ಕೋರ್ಟ್ ಕಲಾಪದ ವೇಳೆ ವಿದ್ಯಾರ್ಥಿಗಳ ಚಾಟಿಂಗ್: ಸಿಜೆ ಗರಂ

ಬೆಂಗಳೂರು, ಜನವರಿ 11; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಹೈಕೋರ್ಟ್ ಕಲಾಪವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸುವಾಗ ಅನಗತ್ಯ 'ಚಾಟಿಂಗ್' ಮಾಡಿದಕ್ಕೆ ಸಿಜೆ ಪಿ. ಬಿ. ವರಲೆ ಕಿಡಿ ಕಾರಿದ್ದಾರೆ. ಅಲ್ಲದೆ, ಅವರು, ಕೋರ್ಟ್ ವಿಚಾರಣೆ ವೇಳೆ ವಿದ್ಯಾರ್ಥಿಗಳು ಸಭ್ಯತೆ ಕಾಯ್ದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.

2022ನೇ ಸಾಲಿನಲ್ಲಿ ನಡೆದ ಎಂಬಿಬಿಎಸ್ ಪದವಿ ಪರೀಕ್ಷೆಯ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಆರ್‌ಜಿಯುಎಚ್‌ಎಸ್ ಸಲ್ಲಿಸಿದ್ದ ತಕರಾರು ಮೇಲ್ಮನವಿಯು ಸಿಜೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು.

ಮಕರ ಸಂಕ್ರಾಂತಿ ವಿಶೇಷ ಪುಟ

ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ಪ್ರಸಾರ ಮಾಡಲಾಗುತ್ತಿತ್ತು. ಹಲವು ವಿದ್ಯಾರ್ಥಿಗಳು ಜ್ಯೂಮ್ ಆ್ಯಪ್ ಮೂಲಕ ನ್ಯಾಯಾಲಯದ ಕಲಾಪವನ್ನು ವೀಕ್ಷಿಸುತ್ತಾ, ಅತ್ಯಂತ ಕಾತುರದಿಂದ ಮೇಲ್ಮನವಿಯ ವಿಚಾರಣೆಗೆ ಕಾಯುತ್ತಿದ್ದರು.

Students Chating While Online Court Hearing CJ Upset

ಈ ವೇಳೆ ಆಡಿಯೋ ಮ್ಯೂಟ್ ಮಾಡಿಕೊಳ್ಳದೇ ಮಾತನಾಡುತ್ತಿದ್ದರು. ಆಗ ಕೋರ್ಟ್ ಅಧಿಕಾರಿಯು ಆಡಿಯೋ ಮ್ಯೂಟ್ ಮಾಡಿಕೊಳ್ಳುವಂತೆ ಹಲವು ಬಾರಿ ವಿದ್ಯಾರ್ಥಿಗಳ ಗಮನಕ್ಕೆ ತಂದರು.

ನಂತರ ವಿದ್ಯಾರ್ಥಿಗಳು, 'ಯಾವಾಗ ನಮ್ಮ ಪ್ರಕರಣ ವಿಚಾರಣೆಗೆ ಬರುತ್ತದೆ', 'ಸದ್ಯ ಯಾವ ಪ್ರಕರಣ ವಿಚಾರಣೆ ನಡೆಯುತ್ತಿದೆ', 'ಒಂದು ಪ್ರಕರಣದ ವಿಚಾರಣೆ ಮುಗಿಸಲು ಎಷ್ಟು ಸಮಯ ಬೇಕಾಗುತ್ತದೆ?' ಎಂದು ಕೆಲ ವಿದ್ಯಾರ್ಥಿಗಳೂ ಚಾಟ್ ಭಾಗದಲ್ಲಿ ಸಂದೇಶ ಕಳುಹಿಸುತ್ತಿದ್ದರು. ಅದಕ್ಕೆ ಮತ್ತೊಂದಷ್ಟು ವಿದ್ಯಾರ್ಥಿಗಳು ಕಾಮೆಂಟ್ ಮಾಡುತ್ತಿದ್ದರು. ಇದು ಇತರರಿಗೆ ಕಿರಿಕಿರಿ ಉಂಟು ಮಾಡುತ್ತಿತ್ತು.

ಇದರಿಂದ ಬೇಸತ್ತ ಕೋರ್ಟ್ ಅಧಿಕಾರಿ, 'ವಿದ್ಯಾರ್ಥಿಗಳೇ, ನ್ಯಾಯಾಲಯದ ಮೇಲೆ ಕಾಮೆಂಟ್ ಮಾಡುವ ಮುನ್ನ ಯೋಚನೆ ಮಾಡಬೇಕು. ನೀವು ನ್ಯಾಯಾಲಯದ ಮುಂದೆ ಇದ್ದೀರ ಹೊರತು ನಿಮ್ಮ ಕಾಲೇಜಿನಲ್ಲಿ ಅಲ್ಲ' ಎಂದು ಕಟುವಾಗಿ ಉತ್ತರಿಸಿ ಎಚ್ಚರಿಸಿದರು.

ಮಧ್ಯಾಹ್ನದ ಕಲಾಪದ ವೇಳೆ ನ್ಯಾಯಪೀಠದ ಮುಂದೆ ಆರ್‌ಜಿಯುಎಚ್‌ಎಸ್ ಮೇಲ್ಮನವಿ ವಿಚಾರಣೆಗೆ ಬಂದಿತ್ತು. ಈ ವೇಳೆ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಂದೇಶ ಕಳುಹಿಸಿದ ವಿಚಾರವನ್ನು ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ಕೋರ್ಟ್ ಅಧಿಕಾರಿ ತಂದರು. ಅದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿಗಳು, ವಿದ್ಯಾರ್ಥಿಗಳ ಪರ ಹಾಜರಿದ್ದ ವಕೀಲರಲ್ಲಿ ಬೇಸರ ವ್ಯಕ್ತಪಡಿಸಿದರು.

ಅಲ್ಲದೆ, 'ಕೋರ್ಟ್ ಕಲಾಪ ವೀಕ್ಷಣೆ ಮಾಡುತ್ತಿರುವಾಗ ವಿದ್ಯಾರ್ಥಿಗಳ ಸಭ್ಯತೆಯಿಂದ ನಡೆದುಕೊಳ್ಳಬೇಕಾಗುತ್ತದೆ. ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ಹೇಗಿರುತ್ತದೆ? ಕೋರ್ಟ್ ಶಿಷ್ಟಾಚಾರವೇನು? ಕೋರ್ಟ್ ಮುಂದೆ ಇರುವಾಗ ಹೇಗೆ ವರ್ತಿಸಬೇಕು? ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಕಾಲೇಜಿನಲ್ಲಿ ವರ್ತಿಸಿದಂತೆ ನ್ಯಾಯಾಲಯದ ಮುಂದೆ ನಡೆದುಕೊಳ್ಳಬಾರದು. ಬಹಳ ಎಚ್ಚರದಿಂದ ಇರಬೇಕಾಗುತ್ತದೆ' ಎಂದು ಮೌಖಿಕವಾಗಿ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+