15 ವರ್ಷಕ್ಕೆ ಕಾಲಿಟ್ಟವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬಹುದು

ಬೆಂಗಳೂರು, ಅಕ್ಟೋಬರ್ 9: ಇನ್ನುಮುಂದೆ 15 ವರ್ಷ ತುಂಬಿದವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಆದೇಶ ಹೊರಡಿಸಿದೆ.

ಹೀಗಾಗಿ 2020 ಮಾರ್ಚ್ 1ನೇ ತಾರೀಕಿಗೆ 15 ವರ್ಷ ಪೂರೈಸುವ ಅಭ್ಯರ್ಥಿಗಳು ಮಾತ್ರ ಖಾಸಗಿಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಳ್ಳಲಾಗುತ್ತದೆ.

ಮಾರ್ಚ್ ಒಂದನೇ ತಾರೀಕಿಗೆ 15 ವರ್ಷ ತುಂಬಿದವರಿಗೆ ಮಾತ್ರ ಅವಕಾಶ ಇರುತ್ತದೆ. ಮಾಹಿತಿ ಹಕ್ಕು ಕಾಯಿದೆ ಅಡಿ ಐದು ವರ್ಷ 10 ತಿಂಗಳು ತುಂಬಿದ ಮಗು ಶಾಲೆಗೆ ಸೇರಲು ಅವಕಾಶವಿತ್ತು, ಅದಾದ ನಂತರ ಪರಿಷ್ಕೃತ ಕಾಯಿದೆಯಲ್ಲಿ 5 ವರ್ಷ 5 ತಿಂಗಳು ತುಂಬಿದ ಮಕ್ಕಳಿಗೆ 1ನೇ ತರಗತಿಗೆ ಸೇರಲು ಅವಕಾಶ ಕಲ್ಪಿಸಲಾಗಿತ್ತು.

Students Can Write SSLC Only After Turning 15

ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಗೊಂದಲ ಆಗದಿರಲಿ ಎಂಬ ಕಾರಣಕ್ಕೆ 15 ವರ್ಷ ತುಂಬಿದವರು 10ನೇ ತರಗತಿ ಪರೀಕ್ಷೆ ಬರೆಯಬಹುದು ಎಂಬ ಹೊಸ ನಿಯಮ ಜಾರಿಗೆ ತರಲಾಗಿದೆ.

ಈ ಮೊದಲು 15 ವರ್ಷಕ್ಕೆ ಕಾಲಿಟ್ಟ ಯಾವುದೇ ಅಭ್ಯರ್ಥಿ ಖಾಸಗಿಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿತ್ತು. ಆದರೆ ಸಾಮಾನ್ಯ ವಿದ್ಯಾರ್ಥಿಗಳು ಆ ಸಂದರ್ಭದಲ್ಲಿ ಪೂರ್ಣಗೊಳಿಸಿರುತ್ತಾರೆ. ಇದರಿಂದಾಗಿ ಖಾಸಗಿ ಅಭ್ಯರ್ಥಿಗಳು ಹಾಗೂ ಸಾಮಾನ್ಯ ವಿದ್ಯಾರ್ಥಿಗಳ ನಡುವೆ ವಯಸ್ಸಿನ ಅಂತರವಿರುತ್ತಿತ್ತು.

ಈ ನಿಯಮ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬಂದಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+