಿಕೊಂಡಿದ್ದರು. ವಿದ್ಯಾರ್ಥಿನಿಯ ಕನಸನ್ನು ಮಾಧ್ಯಮಗಳ ಮೂಲಕ ಗಮನಿಸಿದ ಸಚಿವರು, ಇದೀಗ ವಿದ್ಯಾರ್ಥಿನಿ ಪೃಥ್ವಿ ಹೋಳಿ ಅವರ ಕನಸಿಗೆ ಬೆನ್ನೆಲುಬಾಗಿ ನಿಂತಿದ್ದಾರೆ.

Student Who Excelled In PUC With Household Lakshmi Money

ವಿದ್ಯಾರ್ಥಿನಿಗೆ ಉಚಿತ ತರಬೇತಿ ನೀಡಬೇಕು, ಆಕೆಯ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಸಚಿವರು ಧಾರವಾಡದ ಕ್ಲಾಸಿಕ್ ಕೆಎಎಸ್ ಮತ್ತು ಸ್ಟಡಿ ಸರ್ಕಲ್‌ಗೆ ಶಿಫಾರಸು ಮಾಡಿದ್ದಾರೆ. ವಿದ್ಯಾರ್ಥಿನಿ ಪೃಥ್ವಿ ಹೋಳಿ ಅವರಿಗೆ ಐಪಿಎಸ್ ಸೇರಿದಂತೆ ಯುಪಿಎಸ್‌ಸಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಬೇಕು ಎಂದು ಹೇಳಿದ್ದಾರೆ. ಸಚಿವರ ಶಿಫಾರಸ್ಸಿನ ಮೇರೆಗೆ ಐಪಿಎಸ್ ಹಾಗೂ ಯುಪಿಎಸ್ಸಿ ಪರೀಕ್ಷೆಗಳ ತರಬೇತಿಯನ್ನು ವಿದ್ಯಾರ್ಥಿನಿ ಪೃಥ್ವಿ ಹೋಳಿ ಅವರಿಗೆ ಕೊಡಲು ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕ್ಲಾಸಿಕ್ ಸ್ಟಡಿ ಸೆಂಟರ್‌ನ ಲಕ್ಷ್ಮಣ ಎಸ್ ಉಪ್ಪಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Take a Poll

ಕಳೆದ ಎರಡು ವರ್ಷಗಳ ಹಿಂದೆ ನನ್ನ ತಂದೆ ತೀರಿಕೊಂಡರು. ನನ್ನ ತಾಯಿಗೆ ಬರುತ್ತಿರುವ ಗೃಹ ಲಕ್ಷ್ಮೀ ಯೋಜನೆಯ ಹಣ ನನಗೆ ವಿದ್ಯಾಭ್ಯಾಸಕ್ಕೆ ನೆರವಾಯಿತು. ಮುಂದಿನ ದಿನಗಳಲ್ಲಿ ಐಪಿಎಸ್ ಮಾಡುವ ಕನಸುಹೊಂದಿದ್ದೇನೆ. ನಾನು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ನೆರವು ನೀಡುವುದಾಗಿ ತಿಳಿಸಿದ್ದಾರೆ. ಸಚಿವರಿಗೆ ನಾನು ಮತ್ತು ನನ್ನ ತಾಯಿ ಅನಂತ ಅನಂತ ವಂದನೆಗಳನ್ನು ಸಲ್ಲಿಸುತ್ತೇವೆ ಎಂದು ಬಾಲಕಿ ತಿಳಿಸಿದ್ದಾಳೆ.

ಗೃಹಲಕ್ಷ್ಮಿ ಹಣದಿಂದ 'ಮಾಂಗಲ್ಯ' ಖರೀಸಿದಿಸಿದ ಮಹಿಳೆ

ಇನ್ನೂ ಇತ್ತೀಚಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಹಿಳೆಯೊಬ್ಬರು, ಗೃಹಲಕ್ಷ್ಮಿ ಹಣ ಕೂಡಿಟ್ಟು ಮಾಂಗಲ್ಯ ಖರೀದಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಬರುವಂತಹ ಪ್ರತಿ ತಿಂಗಳು 2,000 ರೂಪಾಯಿಗಳನ್ನು, ಕುಡಿಟ್ಟು 15 ಸಾವಿರ ಕೊಟ್ಟು ಮಾಂಗಲ್ಯ ಖರೀದಿ ಮಾಡಿದ್ದಾರೆ. ಅಲ್ಲದೇ ಬಡ ಮಹಿಳೆಯಿಂದ ಕಿವೊಯೋಲೆ( ಬೆಂಡಾಲಿ) ಖರೀದಿ ಮಾಡಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ತುಂಬಾ ಧನ್ಯವಾದಗಳು ಎಂದು ಶಂಕ್ರಮ್ಮ ನಾಯಕ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+