ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅವಧಿಗೂ ಮುನ್ನ ಪಿಯು ಪರೀಕ್ಷೆ: ವಿದ್ಯಾರ್ಥಿಗಳು, ಉಪನ್ಯಾಸಕರ ವಿರೋಧ

|
Google Oneindia Kannada News

ಬೆಂಗಳೂರು, ಡಿಸೆಂಬರ್ 12: ಅವಧಿಗೂ ಮುನ್ನವೇ ಪಿಯುಸಿ ಪ್ರಥಮ ವರ್ಷದ ವಾರ್ಷಿಕ ಪರೀಕ್ಷೆ ಆರಂಭಿಸಲುಮುಂದಾಗಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಕ್ರಮಕ್ಕೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜನವರಿ 31ರಿಂದಲೇ ಪರೀಕ್ಷೆಯನ್ನು ಆರಂಭಿಸಲಾಗುತ್ತಿದೆ. ಪ್ರತಿ ವರ್ಷ ಫೆಬ್ರವರಿ ಮಧ್ಯಭಾಗದಲ್ಲಿ ಪರೀಕ್ಷೆ ಆರಂಭವಾಗುತ್ತಿತ್ತು, ತಿಂಗಳಾಂತ್ಯಕ್ಕೆ ಮುಗಿಯುತ್ತಿತ್ತು. ಆದರೆ ಈ ವರ್ಷ ಬೇಗ ಪರೀಕ್ಷೆ ಆರಂಭಿಸುತ್ತಿರುವುದರಿಂದ ಒಂದೆಡೆ ಉಪನ್ಯಾಸಕರು ಇನ್ನೊಂದೆಡೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ.ತರಾತುರಿಯಲ್ಲಿ ಪಾಠಗಳನ್ನು ಮುಗಿಸುವಂತಾಗಿದೆ.

ಪಿಯು ವಿದ್ಯಾರ್ಥಿಗಳು ಮುಚ್ಚಳಿಕೆ ಬರೆದು ಕೊಡುವುದು ಇನ್ನು ಕಡ್ಡಾಯ ಪಿಯು ವಿದ್ಯಾರ್ಥಿಗಳು ಮುಚ್ಚಳಿಕೆ ಬರೆದು ಕೊಡುವುದು ಇನ್ನು ಕಡ್ಡಾಯ

ಜೂನ್‌ನಲ್ಲಿ ನಡೆದ ಎಸ್ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಆಗಸ್ಟ್-ಸೆಪ್ಟೆಂಬರ್‌ವರೆಗೆ ಪಿಯುಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ತಡವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮೂರ್ನಾಲ್ಕು ತಿಂಗಳಲ್ಲೇ ಪರೀಕ್ಷೆ ಎದುರಿಸಬೇಕಾಗಿದೆ.

ಮೇ 2 ರಿಂದ ತರಗತಿ ಆರಂಭ

ಮೇ 2 ರಿಂದ ತರಗತಿ ಆರಂಭ

ಮೇ 2 ರಿಂದಲೇ ತರಗತಿಗಳು ಆರಂಭವಾಗಲಿವೆ. ಈ ವರ್ಷ ಬೇಸಿಗೆ ರಜೆ ಮೊಟಕುಗೊಳಿಸಿ ಪಿಯುಸಿ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಆದರೆ ಮೇ 20ರವರೆಗೆ ಕೇವಲ ಉಪನ್ಯಾಸಕರು ಕಾಲೇಜಿಗೆ ಹಾಜರಾದರೆ ಹೊರತು ಹೆಚ್ಚಿನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲಿಲ್ಲ.

3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು 3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು

ಲೋಕಸಭಾ ಚುನಾವಣೆ ಕಾರಣ

ಲೋಕಸಭಾ ಚುನಾವಣೆ ಕಾರಣ

2019ರಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವುದರಿಂದ ಚುನಾವಣಾ ಆಯೋಗ ಒಂದೂವರೆ-ಎರಡು ತಿಂಗಳ ಮೊದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮಾರ್ಚ್ ಅಂತ್ಯದೊಳಗೆ ಮುಗಿಸಬೇಕಾಗುತ್ತದೆ. ಹೀಗಾಗಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಫೆ.10ರಿಂದ ಆರಂಭಿಸಿದರೂ 22-23ರವರೆಗೆ ಮುಗಿಸಬಹುದು.

ಉಪನ್ಯಾಸಕರಿಗೆ ಚೆಕ್‌ಪೋಸ್ಟ್ ಕೆಲಸಕೊಟ್ಟ ಚುನಾವಣಾ ಆಯೋಗ ಉಪನ್ಯಾಸಕರಿಗೆ ಚೆಕ್‌ಪೋಸ್ಟ್ ಕೆಲಸಕೊಟ್ಟ ಚುನಾವಣಾ ಆಯೋಗ

10ದಿನ ಮೊದಲೇ ಪ್ರಾಯೋಗಿಕ ಪರೀಕ್ಷೆ

10ದಿನ ಮೊದಲೇ ಪ್ರಾಯೋಗಿಕ ಪರೀಕ್ಷೆ

ಪರೀಕ್ಷೆಗೆ 10 ದಿನಗಳು ಇರುವಾಗಲೇ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗುತ್ತದೆ. ಇದರಿಂದ ಜನವರಿ ತಿಂಗಳಲ್ಲೂ ಪೂರ್ಣ ಪ್ರಮಾಣದಲ್ಲಿ ಅಧ್ಯಯನ ನಡೆಸಲು ಸಾಧ್ಯವಾಗುವುದಿಲ್ಲ ಎಂಬುದು ವಿದ್ಯಾರ್ಥಿಗಳ ದೂರಾಗಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ

ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಕ್ರಮ ಕಬ್ಬಿಣದ ಕಡಲೆಯಾಗಿದೆ.

English summary
PU department decided to hold first PUC exams in January only. So students are showing their angry for early exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X