ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಪಿಯು ಕಾಲೇಜಿಗೆ ವಿದ್ಯಾರ್ಥಿಗಳನ್ನು ಸೆಳೆಯಲು ದತ್ತು ಯೋಜನೆ

By Nayana
|
Google Oneindia Kannada News

ಬೆಂಗಳೂರು, ಮೇ 11: ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಸಲು ಶಿಕ್ಷಣ ಇಲಾಖೆ ಹರಸಾಹಸ ಪಡುತ್ತಿದೆ. ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಆಂದೋಲನ ಕೈಗೊಳ್ಳಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಉಪನ್ಯಾಸಕರಿಗೆ ವಿದ್ಯಾರ್ಥಿಗಳನ್ನು ದತ್ತು ನೀಡುವ ಮೂಲಕ ದಾಖಲಾತಿ , ಹಾಜರಾತಿ ಹಾಗೂ ಗುಣಮಟ್ಟದ ಕಲಿಕೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಪ್ರಾಂಶುಪಾಲಿರಿಗೆ ತಿಳಿಸಲಾಗಿದೆ. ಈ ಆಂದೋಲನಕ್ಕಾಗಿ ಕಾಲೇಜಿನಲ್ಲಿರುವ ಸಂಪನ್ಮೂಲ ಸೌಲಭ್ಯ, ಸರ್ಕಾರದ ಯೋಜನೆ, ದೂರವಾಣಿ, ಕರಪತ್ರ, ವಾಟ್ಸ್‌ಆಪ್, ಫೇಸ್‌ಬುಕ್ ಮೂಲಕ ಅಭಿಯಾನ ಕೈಗೊಳ್ಳುವುದು.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಹೈಲೈಟ್ಸ್ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಹೈಲೈಟ್ಸ್

ಇದಕ್ಕಾಗಿ ಕಾಲೇಜುಗಳ ಸಂಚಿತ ನಿಧಿಯಲ್ಲಿರುವ ಅನುದಾನದಲ್ಲಿ 1 ಸಾವಿರ ರೂ. ಮೊತ್ತಕ್ಕೆ ಮೀರದಂತೆ ಭರಿಸಬಹುದು ಎಂದು ಇಲಾಖೆ ನಿರ್ದೇಶಕಿ ಸಿ.ಶಿಖಾ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ. ಪ್ರತಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ತಮ್ಮ ವ್ಯಾಪ್ರಿಯಲ್ಲಿ ಬರುವ ಎಲ್ಲ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಗ್ರಹಿಸುವುದರ ಜತೆಗೆ, ಪೋಷಕರನ್ನು ಸಂಪರ್ಕಿಸಿ ಕಾಲೇಜಿಗೆ ಸೇರಿಸಲು ಉತ್ತೇಜ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.

Students adoption program in govt PU colleges

ಸ್ಥಳೀಯ ಕೇಬಲ್‌ ಟಿವಿಗಳಲ್ಲಿ ಕಾಲೇಜಿನ ಸೌಲಭ್ಯ, ಸಾಧಕ ವಿದ್ಯಾರ್ಥಿಗಳ ವಿವರ ಬಿತ್ತರ ಹಾಗೂ ವಿದ್ಯಾರ್ಥಿಗಳ ಭಾವಚಿತ್ರಗಳನ್ನು ಫ್ಲೆಕ್ಸ್‌ ರೂಪದಲ್ಲಿ ಪ್ರಕಟಿಸಲು ಸೂಚಿಸಲಾಗಿದೆ.

2017-18ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಉತ್ತಮ ಸಾಧನೆ ಮಾಡಿದ ಎರಡು ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ವಿವರ ಸಂಗ್ರಹಿಸಬೇಕು. ಕಳೆದ ಸಾಲಿನಿಂದಲೇ ಎಲ್ಲಾ ವಿದ್ಯಾರ್ಥಿನಿಯರ ದಾಖಲಾತಿಗೆ ಸಂಬಂಧಿಸಿದ ಸರ್ಕಾರೇತರ ಶುಲ್ಕ 456ರೂ ಮರು ಪಾವತಿ ಮಾಡಲಾಗುತ್ತಿದೆ.

ಯಾವ ಜಾತಿ ವಿದ್ಯಾರ್ಥಿಗಳು ಎಷ್ಟು ಫಲಿತಾಂಶ ಪಡೆದಿದ್ದಾರೆ?ಯಾವ ಜಾತಿ ವಿದ್ಯಾರ್ಥಿಗಳು ಎಷ್ಟು ಫಲಿತಾಂಶ ಪಡೆದಿದ್ದಾರೆ?

ಪ್ರತಿಭಾವಂತ ಎಸ್‌ಸಿ ಎಸ್ಟಿ ವಿಜ್ಞಾನ ಮತ್ತು ವಾಣಿಜ್ಯ ಸಂಯೋಜನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಪಠ್ಯ ಪುಸ್ತಕಗಳನ್ನು ಒದಗಿಸಲು ಪುಸ್ತಕ ನಿಧಿ ಬುಕ್ ಬ್ಯಾಂಕ್ ಯೋಜನೆ ಪ್ರಾರಂಭಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

English summary
To attract more students to government PU colleges in the state, department of PU education is introducing adoption program. Under this program, teachers in the colleges will adopt students to improve their academic quality.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X