ವಿದ್ಯಾರ್ಥಿಗಳು ಫೆ.28ವರೆಗೆ ಹಳೆ ಪಾಸ್ ತೋರಿಸಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಬಹುದು
ಬೆಂಗಳೂರು,ಜನವರಿ 29: ವಿದ್ಯಾರ್ಥಿಗಳು ಫೆ.28ರವರೆಗೂ ಹಳೆ ಬಸ್ಪಾಸ್ ತೋರಿಸಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸಬಹುದಾಗಿದೆ.
ಜನವರಿ 31ರವರೆಗೆ ಹಳೆ ಬಸ್ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿತ್ತು.ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಯಮಗಳ ಬಸ್ಗಳಲ್ಲಿ ವಿದ್ಯಾರ್ಥಿಗಳು 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಫೆಬ್ರವರಿ 28ರವರೆಗೆ ಅನುವು ಮಾಡಿಕೊಡಲಾಗಿದೆ.
ಈ ಹಿಂದೆ ಜ.31ರವರೆಗೆ ಸಂಸ್ಥೆಯಿಂದ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಪಾಸ್ಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕಾಲವಕಾಶ ನೀಡುವ ಸಲುವಾಗಿ ಈ ಅವಧಿಯನ್ನು ಫೆ.28ರವರೆಗೆ ಮುಂದೂಡಿದೆ.

ನಿಗಮದ ನಗರ ಹೊರವಲಯ ಸಾಮಾನ್ಯ ಹಾಗೂ ವೇಗಧೂತ ಬಸ್ಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಕರಾರಸಾ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲ ವರ್ಗದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶುಲ್ಕ ಪಾವತಿಸಿದ ರಶೀದಿ ಜೊತೆಗೆ ಸಂಬಂಧಪಟ್ಟ ಮಾರ್ಗಗಳಲ್ಲಿ ಪ್ರಯಾಣಿಸಬಹುದಾಗಿದೆ.
ಬಿಎಂಟಿಸಿಯು ಕೂಡ ಕೊರೊನಾ ಲಾಕ್ಡೌನ್ ಮುಗಿದ ಬಳಿಕ ಹಳೆಯ ಬಸ್ಪಾಸ್ ತೋರಿಸಿ ಸಂಚರಿಸಲು ಅವಕಾಶ ನೀಡಿತ್ತು. ಬಳಿಕ ಆನ್ಲೈನ್ ಮೂಲಕ ಬಸ್ಪಾಸ್ ಪಡೆದುಕೊಳ್ಳುವಂತೆ ತಿಳಿಸಿತ್ತು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications